ಅಲಿಗಢ ಮುಸ್ಲಿಂ ವಿವಿ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು
ಅಲಿಗಢ, ಜನವರಿ 10: ಅಲಿಗಢ ಮುಸ್ಲಿಂ ವಿವಿ ವಿದ್ಯಾರ್ಥಿಯನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.
ಸರ್ಕಲ್ ಆಫೀಸರ್ ಅನಿಲ್ ಸಮನಿಯಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಮೃತ ಅತೀಫ್ 2018 ರಲ್ಲಿ ಜಮಲ್ಪುರ್ ಪ್ರದೇಶದಲ್ಲಿ ನಡೆದಿದ್ದ ಶಾಬಾಜ್ ಎಂಬ ವ್ಯಕ್ತಿಯ ಹತ್ಯೆಯಲ್ಲಿ ಪಿತೂರಿ ನಡೆಸಿದ್ದ ಆರೋಪ ಎದುರಿಸುತ್ತಿದ್ದ.
ಗಡಿಯಲ್ಲಿ ಪಾಕ್‌ನಿಂದ ಕದನವಿರಾಮ ಉಲ್ಲಂಘನೆ: ಪಾಕ್ ಸೇನೆಯ ಇಬ್ಬರ ಹತ್ಯೆ
ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ದ್ವಿತೀಯ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ ಅತೀಫ್ ಸ್ನೇಹಿತನ ಜೊತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ಸಾಗುತ್ತಿದ್ದಾಗ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆತನ ಸ್ನೇಹಿತ ಝೈದ್ ದ್ವಿಚಕ್ರವಾಹನದ ಜೊತೆಗೆ ಮನೆಗೆ ಪರಾರಿಯಾಗಿದ್ದಾನೆ.
ಘಟನೆಯನ್ನು ಖಂಡಿಸಿ ಎಎಂಯು ವಿದ್ಯಾರ್ಥಿಗಳು ಜೆ.ಎನ್ ವೈದ್ಯಕೀಯ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.