ಸಂಸ್ಕೃತ ವಿವಿ ವಿದ್ಯಾರ್ಥಿ ಚುನಾವಣೆ: ಎಲ್ಲ ನಾಲ್ಕೂ ಸ್ಥಾನಗಳಲ್ಲಿ ಎಬಿವಿಪಿಗೆ ಸೋಲು
ವಾರಣಾಸಿ, ಜನವರಿ 9: ವಾರಣಾಸಿಯ ಸಂಪೂರ್ಣಾನಂದ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಒಕ್ಕೂಟದ ಚುನಾವಣೆಯಲ್ಲಿ ಎಲ್ಲ ನಾಲ್ಕೂ ಸೀಟುಗಳಲ್ಲಿ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಜಯಭೇರಿ ಭಾರಿಸಿದೆ. ಎನ್‌ಎಸ್‌ಯುಐ ಎದುರು ಆರೆಸ್ಸೆಸ್‌ನ ವಿದ್ಯಾರ್ಥಿ ಘಟಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸೋಲಿನ ಮುಖಭಂಗ ಅನುಭವಿಸಿದೆ.
Recommended Video
ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎನ್‌ಎಸ್‌ಯುಐನ ಶಿವಮ್ ಶುಕ್ಲಾ, ಎಬಿವಿಪಿಯ ಹರ್ಷಿತ್ ಪಾಂಡೆ ವಿರುದ್ಧ ಭಾರಿ ಅಂತರದ ಜಯಗಳಿಸಿದರು. ಚಂದನ್ ಕುಮಾರ್ ಮಿಶ್ರಾ ಉಪಾಧ್ಯಕ್ಷರಾಗಿ, ಅವಿನಾಶ್ ಪಾಂಡೆ ಪ್ರಧಾನ ಕಾರ್ಯದರ್ಶಿ ಮತ್ತು ರಜನಿಕಾಂತ್ ದುಬೆ ಗ್ರಂಥಪಾಲಕ ಹುದ್ದೆಗಳಿಗೆ ಆಯ್ಕೆಯಾದರು.
ಚುನಾವಣೆಯಲ್ಲಿ ಶಿವಮ್ ಶುಕ್ಲಾ 709 ಮತಗಳನ್ನು ಪಡೆದರೆ, ಅವರ ಎದುರಾಳಿಯಾಗಿದ್ದ ಹರ್ಷಿತ್ ಪಾಂಡೆ ಕೇವಲ 224 ಮತಗಳನ್ನು ಪಡೆದರು. ಉಪಾಧ್ಯಕ್ಷ ಚಂದನ್ ಕುಮಾರ್ ಮಿಶ್ರಾ 553 ಮತಗಳನ್ನು ಗಳಿಸಿದರು. ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಎನ್‌ಎಸ್‌ಯುಐನ ಅವಿನಾಶ್ ಪಾಂಡೆ 487 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಎಬಿವಿಪಿಯ ಗೌರವ್ ದುಬೆ 424 ಮತಗಳನ್ನು ಗಳಿಸಿದರು. ಗ್ರಂಥಪಾಲಕ ಹುದ್ದೆಗಾಗಿ ರಜನಿಕಾಂತ್ ದುಬೆ 567 ಮತ ಗಳಿಸಿದರೆ, ಅಜಯ್ ಕುಮಾರ್ ಮಿಶ್ರಾ 482 ಮತಗಳನ್ನು ಗಳಿಸಿದರು. ಅಶುತೋಷ್ ಉಪಾಧ್ಯಾಯ 227, ಶಿವ ಓಂ ಮಿಶ್ರಾ 106 ಮತ್ತು ಅರ್ಪಣ್ ತಿವಾರಿ 21 ಮತಗಳನ್ನು ಪಡೆದರು.

ವಿವಿ ಆವರಣದಲ್ಲಿ ಯಾವುದೇ ವಿವಾದ ಮತ್ತು ಗಲಾಟೆಗಳಿಗೆ ಅವಕಾಶ ನೀಡದಂತೆ ಗೆದ್ದ ಅಭ್ಯರ್ಥಿಗಳು ಸಂಭ್ರಮಾಚರಣೆಗಳನ್ನು ಮಾಡುವಂತಿಲ್ಲ ಎಂದು ಚುನಾವಣಾಧಿಕಾರಿಯಾಗಿದ್ದ ಪ್ರೊ. ಶೈಲೇಶ್ ಕುಮಾರ್ ಮಿಶ್ರಾ ಸೂಚಿಸಿದರು. ಗೆದ್ದ ಅಭ್ಯರ್ಥಿಗಳನ್ನು ಪೊಲೀಸ್ ಭದ್ರತೆಯಲ್ಲಿ ಮನೆಗೆ ಕಳುಹಿಸಿಕೊಡಲಾಯಿತು.
ವಿಶ್ವವಿದ್ಯಾಲಯದ 1950 ವಿದ್ಯಾರ್ಥಿಗಳ ಪೈಕಿ ಶೇ 50.82ರಷ್ಟು ಅಂದರೆ ಕೇವ 991 ವಿದ್ಯಾರ್ಥಿಗಳು ಮತ ಚಲಾಯಿಸಿದ್ದರು. ಇದರಲ್ಲಿ 931 ವಿದ್ಯಾರ್ಥಿಗಳು ಹಾಗೂ 60 ವಿದ್ಯಾರ್ಥಿನಿಯರು ಇದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications