ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಂದಿ ಹೃದಯಭಾಗ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳು ಹಿಂದಿಯಲ್ಲೇ ಫೇಲ್

|
Google Oneindia Kannada News

ಲಕ್ನೋ, ಜೂನ್ 29: ಹಿಂದಿ ಹಾರ್ಟ್‌ಲ್ಯಾಂಡ್ ಎಂದು ಕರೆಯಲ್ಪಡುವ ಉತ್ತರಪ್ರದೇಶದಲ್ಲಿ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಿಂದಿಯಲ್ಲೇ ಫೇಲ್ ಆಗಿದ್ದಾರೆ.

ಪ್ರೌಢ ಹಾಗೂ ಮಾಧ್ಯಮಿಕ ಶಾಲೆಯ ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ಸುಮಾರು 55 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾಧ್ಯಮಿಕ ಶಾಲೆ ಪರೀಕ್ಷೆಯಲ್ಲಿ ಸುಮಾರು 2 ಲಕ್ಷ 70 ಸಾವಿರ ಹಾಗೂ ಪ್ರೌಢಶಾಲೆಗಳಲ್ಲಿ 5 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.

ಇದಲ್ಲದೆ ಸುಮಾರು 2.39 ಲಕ್ಷ ವಿದ್ಯಾರ್ಥಿಗಳು ಹಿಂದಿ ಪರೀಕ್ಷೆಗೆ ಹಾಜರಾಗೇ ಇಲ್ಲ.ಹಿಂದಿ ಮಾತೃಭಾಷೆ ಹೊಂದಿರುವ ರಾಜ್ಯದಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಶಿಕ್ಷಣ ತಜ್ಞರ ಆಕ್ರೋಶಕ್ಕೆ ಕಾರಣವಾಗಿದೆ.

exam

ಶಿಕ್ಷಕರು ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದಲೇ ಈ ಫಲಿತಾಂಶ ಬಂದಿದೆ ಎಂದು ಶಿಕ್ಷಣ ತಜ್ಞರು ಆರೋಪಿಸಿದ್ದಾರೆ.

ಆದರೆ ಸರ್ಕಾರ ಈ ಬಗ್ಗೆ ಭಿನ್ನ ಉತ್ತರವನ್ನು ಹೊಂದಿದೆ.ಪಾಲಕರು ಅತಿಯಾಗಿ ಇಂಗ್ಲಿಷ್‌ನತ್ತ ಒಲವು ಹೊಂದುತ್ತಿದ್ದಾರೆ. ಮನೆಯಲ್ಲಿ ಹಿಂದಿಯನ್ನು ಮಾತನಾಡಲು ಬಿಡುತ್ತಿಲ್ಲ, ಹಿಂದಿಯತ್ತ ಅತ್ಯಂತ ನಿರ್ಲಕ್ಷ್ಯ ತೋರಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಹಿಂದಿಯತ್ತ ಒಲವು ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಸಾಕಷ್ಟು ವಿದ್ಯಾರ್ಥಿಗಳು ಹಿಂದಿ ಪರೀಕ್ಷೆಗೆ ಹಾಜರಾಗುತ್ತಿಲ್ಲ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಕ್ವಾರಂಟೈನ್‌ನಲ್ಲಿ; ಸಚಿವರ ಸ್ಪಷ್ಟನೆಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಕ್ವಾರಂಟೈನ್‌ನಲ್ಲಿ; ಸಚಿವರ ಸ್ಪಷ್ಟನೆ

ಈ ಬಗ್ಗೆ ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಪರಿಹಾರ ಕ್ರಮವನ್ನು ನೋಡಲಾಗುತ್ತಿದೆ ಎಂದು ರಾಜ್ಯ ಪರೀಕ್ಷಾ ಮಂಡಳಿ ತಿಳಿಸಿದೆ. 2019ರಲ್ಲಿ 10 ಲಕ್ಷ ವಿದ್ಯಾರ್ಥಿಗಳು ಹಿಂದಿಯಲ್ಲಿ ಅನುತ್ತೀರ್ಣರಾಗಿದ್ದರು, ಅದಕ್ಕೆ ಹೋಲಿಸಿದರೆ ಈ ಬಾರಿ ಸಂಖ್ಯೆ ಕೊಂಚ ಕಡಿಮೆಯಾಗಿದೆ.

English summary
Eight lakh students failed in Hindi examination in Uttar Pradesh board exams, the results of which were announced on Saturday. Around 2.70 lakh students of Class 12th and 5.28 lakh students of Class 10th failed in their Hindi paper, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X