ಒಂದೇ ದಿನ ರಂಜಾನ್, ಅಕ್ಷಯ ತೃತೀಯ: ಯುಪಿಯಲ್ಲಿ ಹೊಸ ಗೈಡ್‌ಲೈನ್
ಲಕ್ನೋ, ಏಪ್ರಿಲ್ 19: ಉತ್ತರ ಪ್ರದೇಶದಲ್ಲಿ ಹಾಗೂ ಅನೇಕ ಪ್ರದೇಶಗಳಲ್ಲಿ ಧಾರ್ಮಿಕ ಮೆರವಣಿಗೆ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಗಲಭೆ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನಲೆ ಯುಪಿ ಸರ್ಕಾರವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಮುಂಬರುವ ಹಬ್ಬಗಳಾದ ಅಕ್ಷಯ ತೃತೀಯ ಹಾಗೂ ಮುಸ್ಲಿಮರ ಪವಿತ್ರ ರಂಜಾನ್ ಎರಡು ಪ್ರಮುಖ ಹಬ್ಬಗಳು ಇರಲಿವೆ ಹಾಗಾಗಿ ಉದ್ವಿಗ್ನತೆಯನ್ನು ನಿಯಂತ್ರಿಸಲು ಮಾರ್ಗಸೂಚಿಗಳನ್ನು ನೀಡಲು ಮತ್ತು ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲು ಯುಪಿ ಸಿಎಂ ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ.
ಧಾರ್ಮಿಕ ಮೆರವಣಿಗೆ ನಡೆಸುವ ಮುನ್ನ ಆಯೋಜಕರು ಅಫಿಡವಿಟ್ ಸಲ್ಲಿಸುವುದು ಕಡ್ಡಾಯ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ನಿನ್ನೆ(ಸೋಮವಾರ) ತಡ ವಿಡಿಯೋ ಕಾನ್ಫರೆನ್ಸ್ ಮೂಲಕ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಯೋಗಿ, ಸಭೆ ಬಳಿಕ ಮಹತ್ವದ ನಿರ್ಧಾರ ಘೋಷಿಸಿದ್ದಾರೆ.
ರಂಜಾನ್ ಮತ್ತು ಅಕ್ಷಯ ತೃತೀಯ ಹಬ್ಬಗಳು ಒಂದೇ ದಿನ ಬರಲಿದ್ದು ಮುನ್ನೆಚ್ಚರಿಕೆ ವಹಿಸಬೇಕು ಎಂದು ಇದೇ ಸಮಯದಲ್ಲಿ ಅವರು ಹೇಳಿದ್ದಾರೆ. ದೆಹಲಿಯ ಜಾಹೀಗಿರ್‌ಪುರ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕೋಮು ಘರ್ಷಣೆ ಹೆಚ್ಚಾಗುತ್ತಿದ್ದು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಆಯೋಜಕರಿಗೆ ಧಾರ್ಮಿಕ ಮೆರವಣಿಗೆ ಅವಕಾಶ ನೀಡುವ ಮುನ್ನ ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಳ್ಳುವ ಬಗ್ಗೆ ಅಫಿಡೆವಿಟ್ ಪಡೆದುಕೊಳ್ಳಬೇಕು. ಹಿಂದಿನಿಂದ ಬಂದಿರುವ ಧಾರ್ಮಿಕ ಮೆರವಣಿಗೆಗಳಿಗೆ ಮಾತ್ರ ಅವಕಾಶ ನೀಡಬೇಕು. ಹೊಸ ಸಂಪ್ರದಾಯ ಅಥವಾ ಆಚರಣೆಗಳಿಗೆ ಅನುವು ಮಾಡಿಕೊಡಬಾರದು ಎಂದು ಇದೇ ಅವರು ತಿಳಿಸಿದ್ದಾರೆ.
ಸೌಹಾರ್ದತೆಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಿ ಮತ್ತು ನಿಗದಿತ ಸ್ಥಳದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಪೂಜೆಗಳು ನಡೆಯುವಂತೆ ನೋಡಿಕೊಳ್ಳಿ ಮತ್ತು ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳಿ, ಮುಂದಿನ 24 ಗಂಟೆಯಲ್ಲಿ ಎಲ್ಲ ಪೊಲೀಸ್ ಠಾಣೆಗಳಲ್ಲಿ ಧಾರ್ಮಿಕ ಮುಖಂಡರನ್ನು ಕರೆಸಿ ಶಾಂತಿ ಸಭೆ ನಡೆಸುವಂತೆ ಆದಿತ್ಯನಾಥ್ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ.

ಎರಡು ಪ್ರಮುಖ ಹಬ್ಬಗಳು ಘರ್ಷಣೆಯಾಗುತ್ತಿದ್ದು, ಉದ್ವಿಗ್ನತೆಯನ್ನು ನಿಯಂತ್ರಿಸಲು ಮಾರ್ಗಸೂಚಿಗಳನ್ನು ನೀಡಲು ಮತ್ತು ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲು ಯುಪಿ ಸಿಎಂ ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ.












Click it and Unblock the Notifications