ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ಯಾನರ್‌ನಿಂದಾಗಿ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಹಿನ್ನಡೆ?

|
Google Oneindia Kannada News

ಲಕ್ನೋ, ಮಾರ್ಚ್ 08 : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದವರ ಭಾವಚಿತ್ರವಿರುವ ಬ್ಯಾನರ್‌ ಅನ್ನು ಉತ್ತರ ಪ್ರದೇಶ ಸರ್ಕಾರ ಸಾರ್ವಜನಿಕವಾಗಿ ಪ್ರಕಟಿಸಿದೆ. ಈ ಕುರಿತು ಅಲಹಾಬಾದ್ ಹೈಕೋರ್ಟ್ ವಿಚಾರಣೆ ನಡೆಸಲಿದೆ.

ಭಾನುವಾರ ಬೆಳಗ್ಗೆ 10 ಗಂಟೆಗೆ ಅಲಹಾಬಾದ್ ಹೈಕೋರ್ಟ್ ದಾಖಲು ಮಾಡಿಕೊಂಡಿರುವ ಸ್ವಯಂ ಪ್ರೇರಿತ ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ಆದರೆ, ಅದನ್ನು ಮಧ್ಯಾಹ್ನ 3ಗಂಟೆಗೆ ಮುಂದೂಡಲಾಗಿದೆ. ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಹಿನ್ನಡೆಯಾಗಲಿದೆಯೇ? ಕಾದು ನೋಡಬೇಕಿದೆ.

ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆಗೆ ಈಗ ತೆಲಂಗಾಣ ಸರ್ಕಾರದ ವಿರೋಧ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆಗೆ ಈಗ ತೆಲಂಗಾಣ ಸರ್ಕಾರದ ವಿರೋಧ

ಡಿಸೆಂಬರ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿಮಾಡಿದ ಮತ್ತು ಹಿಂಸಾತ್ಮಕ ಪ್ರತಿಭಟನೆ ಆರೋಪ ಹೊತ್ತಿರುವ ವ್ಯಕ್ತಿಗಳ ಪೋಟೋ ಇರುವ ಬ್ಯಾನರ್ ಹಾಕಲಾಗಿದೆ.

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಐವರಿಗೆ ದೇಶ ಬಿಡಲು ಸೂಚನೆಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಐವರಿಗೆ ದೇಶ ಬಿಡಲು ಸೂಚನೆ

Allahabad HC To Hear Case Related To Hoardings By UP Govt

ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಹೃದಯ ಭಾಗದಲ್ಲಿ ಹಾಕಿರುವ ಬ್ಯಾನರ್‌ನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ವ್ಯಕ್ತಿಗಳ ಫೋಟೋ, ವಿಳಾಸವನ್ನು ಹಾಕಲಾಗಿದೆ. ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದವರು ಪರಿಹಾರ ನೀಡದಿದ್ದರೆ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.

ಸಿಎಎ ವಿರುದ್ಧ ನಿರ್ಣಯ ತೆಗೆದುಕೊಳ್ಳುವುದಿಲ್ಲ; ಅಜಿತ್ ಪವಾರ್ಸಿಎಎ ವಿರುದ್ಧ ನಿರ್ಣಯ ತೆಗೆದುಕೊಳ್ಳುವುದಿಲ್ಲ; ಅಜಿತ್ ಪವಾರ್

ಈ ಬ್ಯಾನರ್‌ನಲ್ಲಿ ರಾಜಕಾರಣಿ ಸದಾಫ್ ಜಫಾರ್, ವಕೀಲ ಮೊಹಮ್ಮದ್ ನೋಹೆಬ್, ರಂಗಕರ್ಮಿ ದೀಪಕ್ ಕಬೀರ್ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಎಸ್‌. ಆರ್.ದರಪುರಿ ಹೆಸರು ಮತ್ತು ಫೋಟೋಗಳಿವೆ. ಆಸ್ತಿ ಮುಟ್ಟುಗೋಲು ನೋಟಿಸ್ ನೀಡಿರುವ ಸರ್ಕಾರದ ವಿರುದ್ಧ ಎಲ್ಲರೂ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಡಿಸೆಂಬರ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ನಡೆದಾಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳವುದಾಗಿ ಎಚ್ಚರಿಕೆ ನೀಡಿದ್ದರು.

ಯೋಗಿ ಆದಿತ್ಯನಾಥ್ ಸೂಚನೆಯ ಮೇರೆಗೆ ಬ್ಯಾನರ್ ಹಾಕಲಾಗಿದೆ ಎಂಬ ಮಾಹಿತಿ ಇದೆ. ಅಲಹಾಬಾದ್ ಹೈಕೋರ್ಟ್ ಈ ಕುರಿತು ಯಾವ ತೀರ್ಮಾನವನ್ನು ಕೈಗೊಳ್ಳಲಿದೆ? ಎಂದು ಕಾದು ನೋಡಬೇಕಿದೆ.

English summary
Allahabad High Court will hear the suo moto case related to hoardings put up by Uttar Pradesh government with names, addresses, and photos of those who were accused of violence during protests against the Citizenship Amendment Act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X