ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಾ. ಕಫೀಲ್‌ ಖಾನ್ ವಿರುದ್ಧದ ಅಮಾನತು ಆದೇಶಕ್ಕೆ ತಡೆ ನೀಡಿದ ಅಲಹಾಬಾದ್‌ ಹೈಕೋರ್ಟ್‌

|
Google Oneindia Kannada News

ಅಲಹಾಬಾದ್‌, ಸೆಪ್ಟೆಂಬರ್ 15: ಉತ್ತರ ಪ್ರದೇಶದ ಬಹರಾಯಿಚ್‌ನಲ್ಲಿ ರೋಗಿಗಳಿಗೆ ಬಲವಂತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನುವ ಆರೋಪದಡಿ ಡಾ. ಕಫೀಲ್‌ ಖಾನ್‌ ಅವರನ್ನು ಅಮಾನತ್ತುಗೊಳಿಸಿದ್ದ ಉತ್ತರ ಪ್ರದೇಶ ಸರ್ಕಾರದ ಆದೇಶವನ್ನು ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ತಡೆ ಹಿಡಿದಿದೆ. ಆದೇಶಕ್ಕೆ ತಡೆ ನೀಡಿದ ಏಕಸದಸ್ಯ ಪೀಠದ ನ್ಯಾ. ಸರಳ್‌ ಶ್ರೀವಾಸ್ತವ ಅವರು ಡಾ. ಖಾನ್‌ ಅವರ ವಿರುದ್ಧದ ವಿಚಾರಣೆಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಸೂಚಿಸಿದ್ದಾರೆ.

ಉತ್ತರ ಪ್ರದೇಶ ಪೊಲೀಸರು 2018ರಲ್ಲಿ ಖಾನ್‌ ಅವರನ್ನು ಬಹರಾಯಿಚ್‌ ಜಿಲ್ಲಾ ಆಸ್ಪತ್ರೆ ಆಡಳಿತ/ ಉಸ್ತುವಾರಿ ಅನುಮತಿ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕ ಉಪಟಳಕ್ಕೆ ಕಾರಣವಾದ ಆರೋಪದಡಿ ಬಂಧಿಸಿದ್ದರು. ಇದೇ ವೇಳೆ ಅವರ ಸಹಾಯಕರಾದ ಸೂರಜ್‌ ಪಾಂಡೆ ಮತ್ತು ಮಹಿಪಾಲ್‌ ಸಿಂಗ್ ಅವರನ್ನೂ ಸಹ ವಶಕ್ಕೆ ಪಡೆಯಲಾಗಿತ್ತು. ನಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿತ್ತು. ತಮ್ಮ ವಿರುದ್ಧ ಇಲಾಖಾ ವಿಚಾರಣೆಯನ್ನು ಆರಂಭಿಸಿ ಎರಡು ವರ್ಷಗಳೇ ಕಳೆದರೂ ಅದನ್ನು ಇನ್ನೂ ಪೂರ್ಣಗೊಳಿಸಲಾಗಿಲ್ಲ ಎಂದು ಆಕ್ಷೇಪಿಸಿ ಖಾನ್‌ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಸುಪ್ರೀಂಕೋರ್ಟ್‌ ಈ ಹಿಂದೆ ನೀಡಿರುವ ತೀರ್ಪಿನ ಅನ್ವಯ ಸುದೀರ್ಘ ವಿಳಂಬಿತ ಅವಧಿಯವರೆಗೆ ಅಮಾನತು ಆದೇಶ ಉಳಿಯುವುದಿಲ್ಲ ಎಂದು ವಾದಿಸಲಾಗಿತ್ತು.

ಕಫೀಲ್ ಖಾನ್ ವಿರುದ್ಧದ ಕ್ರಿಮಿನಲ್‌ ಪ್ರಕ್ರಿಯೆ ರದ್ದುಪಡಿಸಿದ ಕೋರ್ಟ್ಕಫೀಲ್ ಖಾನ್ ವಿರುದ್ಧದ ಕ್ರಿಮಿನಲ್‌ ಪ್ರಕ್ರಿಯೆ ರದ್ದುಪಡಿಸಿದ ಕೋರ್ಟ್

ಮತ್ತೊಂದೆಡೆ, ಸರ್ಕಾರಿ ವಕೀಲ, ಎಕೆ ಗೋಯೆಲ್ ಅವರು, ಖಾನ್ ವಿರುದ್ಧದ ತನಿಖಾ ವರದಿಯನ್ನು ಆಗಸ್ಟ್ 27, 2021 ರಂದು ಸಲ್ಲಿಸಿದ್ದು ಮತ್ತು ಅದರ ಪ್ರತಿಯನ್ನು ಅರ್ಜಿದಾರರಿಗೆ ಆಗಸ್ಟ್ 28, 2021 ರಂದು ಕಳುಹಿಸಲಾಗಿದೆ ಎಂದು ಅರ್ಜಿದಾರರು ವಿಚಾರಣಾ ವರದಿಯ ವಿರುದ್ಧ ಆಕ್ಷೇಪಣೆ ಸಲ್ಲಿಸುವಂತೆ ಕೇಳಿದರು. ಎಲ್ಲಾ ಪ್ರತಿವಾದಿಗಳಿಗೆ ಪ್ರತಿ ಅಫಿಡವಿಟ್ ಸಲ್ಲಿಸಲು ನಾಲ್ಕು ವಾರಗಳ ಸಮಯವನ್ನು ನ್ಯಾಯಾಲಯವು ನೀಡಿದೆ.

Allahabad High Court stays suspension order against Dr. Kafeel Khan

ಎರಡನೇ ಅಮಾನತು ಆದೇಶವನ್ನು ರವಾನಿಸಲು ಶಿಸ್ತಿನ ಪ್ರಾಧಿಕಾರಕ್ಕೆ ಅಂತರ್ಗತ ಅಧಿಕಾರವಿದೆ ಎಂದು ಗೋಯೆಲ್ ಸಲ್ಲಿಸಿದರು. ಈ ಪ್ರಕರಣವನ್ನು ನವೆಂಬರ್ 11, 2021 ರಂದು ಹೆಚ್ಚಿನ ವಿಚಾರಣೆಗೆ ಪಟ್ಟಿ ಮಾಡಲಾಗಿದೆ ಮತ್ತು ಈ ದಿನಾಂಕದಂದು, ತನಿಖೆ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆ ಸರ್ಕಾರವನ್ನು ತಿಳಿಸಲಾಗಿದೆ.

ಸಿಎಎ ವಿರೋಧಿ ಭಾಷಣ: ಡಾ. ಕಫೀಲ್ ಖಾನ್ ಬಿಡುಗಡೆಗೆ ಹೈಕೋರ್ಟ್ ಆದೇಶಸಿಎಎ ವಿರೋಧಿ ಭಾಷಣ: ಡಾ. ಕಫೀಲ್ ಖಾನ್ ಬಿಡುಗಡೆಗೆ ಹೈಕೋರ್ಟ್ ಆದೇಶ

2017ರ ಆಗಸ್ಟ್‌ನಲ್ಲಿ ಗೋರಖ್‌ಪುರದ ಬಾಬಾ ರಾಘವ್ ದಾಸ್ (ಬಿಆರ್‌ಡಿ) ವೈದ್ಯಕೀಯ ಕಾಲೇಜಿನಲ್ಲಿ ಆಮ್ಲಜನಕದ ಪೂರೈಕೆ ಕೊರತೆಯಿಂದಾಗಿ 60 ಮಕ್ಕಳು ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಕಫೀಲ್ ಖಾನ್ ಕಾರಣ ಎಂದು ಆರೋಪಿಸಿ ಅವರನ್ನು ಕೆಲಸದಿಂದ ಅಮಾತುಗೊಳಿಸಿ, ಬಂಧಿಸಲಾಗಿತ್ತು. ಆದರೆ ಈ ಬಗ್ಗೆ ತನಿಖೆ ನಡೆಸಿದ್ದ ಉತ್ತರ ಪ್ರದೇಶ ಸರ್ಕಾರ ಅವರು ನಿರ್ದೋಷಿ ಎಂದು ವರದಿ ನೀಡಿತ್ತು.

Allahabad High Court stays suspension order against Dr. Kafeel Khan

ಇನ್ನೊಂದು ಪ್ರಕರಣದಲ್ಲಿ ಅಲಿಗಢದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆ ವೇಳೆ ಅವಹೇಳನಾಕಾರಿ ಹೇಳಿಕೆಗಳನ್ನು ನೀಡಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಕಫೀಲ್ ಖಾನ್ ವಿರುದ್ಧದ ದೋಷಾರೋಪಗಳು ದೂರಾಗಿವೆ. ಕಫೀಲ್ ಖಾನ್ ವಿರುದ್ಧದ ಕ್ರಿಮಿನಲ್‌ ಪ್ರಕ್ರಿಯೆಯನ್ನು ಅಲಹಾಬಾದ್‌ ಹೈಕೋರ್ಟ್‌ ರದ್ದುಗೊಳಿಸಿದೆ.

ಸಿಎಎ ವಿರೋಧಿ ಭಾಷಣದ ಹಿನ್ನೆಲೆಯಲ್ಲಿ ಖಾನ್‌ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿ ಬಂಧಿಸಲಾಗಿತ್ತು. ಇದನ್ನು ಕಳೆದ ವರ್ಷದ ಸೆಪ್ಟೆಂಬರ್‌ 1ರಂದು ಅಲಹಾಬಾದ್‌ ಹೈಕೋರ್ಟ್‌ ವಜಾ ಮಾಡಿತ್ತು. ಈ ಆದೇಶವನ್ನು ಡಿಸೆಂಬರ್‌ 17ರಂದು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿತ್ತು. ಎನ್‌ಎಸ್‌ಎ ಕಾಯಿದೆ ಅಡಿ ಬಂಧನವನ್ನು ಪ್ರಶ್ನಿಸಿ ಖಾನ್‌ ತಾಯಿ ನುಜಾತ್‌ ಪರ್ವೀನ್‌ ಅವರು ಹೇಬಿಯಸ್‌ ಕಾರ್ಪಸ್‌ ಮನವಿ ಸಲ್ಲಿಸಿದ್ದರು.

English summary
The Allahabad High Court last week stayed a suspension order against Dr. Kafeel Khan which was based on the allegation that he was forcibly treating patients in Bahraich, Uttar Pradesh (Dr. Kafeel Khan v. State of UP).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X