ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಗೆ ಕೈಚಾಚಿದ ಎಸ್ಪಿ
Recommended Video

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಗೆ ಕೈಚಾಚಿದ ಎಸ್ಪಿ..! | Oneindia Kannada
ಲಕ್ನೋ, ನವೆಂಬರ್ 21: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಜೊತೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳೋಲ್ಲ ಎಂದಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಯೂಟರ್ನ್ ತೆಗೆದುಕೊಂಡಿದ್ದಾರೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆಲ್ಲಲು ನಮ್ಮೊಂದಿಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಈಗಲೂ ಅವಕಾಶವಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.
"ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡರೆ ಕಾಂಗ್ರೆಸ್ 200(230) ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿದೆ" ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

"ಈಗಲೂ ಕಾಲ ಮಿಂಚಿಲ್ಲ. ಕಾಂಗ್ರೆಸ್ ನಮ್ಮೊಂದಿಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಅವಕಾಶವಿದೆ" ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಯಾದವ್ ಹೇಳಿದ್ದಾರೆ.
ಆದರೆ ಕಾಂಗ್ರೆಸ್ ಜೊತೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಈಗಾಗಲೇ ಬಿಎಸ್ಪಿ ಸ್ಪಷ್ಟಪಡಿಸಿದೆ.












Click it and Unblock the Notifications