ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಬಿಪಿ ನ್ಯೂಸ್ ಸಮೀಕ್ಷೆ : ಉಪ್ರದಲ್ಲಿ ಮಹಾಘಟಬಂಧನ್ ಆದರೆ ಎನ್ಡಿಎಗೆ ಸಂಕಷ್ಟ

|
Google Oneindia Kannada News

ನವದೆಹಲಿ, ಅಕ್ಟೋಬರ್ 04 : ಮುಂದಿನ ವರ್ಷ 2019ರ ಏಪ್ರಿಲ್ ಅಥವಾ ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಈಕ್ಷಣ ನಡೆದರೆ ಮತ್ತು ಭಾರತೀಯ ಜನತಾ ಪಕ್ಷದ ವಿರುದ್ಧ ಉತ್ತರ ಪ್ರದೇಶದಲ್ಲಿ ಉಳಿದ ಪಕ್ಷಗಳು ಒಗ್ಗಟ್ಟಾದರೆ ಎನ್ಡಿಎಗೆ ಸೋಲಾಗುವುದೆ?

ಈ ಪ್ರಶ್ನೆ ಇಟ್ಟುಕೊಂಡು ಎಬಿಪಿ ನ್ಯೂಸ್ ಮತ್ತು ಸಿವೋಟರ್ ಜಂಟಿಯಾಗಿ ನಡೆಸಿದ 'ದೇಶ್ ಕಾ ಮೂಡ್' ಚುನಾವಣಾಪೂರ್ವ ಸಮೀಕ್ಷೆ ಹಲವಾರು ಆಶ್ಚರ್ಯಕರ ಸಂಗತಿಗಳನ್ನು ಹೊರಹಾಕಿದೆ. ಕಳೆದ ಮಹಾಚುನಾವಣೆಯಲ್ಲಿ 80ರಲ್ಲಿ 71 ಕ್ಷೇತ್ರಗಳಲ್ಲಿ ಗೆದ್ದು ಜಯಭೇರಿ ಬಾರಿಸಿದ್ದ ಬಿಜೆಪಿಗೆ ಈ ಬಾರಿ ಆಘಾತಕರ ಫಲಿತಾಂಶ ಲಭಿಸಲಿದೆ.

ಎಬಿಪಿ ನ್ಯೂಸ್ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಮತ್ತೆ ಕಮಲ ಅರಳಲಿದೆ ಎಬಿಪಿ ನ್ಯೂಸ್ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಮತ್ತೆ ಕಮಲ ಅರಳಲಿದೆ

ಇದೆಲ್ಲ ಸಾಧ್ಯವಾಗುವುದು ಸಮಾಜವಾದಿ ಪಕ್ಷ, ತನ್ನ ಬದ್ಧವೈರಿ ಬಹುಜನ ಸಮಾಜವಾದಿ ಪಕ್ಷದೊಡನೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾ? ಅಥವಾ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಸ್ಪಿ ಜೊತೆ ಸೇರಿ ಹೀನಾಯ ಸೋಲು ಕಂಡಿದ್ದ ಕಾಂಗ್ರೆಸ್ ಪಕ್ಷ ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷದೊಡನೆ ಕೈಜೋಡಿಸುವುದಾ? ಎಂಬುದರ ಮೇಲೆ.

'ಕಾಂಗ್ರೆಸ್ ಮೈತ್ರಿಕೂಟ ಕನಸು ಭಗ್ನ, ಮಾಯಾವತಿಯಿಂದ ಹಿಂದೇಟು' 'ಕಾಂಗ್ರೆಸ್ ಮೈತ್ರಿಕೂಟ ಕನಸು ಭಗ್ನ, ಮಾಯಾವತಿಯಿಂದ ಹಿಂದೇಟು'

ಆದರೆ, ಈ ಎಲ್ಲ ಪರ್ಮ್ಯುಟೇಷನ್ ಕಾಂಬಿನೇಷನ್ ಗಳನ್ನು ನೋಡಿದರೆ, ಒಂದು ವೇಳೆ ಭಾರತೀಯ ಜನತಾ ಪಕ್ಷದ ವಿರೋಧಿಗಳು ಒಗ್ಗೂಡಿದರೆ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎಗೆ ಕಳೆದ ಬಾರಿಗಿಂತ ಕಡಿಮೆ ಸೀಟುಗಳು ಸಿಗುವುದು ಖಚಿತ.

ಕಾಂಗ್ರೆಸ್ಸನ್ನು ಮಹಾಘಟಬಂಧನದಿಂದ ಹೊರಗಿಟ್ಟರೆ

ಕಾಂಗ್ರೆಸ್ಸನ್ನು ಮಹಾಘಟಬಂಧನದಿಂದ ಹೊರಗಿಟ್ಟರೆ

ಒಂದು ವೇಳೆ ಮೈತ್ರಿಗೆ ಮೀನ ಮೇಷ ಎಣಿಸುತ್ತಿರುವ ಬಹುಜನ ಸಮಾಜವಾದಿ ಪಕ್ಷದ ಅಧಿನಾಯಕಿ ಮಾಯಾವತಿ ಅವರು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಜೊತೆ ಕೈಜೋಡಿಸಿ, ಕಾಂಗ್ರೆಸ್ ಪಕ್ಷವನ್ನು ಹೊರಗಿಟ್ಟರೆ ಅಥವಾ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದರೆ, ಮಹಾಘಟಬಂಧನ್ 42 ಸೀಟುಗಳನ್ನು ಗೆಲ್ಲಲಿದೆ, ಎನ್‌ಡಿಎಗೆ 36 ಮತ್ತು ಕಾಂಗ್ರೆಸ್ಸಿಗೆ ಕೇವಲ 2 ಸೀಟುಗಳು ಲಭಿಸಲಿವೆ.

ಮಾಯಾವತಿ ನಡೆಗೆ ಅಸಲಿ ಕಾರಣ ಬಿಚ್ಚಿಟ್ಟ ಕಾಂಗ್ರೆಸ್ ಮುಖಂಡಮಾಯಾವತಿ ನಡೆಗೆ ಅಸಲಿ ಕಾರಣ ಬಿಚ್ಚಿಟ್ಟ ಕಾಂಗ್ರೆಸ್ ಮುಖಂಡ

ಕಾಂಗ್ರೆಸ್, ಎಸ್ಪಿ, ಬಿಎಸ್ಪಿ ಕೈಜೋಡಿಸಿದರೆ

ಕಾಂಗ್ರೆಸ್, ಎಸ್ಪಿ, ಬಿಎಸ್ಪಿ ಕೈಜೋಡಿಸಿದರೆ

ಇದೆಲ್ಲ ತಾಪತ್ರಯವೇ ಬೇಡವೆಂದು, ಕಾಂಗ್ರೆಸ್ ಪಕ್ಷ ಎಲ್ಲ ಅಡೆತಡೆಗಳನ್ನು ನಿವಾರಿಸಿಕೊಂಡು ಬಹುಜನ ಸಮಾಜವಾದಿ ಪಕ್ಷ ಮತ್ತು ಸಮಾಜವಾದಿ ಪಕ್ಷದ ಜೊತೆ ಕೈಜೋಡಿಸಿದರೆ, ಮಹಾಘಟಬಂಧನ್ 56 ಸೀಟುಗಳನ್ನು ಗೆದ್ದು ಬಿಜೆಪಿಗೆ ಭಾರೀ ಹೊಡೆತ ನೀಡಲಿದೆ. ಕಳೆದ ಬಾರಿ 71 ಸೀಟು ಗೆದ್ದಿದ್ದ ಬಿಜೆಪಿ ನೇತೃತ್ವದ ಎನ್ಡಿಎ ಕೇವಲ 24 ಸೀಟುಗಳಿಗೆ ಸಮಾಧಾನ ಪಟ್ಟುಕೊಳ್ಳಲಿದೆ.

ಮಾಯಾವತಿ ಜೊತೆ ಮತ್ತದೇ ಮಿಸ್ಟೇಕ್ ಮಾಡುತ್ತಿರುವ ರಾಹುಲ್ ಗಾಂಧಿಮಾಯಾವತಿ ಜೊತೆ ಮತ್ತದೇ ಮಿಸ್ಟೇಕ್ ಮಾಡುತ್ತಿರುವ ರಾಹುಲ್ ಗಾಂಧಿ

ಮಾಯಾವತಿ ಏಕಾಂಗಿಯಾಗಿ ಸ್ಪರ್ಧಿಸಿದರೆ

ಮಾಯಾವತಿ ಏಕಾಂಗಿಯಾಗಿ ಸ್ಪರ್ಧಿಸಿದರೆ

ಆದರೆ, ಉತ್ತರ ಪ್ರದೇಶದಲ್ಲಿ ಮಾಯಾವತಿ ಅವರು ಈ ಎಲ್ಲ ಪಕ್ಷಗಳ ಗೊಡವೆಯೇ ಬೇಡವೆಂದು ಏಕಾಂಗಿಯಾಗಿ ಸ್ಪರ್ಧಿಸಿದರೆ ಏನಾಗಲಿದೆ? ಈ ಫಲಿತಾಂಶ ನೋಡಿದರೆ ಮಾಯಾವತಿಯವರ ಕಾಲಕೆಳಗಿನ ನೆಲ ಬಿರಿಯುವುದು ಗ್ಯಾರಂಟಿ. ಪ್ರಧಾನಿಯಾಗುವ ಕನಸು ಕಾಣುತ್ತಿರುವ ಮಹತ್ವಾಕಾಂಕ್ಷಿ ರಾಜಕಾರಣಿ ಮತ್ತು ಕಾಂಗ್ರೆಸ್ ಅನ್ನು ಎಲ್ಲ ರಾಜ್ಯಗಳಲ್ಲಿಯೂ ದೂರವಿಟ್ಟಿರುವ ಮಾಯಾವತಿ ಅವರು ಏಕಾಂಗಿಯಾಗಿ ಸ್ಪರ್ಧಿಸಿದರೆ ಒಂದೂ ಸೀಟು ಗೆಲ್ಲುವುದಿಲ್ಲ ಎನ್ನುತ್ತದೆ ಸಮೀಕ್ಷೆ. ಬಿಜೆಪಿ ನೇತೃತ್ವದ ಎನ್ಡಿಎ ಮತ್ತೆ 70 ಸೀಟುಗಳನ್ನು ಗೆಲ್ಲಲಿದೆ, ಕಾಂಗ್ರೆಸ್ 2 ಸೀಟು ಮತ್ತು ಉಳಿದ ಸೀಟುಗಳು ಇತರ ಪಕ್ಷಗಳ ಪಾಲಾಗಲಿವೆ.

ಉತ್ತರ ಪ್ರದೇಶದಲ್ಲಿ ಮಹಾಘಟಬಂಧನ್ ಆಗುವುದೆ?

ಉತ್ತರ ಪ್ರದೇಶದಲ್ಲಿ ಮಹಾಘಟಬಂಧನ್ ಆಗುವುದೆ?

ಇದೆಲ್ಲ ಫಲಿತಾಂಶವನ್ನು ನೋಡಿದರೆ, ತಮ್ಮೆಲ್ಲ ಭಿನ್ನಾಭಿಪ್ರಾಯಗಳನ್ನು, ಒಣ ಪ್ರತಿಷ್ಠೆಗಳನ್ನು ದೂರ ಮಾಡಿಕೊಂಡು ಮೈತ್ರಿ ಮಾಡಿಕೊಳ್ಳದೆ ಸಮಾಜವಾದಿ ಪಕ್ಷ, ಬಹುಜನ ಸಮಾಜವಾದಿ ಪಕ್ಷ, ಮತ್ತು ಎಲ್ಲ ರಾಜ್ಯಗಳಲ್ಲಿ ಸೋಲಿನ ವಾಸನೆ ಹಿಡಿದಿರುವ ಕಾಂಗ್ರೆಸ್ ಪಕ್ಷಗಳು, ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಗ್ಗೂಡದೆ ಬೇರೆ ದಾರಿಯೇ ಇಲ್ಲ. ಒಂದು ವೇಳೆ ಮಹಾಘಟಬಂಧನ್ ವಿಫಲವಾದರೆ ಎಲ್ಲ ಪಕ್ಷಗಳು ಮನೆದಾರಿ ಹಿಡಿಯುವುದು ಗ್ಯಾರಂಟಿ.

English summary
vaABP News Desh Ka Mood survey : Bad news for BJP in Uttar Pradesh if SP, BSP and Congress come together and form Mahaghatbandhan. If they go separately BJP will have landslide victory in Uttar Pradesh in Lok Sabha Elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X