• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉತ್ತರ ಪ್ರದೇಶ ಕೊರೊನಾ ದಾಖಲೆ; ಭಾನುವಾರ ಲಾಕ್‌ಡೌನ್!

|

ಲಕ್ನೋ, ಏಪ್ರಿಲ್ 18: ಉತ್ತರ ಪ್ರದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಆರಂಭವಾದ ದಿನದಿಂದ ಮೊದಲ ಬಾರಿಗೆ ಅತಿಹೆಚ್ಚು ಸೋಂಕಿತ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿವೆ.
ಒಂದೇ ದಿನ 30596 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 851620ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 127 ಮಂದಿ ಕೊರೊನಾವೈರಸ್ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 9830ಕ್ಕೆ ಏರಿಕೆಯಾಗಿದೆ. ಲಕ್ನೋದಲ್ಲಿ 22, ಪ್ರಯಾಗ್ ರಾಜ್ ಮತ್ತು ವಾರಣಾಸಿಯಲ್ಲಿ 10 ಸೋಂಕಿತರು ಪ್ರಾಣ ಬಿಟ್ಟಿದ್ದಾರೆ.

Explainer: ಕೊರೊನಾವೈರಸ್ ಅಲೆಗಳ ಆಯುಷ್ಯದ ಮೇಲೆ ಭಾರತದ ಭವಿಷ್ಯ!?
ಉತ್ತರ ಪ್ರದೇಶದಲ್ಲಿ ಒಂದು ದಿನದಲ್ಲಿ 9041 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 650333 ಜನರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 191457 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಪ್ರತಿ ಭಾನುವಾರ ಉತ್ತರ ಪ್ರದೇಶ ಲಾಕ್‌ಡೌನ್:
ರಾಜ್ಯದಲ್ಲಿ ಪ್ರತಿನಿತ್ಯ ದಾಖಲೆ ಪ್ರಮಾಣದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಭಾನುವಾರ ಲಾಕ್‌ಡೌನ್ ಜಾರಿಗೊಳಿಸುವುದಕ್ಕೆ ಸರ್ಕಾರ ತೀರ್ಮಾನಿಸಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಲಾಕ್‌ಡೌನ್ ಜಾರಿಗೆ ಬರಲಿದ್ದು, ಅಗತ್ಯ ಸೇವೆಗಳು ಮಾತ್ರ ಲಭ್ಯವಿರಲಿದೆ. ಉಳಿದಂತೆ ಎಲ್ಲ ಅಂಗಡಿ ಮುಂಗಟ್ಟು ಮತ್ತು ಸೇವೆಗಳನ್ನು ಬಂದ್ ಮಾಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಎರಡನೇ ಬಾರಿ ಮಾಸ್ಕ್ ಹಾಕದೇ ಸಿಕ್ಕಿ ಬಿದ್ದರೆ 10 ಸಾವಿರ ದಂಡ:
ಉತ್ತರ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಇರುವವರಿಗೆ 1 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು. ಅದೇ ವ್ಯಕ್ತಿ ಮಾಸ್ಕ್ ಧರಿಸದೇ ಎರಡನೇ ಬಾರಿ ಸಿಕ್ಕಿ ಬಿದ್ದರೆ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಸಿದೆ.

English summary
68631 New Coronavirus Cases Reported in Uttar Pradesh in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X