ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಬರಿ ಮಸೀದಿ ಧ್ವಂಸ ದಿನ: ಮಥುರಾದಲ್ಲಿ ಭಿಗಿ ಭದ್ರತೆ

|
Google Oneindia Kannada News

ಮಥುರಾ, ಡಿಸೆಂಬರ್‌ 05: ಡಿಸೆಂಬರ್‌ 6 ರಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣ ನಡೆದ ದಿನವಾಗಿದ್ದು, ಈ ಹಿನ್ನೆಲೆಯಿಂದಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಥುರಾದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. 1992 ರ ಡಿಸೆಂಬರ್‌ 6 ರಂದು ಬಾಬ್ರಿ ಮಸೀದಿ ಧ್ವಂಸ ಮಾಡಲಾಗಿದೆ.

ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿದ ದಿನದಂದೇ ಅಖಿಲ ಭಾರತ ಹಿಂದೂ ಮಹಾಸಭಾ, ಶ್ರೀಕೃಷ್ಣ ಜನ್ಮಭೂಮಿ ನಿರ್ಮಾಣ ನ್ಯಾಸ್, ನಾರಾಯಣಿ ಸೇನೆ ಮತ್ತು ಶ್ರೀಕೃಷ್ಣ ಮುಕ್ತಿ ದಳ ಎಂಬ ನಾಲ್ಕು ಬಲಪಂಥೀಯ ಗುಂಪುಗಳು ಕಾರ್ಯಕ್ರಮವನ್ನು ನಡೆಸಲು ಅನುಮತಿ ಕೋರಿದ್ದವು. ಇನ್ನು ಅಖಿಲ ಭಾರತ ಹಿಂದೂ ಮಹಾಸಭಾವು ಈದ್ಗಾ ಶ್ರೀ ಕೃಷ್ಣ ದೇವರ ನಿಜವಾದ ಜನ್ಮಸ್ಥಳ ಎಂದು ಹೇಳಿ, ಅಲ್ಲಿ ಕೃಷ್ಣನ ವಿಗ್ರಹವನ್ನು ಸ್ಥಾಪನೆ ಮಾಡಲು ಅನುಮತಿ ಕೋರಿದ್ದವು.

ಅಯೋಧ್ಯಾದಲ್ಲಿ ಮಸೀದಿ: ಟ್ರಸ್ಟಿಗೆ ಸರ್ಕಾರಿ ನಾಮನಿರ್ದೇಶನದ ಮನವಿ ತಿರಸ್ಕೃತಅಯೋಧ್ಯಾದಲ್ಲಿ ಮಸೀದಿ: ಟ್ರಸ್ಟಿಗೆ ಸರ್ಕಾರಿ ನಾಮನಿರ್ದೇಶನದ ಮನವಿ ತಿರಸ್ಕೃತ

ಆದರೆ ಶಾಂತಿ ಕದಡುವ ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಮ್ಯಾಜಿಸ್ಟ್ರೇಟ್ ನವನೀತ್ ಸಿಂಗ್ ಚಾಹಲ್ ಈ ಕಾರ್ಯಕ್ರಮಗಳಿಗೆ ಅವಕಾಶ ನೀಡಲು ನಿರಾಕರಿಸಿದ್ದಾರೆ. ಇನ್ನು ಕೆಲವು ಗುಂಪುಗಳು ಈ ಪ್ರದೇಶವನ್ನು ಪವಿತ್ರ ಮಾಡುವ ನಿಟ್ಟಿನಲ್ಲಿ ಮಹಾ ಜಲಭಿಷೇಕ ನಡೆಸಿ ಶಾಹಿ ಇದ್ಗಾದಲ್ಲಿ ಕೃಷ್ಣನ ಮೂರ್ತಿಯನ್ನು ಸ್ಥಾಪನೆ ಮಾಡುತ್ತೇವೆ ಎಂದು ಹೇಳಿಕೊಂಡಿದೆ.

Ahead Of Babri Masjid Demolition Anniversary, Security Tightened In Mathura

ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಿಂದಾಗಿ ಮಥುರಾದಲ್ಲಿ ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿದ ದಿನದ ಮೊದಲ ದಿನವೇ ಭದ್ರತೆಯನ್ನು ಬಿಗಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕತ್ರಾ ಕೇಶವ್ ದೇವ್ ದೇವಸ್ಥಾನ ಮತ್ತು ಶಾಹಿ ಈದ್ಗಾ ಪ್ರದೇಶವನ್ನು ರೆಡ್‌ ಝೋನ್‌ ಪ್ರದೇಶ ಎಂದು ಗುರುತಿಸಲಾಗಿದೆ. ಈ ಪ್ರದೇಶಲ್ಲಿ ಪೊಲೀಸ್‌ ಭದ್ರತೆಯನ್ನು ಬಿಗಿ ಮಾಡಲಾಗಿದೆ.

ಮಥುರಾದಲ್ಲಿ ನಿಷೇಧಾಜ್ಞೆ ಜಾರಿ

"ಎಲ್ಲಾ ಗಡಿ ಪ್ರದೇಶದಲ್ಲಿ ಪೊಲೀಸ್‌ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ," ಎಂದು ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ಗೌರವ್‌ ಗ್ರೋವೆರ್‌ ಹೇಳಿದ್ದಾರೆ. "ಈ ಗಡಿ ಭಾಗದಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ," ಎಂದು ಹೇಳಿದ್ದಾರೆ. ಮಥುರಾದಲ್ಲಿ 144 ಸೆಕ್ಷನ್‌ ಅನ್ನು ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೆ ತರಲಾಗಿದೆ. ಈ 144 ಸೆಕ್ಷನ್‌ ಹಿನ್ನೆಲೆಯಿಂದಾಗಿ ಒಂದು ಪ್ರದೇಶದಲ್ಲಿ ನಾಲ್ಕು ಅಥವಾ ಅದಕ್ಕಿಂತ ಅಧಿಕ ಮಂದಿ ಗುಂಪು ಸೇರಲು ಅವಕಾಶ ಇಲ್ಲ.

 ಬಾಬ್ರಿ ಮಸೀದಿ ಧ್ವಂಸ ಕೇಸ್ ತೀರ್ಪಿತ್ತ ಜಡ್ಜ್ ಯಾದವರಿಗೆ ಭದ್ರತೆ ಇಲ್ಲ! ಬಾಬ್ರಿ ಮಸೀದಿ ಧ್ವಂಸ ಕೇಸ್ ತೀರ್ಪಿತ್ತ ಜಡ್ಜ್ ಯಾದವರಿಗೆ ಭದ್ರತೆ ಇಲ್ಲ!

ಇನ್ನು ಈ ಬಗ್ಗೆ ಮಾತನಾಡಿದ ಶಾಹಿ ಈದ್ಗಾ ಸಮಿತಿಯ ಅಧ್ಯಕ್ಷ ಪ್ರಾಧ್ಯಾಪಕ ಝಡ್ ಹಸನ್, "ನಾನು ಸುಮಾರು 50 ವರ್ಷಗಳಿಂದ ಮಥುರಾದಲ್ಲಿ ವಾಸಿಸುತ್ತಿದ್ದೇನೆ. ಈ ಪ್ರದೇಶದಲ್ಲಿ ಯಾವಾಗಲೂ ಸೌಹಾರ್ದ ವಾತಾವರಣ ಇದೆ ಹಾಗೂ ಎಲ್ಲರೂ ಪ್ರೀತಿಯಿಂದ ಇದ್ದಾರೆ. ಮಸೀದಿಯನ್ನು ಸ್ಥಳಾಂತರಿಸುವಂತೆ ಕೋರಿ ಹೂಡಿರುವ ಮೊಕದ್ದಮೆಗಳು ನ್ಯಾಯಾಲಯದಲ್ಲಿ ಬಾಕಿ ಉಳಿದಿದೆ. ನಾವು ನ್ಯಾಯಾಲಯದ ತೀರ್ಪಿಗೆ ಗೌರವ ನೀಡುತ್ತೇವೆ," ತಿಳಿಸಿದ್ದಾರೆ.

ಟ್ರಸ್ಟಿಗೆ ಸರ್ಕಾರಿ ನಾಮನಿರ್ದೇಶನದ ಮನವಿ ತಿರಸ್ಕೃತ

ಈ ನಡುವೆ ಅಯೋಧ್ಯಾದಲ್ಲಿ ಮಸೀದಿ ನಿರ್ಮಿಸುವ ಕಾರ್ಯಕ್ಕಾಗಿ ರಚಿಸಲಾಗಿರುವ 'ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್' ಟ್ರಸ್ಟ್‌ನಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳನ್ನು ನಾಮನಿರ್ದೇಶನ ಮಾಡುವಂತೆ ಸೂಚನೆ ನೀಡಬೇಕೆಂಬ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಅಯೋಧ್ಯಾದಲ್ಲಿನ ವಿವಾದಿತ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ನೀಡಿ 2019ರ ನವೆಂಬರ್ 9ರಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಹಾಗೆಯೇ ಉತ್ತರ ಪ್ರದೇಶದ ಪಟ್ಟಣವೊಂದರ ಸೂಕ್ತ ಸ್ಥಳದಲ್ಲಿ ಹೊಸ ಮಸೀದಿ ನಿರ್ಮಿಸಲು ಸುನ್ನಿ ವಕ್ಫ್ ಮಂಡಳಿಗೆ ಪರ್ಯಾಯವಾಗಿ ಐದು ಎಕರೆ ಜಾಗ ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇಬ್ಬರು ವಕೀಲರು ಈ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ. ಖಾಸಗಿ ವ್ಯಕ್ತಿಗಳು ಮತ್ತು ರಾಜ್ಯ ಸುನ್ನಿ ವಕ್ಫ್ ಮಂಡಳಿಯ ಸದಸ್ಯರಲ್ಲದೆ ಹಣಕಾಸಿನ ಸೂಕ್ತ ನಿರ್ವಹಣೆಯನ್ನು ಖಾತರಿಪಡಿಸಿಕೊಳ್ಳಲು ಟ್ರಸ್ಟ್‌ನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರತಿನಿಧಿಗಳು ಕೂಡ ಇರಬೇಕು ಎಂದು ಅವರು ಹೇಳಿದ್ದರು.

Recommended Video

Omicron Alert : ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾದ ಸೌತ್ ಆಫ್ರಿಕಾದ‌ 10 ಮಂದಿ | Oneindia Kannada

English summary
Ahead Of Babri Masjid Demolition Anniversary, Security Tightened In Mathura.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X