ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯೆ ರಾಮ ಮಂದಿರ ಶಿಲಾನ್ಯಾಸಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

|
Google Oneindia Kannada News

ಅಲಹಾಬಾದ್, ಜುಲೈ 24: ಅಯೋಧ್ಯೆಯ ರಾಮಮಂದಿರ ಶಿಲಾನ್ಯಾಸಕ್ಕೆ ತಡೆ ಕೋರಿ ಪತ್ರಕರ್ತರೊಬ್ಬರು ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.

ಅಯೋಧ್ಯೆಯಲ್ಲಿ ಆಗಸ್ಟ್‌ 5 ರಾಮ ಮಂದಿರ ಭೂಮಿ ಪೂಜೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಉದ್ಘಾಟನೆ ಮಾಡುವವರಿದ್ದರು. ಆಗಸ್ಟ್‌ 5 ರಂದು ಭವ್ಯವಾದ ಮಂದಿರ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದೆ. ಈ ಪೂಜೆ ಮೂರು ದಿನಗಳ ಸುದೀರ್ಘ ವೈದಿಕ ಆಚರಣೆಗಳ ಮೂಲಕ ನಡೆಯಲಿದೆ.

ರಾಮ ಮಂದಿರ ಭೂಮಿ ಪೂಜೆಗೆ ತಡೆ ನೀಡುವಂತೆ ಕೋರ್ಟ್‌ಗೆ ಅರ್ಜಿರಾಮ ಮಂದಿರ ಭೂಮಿ ಪೂಜೆಗೆ ತಡೆ ನೀಡುವಂತೆ ಕೋರ್ಟ್‌ಗೆ ಅರ್ಜಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ 40 ಕೆಜಿ ಬೆಳ್ಳಿ ಇಟ್ಟಿಗೆಯನ್ನು ಅಡಿಪಾಯಕ್ಕೆ ಅಳವಡಿಸುವ ಮೂಲಕ ದೇಗುಲ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.

Allahabad Court Rejects PIL Against Ayodhya Temple Event To Be Attended By PM Modi

ದೆಹಲಿ ಮೂಲದ ಪತ್ರಕರ್ತರೊಬ್ಬರು ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ್ದು, ದೇಶದಲ್ಲಿ ಕೊರೊನಾ ವೈರಸ್‌ ತೀವ್ರಗತಿಯಲ್ಲಿ ಹಬ್ಬುತ್ತಿರುವ ನಡುವೆಯೇ ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ಕೇಂದ್ರ ಸರಕಾರದ ಅನ್‌ಲಾಕ್‌ 2.0 ಮಾರ್ಗಸೂಚಿಯನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

ಕೊರೊನಾ ವೈರಸ್ ಸಮಯದಲ್ಲಿ ದೇಶದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ಇಲ್ಲ ಈ ಕಾರ್ಯಕ್ರಮವೇಕೆ ಈಗ ನಡೆಯಬೇಕು ಎಂದು ಪ್ರಶ್ನಿಸಿದ್ದಾರೆ.

ಸ್ವಲ್ಪ ದಿನಗಳ ಹಿಂದೆ ಬದರಿನಾಥದ ಜ್ಯೋತಿರ್ಮಠದ ಪೀಠಾಧಿಪತಿ ಸ್ವಾಮಿ ಶಂಕರಾಚಾರ್ಯ ಸ್ವರೂಪಾನಾಂದ ಸರಸ್ವತಿ ಶ್ರೀಗಳು ರಾಮ ಮಂದಿರದ ಭೂಮಿ ಪೂಜೆಗೆ ಅಪಸ್ವರ ಎತ್ತಿದ್ದರು.

ಸದ್ಯದ ಅಶುಭ ಘಳಿಗೆಯಲ್ಲಿ ಭೂಮಿ ಪೂಜೆ ನೆರವೇರಿಸುವುದರಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ ಎಂದು ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಕಳವಳ ವ್ಯಕ್ತಪಡಿಸಿದ್ದರು.

English summary
The Allahabad High Court has dismissed a Public Interest Litigation seeking directions to restrain “Bhoomi Pujan” for laying down the foundation stone of Ram Mandir at Ayodhya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X