ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಅಲಹಾಬಾದ್ ಕೋರ್ಟ್

|
Google Oneindia Kannada News

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು, ಹಸುವಿನ ರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕಾಗಿರಿಸಿಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಹಾಗೆಯೇ ಗೋಹತ್ಯೆ ಮಾಡಿದ ಆರೋಪ ಹೊತ್ತಿರುವ ಜಾವೇದ್ ಎಂಬಾತನಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ಆರೋಪಿಗೆ ಜಾಮೀನು ನಿರಾಕರಿಸಿದ ನ್ಯಾಯಮೂರ್ತಿ ಶೇಖರ್ ಯಾದವ್ ಅವರ ಪೀಠವು ಅರ್ಜಿದಾರರು ಹಸುವನ್ನು ಕಳ್ಳತನ ಮಾಡಿದ ನಂತರ ಅದನ್ನು ಕೊಂದು ಅದರ ತಲೆ ಕತ್ತರಿಸಿದ್ದುಮತ್ತು ಅದರ ಮಾಂಸವನ್ನು ತಮ್ಮೊಂದಿಗೆ ಇಟ್ಟುಕೊಂಡಿದ್ದರು ಎಂದು ಹೇಳಿದರು.

Allahabad HC Says Declare Cow National Animal, Make Its Protection A Fundamental Right Of Hindus

ಒಂದು ದೇಶದ ಸಂಸ್ಕೃತಿ ಮತ್ತು ಅದರ ನಂಬಿಕೆಗೆ ಧಕ್ಕೆಯುಂಟಾದಾಗ, ದೇಶ ಸುರ್ಬಲವಾಗುತ್ತದೆ ಎಂದು ನಮಗೆ ತಿಳಿದಿದೆ ಎಂದು ಕೋರ್ಟ್ ಹೇಳಿದೆ.

ಇದು ಅರ್ಜಿದಾರರ ಮೊದಲ ಅಪರಾಧವಲ್ಲ, ಈ ಅಪರಾಧದ ಮುಂಚೆಯೇ ಅವರು ಗೋಹತ್ಯೆಯನ್ನು ಮಾಡಿದ್ದರು. ಇದು ಸಮಾಜದ ಸಾಮರಸ್ಯವನ್ನು ಕದಡಿದೆ ಅರ್ಜಿದಾರರು ಜಾಮೀನಿನ ಮೇಲೆ ಬಿಡುಗಡೆಯಾದರೆ, ಅವರು ಮತ್ತೊಮ್ಮೆ ಈ ಕೃತ್ಯವನ್ನು ಮಾಡುತ್ತಾರೆ ಅದು ಸಮಾಜಸ ಸ್ವಾಸ್ತ್ಯವನ್ನು ಹಾಳು ಮಾಡುತ್ತದೆ ಎಂದರು.

ಮೂಲಭೂತ ಹಕ್ಕು ಕೇವಲ ಗೋಮಾಂಸ ಭಕ್ಷಕರ ಪ್ರಮಾಧಿಕಾರವಲ್ಲ, ಬದಲಿಗೆ ಹಸುವನ್ನು ಪೂಜಿಸುವವರು ಮತ್ತು ಆರ್ಥಿಕವಾಗಿ ಗೋವುಗಳ ಮೇಲೆ ಅವಲಂಬಿತವಾಗಿರುವವರು ಅರ್ಥಪೂರ್ಣ ಜೀವನವನ್ನು ನಡೆಸುವ ಹಕ್ಕನ್ನು ಹೊಂದಿದ್ದಾರೆ.

ಹಸು ವಯಸ್ಸಾದಾಗ ಮತ್ತು ಅನಾರೋಗ್ಯದಿಂದ ಇರುವಾಗಲೂ ಕೂಡ ಉಪಯುಕ್ತವಾಗಿದೆ. ಮತ್ತು ಅದರ ಸಗಣಿ ಮತ್ತು ಮೂತ್ರವು ಕೃಷಿಗೆ ಔಷಧಿಗಳ ತಯಾರಿಕೆಗೆ ತುಂಬಾ ಉಪಯುಕ್ತವಾಗಿದೆ.

ಹಾಗೂ ಎಲ್ಲಕ್ಕಿಂತ ಹೆಚ್ಚಾಗಿ, ವಯಸ್ಸಾದಾಗ ಅಥವಾ ಅನಾರೋಗ್ಯಕ್ಕೆ ಒಳಗಾದಾಗಲೂ ಹಸುವನ್ನು ತಾಯಿಯಂತೆ ಪೂಜಿಸಲಾಗುವುದು.

ಗೋವುಗಳ ಮಹತ್ವವನ್ನು ಕೇವಲ ಹಿಂದೂಗಳು ಮಾತ್ರ ಅರ್ಥಮಾಡಿಕೊಂಡಿರುವುದಲ್ಲ ಮುಸ್ಲಿಮರು ತಮ್ಮ ಆಳ್ವಿಕೆಯಲ್ಲಿ ಗೋವನ್ನು ಭಾರತದ ಸಂಸ್ಕೃತಿಯ ಪ್ರಮುಖ ಭಾಗವೆಂದು ಪರಿಗಣಿಸಿದ್ದಾರೆ.

5 ಮುಸ್ಲಿಂ ಆಡಳಿತಗಾರರು ಗೋಹತ್ಯೆಯನ್ನು ನಿಷೇಧಿಸಿದ್ದರು. ಭಾಬರ್, ಹುಮಾಯೂನ್ ಮತ್ತು ಆಕ್ಬರ್ ತಮ್ಮ ಧಾರ್ಮಿಕ ಹಬ್ಬಗಳಲ್ಲಿ ಹಸುಗಳನ್ನು ಬಲಿ ನೀಡುವುದನ್ನು ನಿಷೇಧಿಸಿದ್ದರು.

English summary
Cow should be declared as the national animal of India, the Allahabad High Court said on Wednesday. According to LiveLaw, the court also said that cow protection be made a fundamental right of Hindus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X