ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬರೋಬ್ಬರಿ 24 ವರ್ಷದ ನಂತರ... ಮುಲಾಯಂ ಪರ ಮಾಯಾವತಿ ಪ್ರಚಾರ

|
Google Oneindia Kannada News

ಲಕ್ನೋ, ಮಾರ್ಚ್ 16: ಬರೋಬ್ಬರಿ 24 ವರ್ಷಗಳ ನಂತರ ಬಿಎಸ್ಪಿ ನಾಯಕಿ ಮಾಯಾವತಿ ಅವರು ಎಸ್ಪಿ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಪರವಾಗಿ ಉತ್ತರ ಪ್ರದೇಶದ ಮೈನ್ಪುರಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

ಏಪ್ರಿಲ್ 19 ರಂದು ಮೈನ್ಪುರಿಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಇದರಲ್ಲಿ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ರಾಷ್ಟ್ರೀಯ ಲೋಕದಳದ ಅಧ್ಯಕ್ಷ ಅಜಿತ್ ಸಿಂಗ್ ಭಾಗವಹಿಸಲಿದ್ದಾರೆ.

ಬಿಎಸ್‌ಪಿ, ಎಸ್‌ಪಿ ಚುನಾವಣೆಯಲ್ಲಿ ಮಾತ್ರವಲ್ಲ, ಧ್ವಜದಲ್ಲೂ ಮೈತ್ರಿ!ಬಿಎಸ್‌ಪಿ, ಎಸ್‌ಪಿ ಚುನಾವಣೆಯಲ್ಲಿ ಮಾತ್ರವಲ್ಲ, ಧ್ವಜದಲ್ಲೂ ಮೈತ್ರಿ!

1995 ರಲ್ಲಿ ಮುಲಾಯಂ ಸಿಂಗ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಮಾಯಾವತಿ, ಅದಾದ ನಂತರ ಇದೇ ಮೊದಲ ಬಾರಿಗೆ ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ.

After 24 years Mayawati to campaign for Mulayam Singh Yadav in Mainpuri

ಉತ್ತರ ಪ್ರದೇಶದ ಒಟ್ಟು 80 ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷ 37 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಬಿಎಸ್ಪಿ 38 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ.

ಪ್ರಿಯಾಂಕಾ ದಲಿತ ರಾಜಕೀಯಕ್ಕೆ ಕಂಗಾಲಾದ ಮಾಯಾವತಿ, ಅಖಿಲೇಶ್ ಪ್ರಿಯಾಂಕಾ ದಲಿತ ರಾಜಕೀಯಕ್ಕೆ ಕಂಗಾಲಾದ ಮಾಯಾವತಿ, ಅಖಿಲೇಶ್

ಲೋಕಸಭಾ ಚುನಾವಣೆ ಏಪ್ರಿಲ್ 11 ಹಾಗೂ ಮೇ 19ರ ಮಧ್ಯೆ ಏಳು ಹಂತಗಳಲ್ಲಿ ನಡೆಯಲಿದ್ದು, ಮೇ 23ರಂದು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯ ಬಗ್ಗೆ ಅಂಕಿ- ಅಂಶಗಳು ಇಲ್ಲಿವೆ.

English summary
Lok Sabha elections 2019: Dalit icon Mayawati will campaign for SP founder Mulayam Singh Yadav at an election rally in Mainpuri, Uttar Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X