ಅಲ್ ಖೈದಾ ಸಂಚು ವಿಫಲ, ಯುಪಿಯಲ್ಲಿ ಹೈ ಅಲರ್ಟ್ ಘೋಷಣೆ
ಲಕ್ನೋ, ಜುಲೈ 11: ಲಕ್ನೋದಲ್ಲಿ ಭಾರಿ ಸ್ಫೋಟಕ್ಕೆ ಯತ್ನಿಸಿದ್ದ ಅಲ್ ಖೈದಾ ಉಗ್ರ ಸಂಘಟನೆಯ ಸಂಚು ವಿಫಲವಾಗಿದೆ. ಉತ್ತರ ಪ್ರದೇಶದ ಉಗ್ರ ನಿಗ್ರಹ ದಳ(ಎಟಿಎಸ್)ದ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಸಜೀವ ಬಾಂಬ್ ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಿದ್ದಾರೆ. ಜೊತೆಗೆ ಸರಣಿ ಆತ್ಮಹತ್ಯಾ ದಾಳಿಗೆ ಮುಂದಾಗಿದ್ದ ಉಗ್ರ ಪಡೆಯ ಜಾಲದ ಕೊಂಡಿಯನ್ನು ಕತ್ತರಿಸಿದ್ದಾರೆ.
ಲಕ್ನೋದ ಜನನಿಬಿಡ ಪ್ರದೇಶಗಳಲ್ಲಿ ಆತ್ಮಾಹುತಿ ದಾಳಿ ನಡೆಸಲು ಅಲ್ ಖೈದಾ ಸಂಘಟನೆ ಸದಸ್ಯರು ಸಜ್ಜಾಗಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಕೂಡಲೇ ಕಾರ್ಯ ಪ್ರವೃತ್ತರಾದ ಎಟಿಎಸ್ ಸಿಬ್ಬಂದಿ ಲಕ್ನೋದ ನಿವಾಸವೊಂದರ ಮೇಲೆ ದಾಳಿ ನಡೆಸಿ, ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.
''ಬಂಧಿತರನ್ನು ಮಿನಾಜ್ ಅಹ್ಮದ್ ಹಾಗೂ ನಾಸಿರುದ್ದೀನ್ ಎಂದು ಗುರುತಿಸಲಾಗಿದ್ದು, ಇಬ್ಬರು ಲಕ್ನೋದ ಕಕೋರಿ ಪ್ರದೇಶದ ನಿವಾಸಿಗಳಾಗಿದ್ದು, ಅಲ್ ಖೈದಾ ಅನ್ಸಾರ್ ಖಜ್ವಾತ್ ಉಲ್ ಹಿಂದ್ ಸಂಘಟನೆಯ ಆತ್ಮಾಹುತಿ ದಾಳಿಯ ಸದಸ್ಯರಾಗಿದ್ದಾರೆ, ಉಳಿದ ಉಗ್ರರನ್ನು ಹಿಡಿಯಲು ಬಲೆ ಬೀಸಲಾಗಿದೆ,'' ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಹೇಳಿದ್ದಾರೆ.

ಲಕ್ನೋ ಸೇರಿದಂತೆ ಉತ್ತರ ಪ್ರದೇಶದ ಪ್ರಮುಖ ಪಟ್ಟಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಹರ್ದೋಯಿ, ಸೀತಾಪುರ್, ಬಾರಾಬಂಕಿ, ಉನ್ನಾವೋ ಹಾಗೂ ರಾಯ್ ಬರೇಲಿ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾವಹಿಸಲಾಗಿದ್ದು, ಭದ್ರತೆ ಹೆಚ್ಚಿಸಲಾಗಿದೆ.
''ಬಂಧಿತರು ನೆಲೆಸಿದ್ದ ಮನೆಯಲ್ಲಿ ಇನ್ನೂ ಐದು ಮಂದಿ ಇದ್ದರು ಎಂದು ತಿಳಿದು ಬಂದಿದೆ. ಆ ಮನೆಯಲ್ಲಿದ್ದ ಪಿಸ್ತೂಲ್ , ಎರಡು ಪ್ರೆಷರ್ ಕುಕ್ಕರ್ ಬಾಂಬ್, ಸ್ಫೋಟಕ ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಸಜೀವ ಬಾಂಬ್ ಪತ್ತೆ ಹಚ್ಚಲಾಗಿದ್ದು, ನಿಷ್ಕ್ರಿಯಗೊಳಿಸಲಾಗಿದೆ. ಈ ಉಗ್ರರು ಕಾಶ್ಮೀರದ ಜೊತೆ ನಿರಂತರ ಸಂಪರ್ಕ ಹೊಂದಿದ್ದರು, ಸರಣಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದರು, ಹಲವು ದಿನಗಳ ಕಾಲ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ಹಾಕಿಕೊಂಡಿರುವ ಬಗ್ಗೆ ತಿಳಿದು ಬಂದಿದೆ. ಯುಪಿಯ ವಿವಿಧೆಡೆ ಹುಡುಕಾಟ ಇನ್ನೂ ಜಾರಿಯಲ್ಲಿದೆ,'' ಎಂದು ಯುಪಿ ಎಟಿಎಸ್ ಐಜಿಪಿ ಜಿಕೆ ಗೋಸ್ವಾಮಿ ಅವರು ಇಂಡಿಯಾ ಟುಡೇ ಜೊತೆ ಮಾತನಾಡುತ್ತಾ ಹೇಳಿದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications