ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking:ಪತ್ರಕರ್ತ ಸಿದ್ದಿಕ್ ಕಪ್ಪನ್ ಜಾಮೀನು ಅರ್ಜಿ ಮತ್ತೆ ತಿರಸ್ಕೃತ

|
Google Oneindia Kannada News

ಲಕ್ನೋ, ಆ.04: ಹತ್ರಾಸ್ ಪಿತೂರಿ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿಯಲ್ಲಿ ಬಂಧಿತರಾಗಿರುವ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಗುರುವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿ ಕ್ರಿಶನ್ ಪಹಲ್ ಅವರಿದ್ದ ಏಕ ಸದಸ್ಯ ಪೀಠ ಗುರುವಾರ ಜಾಮೀನು ಅರ್ಜಿ ತಿರಸ್ಕರಿಸಿ ಆದೇಶ ನೀಡಿದೆ.

ಇದಕ್ಕೂ ಮುನ್ನ ಆಗಸ್ಟ್ 2ರಂದು ಆರೋಪಿ ಮತ್ತು ರಾಜ್ಯದ ಪರ ವಕೀಲರ ವಾದವನ್ನು ಆಲಿಸಿದ್ದ ಏಕ ಸದಸ್ಯ ಪೀಠವು ತನ್ನ ಆದೇಶವನ್ನು ಗುರುವಾರಕ್ಕೆ ಕಾಯ್ದಿರಿಸಿತ್ತು.

Allahabad High Court Thursday rejected the bail to journalist Siddique Kappan

ಮಥುರಾ ನ್ಯಾಯಾಲಯವು ಸಿದ್ದಿಕ್ ಕಪ್ಪನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಅವರು ಹೈಕೋಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಈಗ ಇಲ್ಲಿಯೂ ಜಾಮೀನು ಅರ್ಜಿ ತಿರಸ್ಕೃತವಾಗಿದೆ.

ಮಲಯಾಳಂ ಸುದ್ದಿ ಪೋರ್ಟಲ್‌ನ ವರದಿಗಾರ ಮತ್ತು ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟದ (ಕೆಯುಡಬ್ಲ್ಯೂಜೆ) ದೆಹಲಿ ಘಟಕದ ಕಾರ್ಯದರ್ಶಿ ಸಿದ್ದಿಕ್ ಕಪ್ಪನ್, 2020 ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವರದಿ ಮಾಡಲು ಇತರ ಮೂವರ ಜೊತೆಗೆ ಹತ್ರಾಸ್‌ಗೆ ತೆರಳುತ್ತಿದ್ದಾಗ ಬಂಧಿಸಲಾಗಿದೆ.

Allahabad High Court Thursday rejected the bail to journalist Siddique Kappan

ಈ ಪತ್ರಕರ್ತರು ಹತ್ರಾಸ್‌ನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸುತ್ತಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದರು. ಆರೋಪಿಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಸಿದ್ದಿಕ್ ಕಪ್ಪನ್ ಮತ್ತು ಇತರರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ), ಸೆಕ್ಷನ್ 124 ಎ (ದೇಶದ್ರೋಹ), ಸೆಕ್ಷನ್ 153 ಎ (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಸೆಕ್ಷನ್ 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಸೆಕ್ಷನ್ 17 ಮತ್ತು 18 ರ ಅಡಿಯಲ್ಲಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 65, 72 ಮತ್ತು 75 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪತ್ರಕರ್ತ ಸಿದ್ದಿಕ್ ಕಪ್ಪನ್ ವಿರುದ್ದ ಉತ್ತರ ಪ್ರದೇಶ ಪೊಲೀಸರು ಸುಮಾರು 5,000 ಪುಟಗಳ ಚಾರ್ಜ್ ಶೀಟ್‌ ಅನ್ನು ಸಿದ್ದಪಡಿಸಿದ್ದಾರೆ. ಈ ಚಾರ್ಜ್‌ಶೀಟ್‌ನಲ್ಲಿ ಪತ್ರಕರ್ತ ಸಿದ್ದಿಕ್‌ ಕಪ್ಪನ್‌ "ಭಯೋತ್ಪಾದಕ ಕೃತ್ಯ ನಡೆಸಲು ಪ್ರಯತ್ನ ಮಾಡಿದ್ದ," ಎಂದು ಆರೋಪ ಮಾಡಿದ್ದಾರೆ.

English summary
Lucknow bench of Allahabad High Court Thursday rejected the bail application of journalist Siddique Kappan in Hathras conspiracy case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X