• search
 • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಮ್ಮ ಸರ್ಕಾರ ನಿರ್ಮಿಸಿದ ಕ್ರೀಡಾಂಗಣದಲ್ಲಿ ಯೋಗಿ ಪ್ರಮಾಣ ವಚನ: ಯುಪಿ ಸರ್ಕಾರಕ್ಕೆ ಅಭಿನಂದಿಸಿದ ಅಖಿಲೇಶ್

|
Google Oneindia Kannada News

ಲಕ್ನೋ, ಮಾರ್ಚ್ 25: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಹೊಸ ಬಿಜೆಪಿ ಸರ್ಕಾರದ ವಿರುದ್ಧ ವ್ಯಂಗ್ಯವಾಡುತ್ತಾ ಅಭಿನಂದನೆ ತಿಳಿಸಿದ್ದಾರೆ. ಸಮಾಜವಾದಿ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದಾಗ ನಿರ್ಮಿಸಿದ ಕ್ರೀಡಾಂಗಣದಲ್ಲಿ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ನಿಮಗೆ ಅಭಿನಂದನೆ ಎಂದು ಯೋಗಿ ಸರ್ಕಾರಕ್ಕೆ ಟಾಂಗ್‌ ನೀಡಿದ್ದಾರೆ.

ಸಮಾಜವಾದ ಪಕ್ಷ ನಿರ್ಮಾಣ ಮಾಡಿದ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹೊಸ ಸರ್ಕಾರಕ್ಕೆ ಅಭಿನಂದನೆಗಳು. ಸರ್ಕಾರ ರಚಿಸಲು ಮಾತ್ರ ಪ್ರಮಾಣ ವಚನ ಸ್ವೀಕರಿಸಬಾರದು, ಆದರೆ ಜನರಿಗೆ ನಿಜವಾದ ಸೇವೆಯನ್ನು ಒದಗಿಸಬೇಕು," ಎಂದು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

2024 election: ಅಖಿಲೇಶ್ ಯಾದವ್ ರಾಜೀನಾಮೆ ಹಿಂದಿನ ರಹಸ್ಯವೇನು?2024 election: ಅಖಿಲೇಶ್ ಯಾದವ್ ರಾಜೀನಾಮೆ ಹಿಂದಿನ ರಹಸ್ಯವೇನು?

ಇತ್ತೀಚೆಗೆ ನಡೆದ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಈ ವಿಜಯದ ನಂತರ ಯೋಗಿ ಆದಿತ್ಯನಾಥ್ ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಯೋಗಿ ಆದಿತ್ಯನಾಥ್ ಅವರ ಎರಡನೇ ಅವಧಿಗೆ ಯುಪಿ ಸಿಎಂ ಆಗಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದ 2.0 ರ ಅದ್ಧೂರಿ ಪ್ರಮಾಣ ವಚನ ಸಮಾರಂಭ ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆದಿದೆ.

ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಅವರು ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಈ ವಾರದ ಆರಂಭದಲ್ಲಿ, ಅಖಿಲೇಶ್‌ ಯಾದವ್‌ ಉತ್ತರ ಪ್ರದೇಶ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ನಂತರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದರು. ಅಖಿಲೇಶ್ ಗೆದ್ದ ಕರ್ಹಾಲ್ ವಿಧಾನಸಭಾ ಕ್ಷೇತ್ರ ಅವರ ತಂದೆ ಮುಲಾಯಂ ಸಿಂಗ್ ಯಾದವ್ ಅವರ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಭಾಗವಾಗಿದೆ. ಅದನ್ನು ಎಸ್‌ಪಿಯ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ಕರ್ಹಾಲ್‌ನಿಂದ ಶಾಸಕರಾಗಿ ಮುಂದುವರಿಯಲು ಅಜಮ್‌ಗಢದ ಲೋಕಸಭಾ ಸಂಸದ ಸ್ಥಾನಕ್ಕೆ ಅಖಿಲೇಶ್ ಯಾದವ್ ರಾಜೀನಾಮೆ ನೀಡಿದ್ದಾರೆ.

ಯಾದವ್ ಅವರ ಪ್ರಮುಖ ಎದುರಾಳಿ ರಾಜ್ಯ ಚುನಾವಣೆ, ಆದಿತ್ಯನಾಥ್ ಗುರುವಾರ ಉತ್ತರ ಪ್ರದೇಶದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದರು, ನಂತರ ಅವರು ಸರ್ಕಾರ ರಚಿಸಲು ಹಕ್ಕು ಮಂಡಿಸಿದರು ಮತ್ತು ನಂತರ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಯಾರೆಲ್ಲಾ ಭಾಗಿ?

ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಲವಾರು ಕೇಂದ್ರ ಸಚಿವರು ಉಪಸ್ಥಿತರಿದ್ದರು. ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪಕ್ಷದ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ರಾಜ್ಯದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಯೋಗಿ ಆದಿತ್ಯನಾಥ್ ಮತ್ತು ಅವರ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಸುಮಾರು 70 ಸಾವಿರ ಜನರು ಉಪಸ್ಥಿತರಿದ್ದಾರೆ. ಯೋಗಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವ ಎಲ್ಲ ಸಚಿವರಿಗೂ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಆಹ್ವಾನಿತರನ್ನು ಕ್ರೀಡಾಂಗಣದ ಮುಖ್ಯ ಮೈದಾನದಲ್ಲಿ ಕೂರಿಸಲಾಗಿತ್ತು.

   ಕಾಲಿಗೆ ಒಂಚೂರು ಕೆಸರು ತಾಕಿಸಿಕೊಳ್ಳದೆ ರಸ್ತೆ ದಾಟ್ಬೇಕಾ? ಹಾಗಾದ್ರೆ ಈ ವಿಡಿಯೋ ನೋಡಿ | Oneindia Kannada

   ಉತ್ತರ ಪ್ರದೇಶದಲ್ಲಿ ಬಿಜೆಪಿ 255 ಸ್ಥಾನಗಳನ್ನು ಗೆದ್ದುಕೊಂಡಿದ್ದು, ರಾಜ್ಯದಲ್ಲಿ ತನ್ನ ಮಿತ್ರಪಕ್ಷಗಳು ಸಹ ಪ್ರಭಾವಿ ಪ್ರದರ್ಶನವನ್ನು ದಾಖಲಿಸಿವೆ. ಉಪಮುಖ್ಯಮಂತ್ರಿಗಳಾಗಿ ಕೇಶವ್ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮಾ ಹಾಗೂ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ತರಾಖಂಡದ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೇಬಿ ರಾಣಿ ಮೌರ್ಯ ಅವರು ಎರಡು ಹುದ್ದೆಗಳನ್ನು ಅಲಂಕರಿಸಿದ್ದಾರೆ.

   English summary
   UP Assembly Elections 2022: Akhilesh Yadav congratulates new UP govt for taking oath at SP built stadium.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X