ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೇಥಿ: ಸ್ಮೃತಿ ಇರಾನಿ ಬೆಂಬಲಿಗ ಸುರೇಂದ್ರ ಸಿಂಗ್ ಹತ್ಯೆ

|
Google Oneindia Kannada News

ಅಮೇಥಿ(ಉ.ಪ್ರ), ಮೇ 26: ಅಮೇಥಿಯಲ್ಲಿ ಎಐಸಿಸಿ ಅಧ್ಯಕ್ಷ, ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ವಿರುದ್ಧ ಭರ್ಜರಿ ಜಯ ದಾಖಲಿಸಿದ ಸ್ಮೃತಿ ಇರಾನಿ ಅವರು ನೂತನ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಸಂಸತ್ ನ ಸೆಂಟ್ರಲ್ ಹಾಲ್ ನಲ್ಲಿ ನರೇಂದ್ರ ಮೋದಿ ಅವರನ್ನು ನೂತನ ಸಂಸದೀಯ ನಾಯಕರನ್ನಾಗಿ ಆಯ್ಕೆ ಮಾಡುವ ಸಮಾರಂಭ, ಸಂಭ್ರಮದಲ್ಲಿ ಸ್ಮೃತಿ ಇದ್ದರು. ಇತ್ತ ಅವರ ಕ್ಷೇತ್ರದಲ್ಲಿ ಅವರ ಆಪ್ತ ಬೆಂಬಲಿಗ ಸುರೇಂದ್ರ ಸಿಂಗ್ ರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

Amethi bjp leader murder, Smriti Irani aide Surendra Singh Shot dead

ಅಮೇಥಿಯ ಬರುಲಿಯಾ ಗ್ರಾಮದ ತಮ್ಮ ಮನೆಯಲ್ಲಿ ಶನಿವಾರ ರಾತ್ರಿ ವಿಶ್ರಾಂತಿ ಪಡೆಯುತ್ತಿದ್ದ ಸುರೇಂದ್ರ ಸಿಂಗ್ ಮೇಲೆ ದುಷ್ಕರ್ಮಿಗಳು ಏಕಾಏಕಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಬರುಲಿಯಾ ಗ್ರಾಮದ ಮಾಜಿ ಮುಖ್ಯಸ್ಥರಾಗಿದ್ದ ಸುರೇಂದ್ರ ಅವರ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಜಮೋ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ದುಷ್ಕರ್ಮಿಗಳ ಗುಂಡೇಟು ತಿಂದು ರಕ್ತದ ಮಡಿಲಿನಲ್ಲಿ ಮಲಗಿದ್ದ ಸುರೇಂದ್ರ ಅವರನ್ನು ಲಕ್ನೋಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಪ್ರಯತ್ನ ಕೂಡಾ ವಿಫಲವಾಗಿದೆ. ಘಟನೆ ಸಂಬಂಧ ಇಬ್ಬರನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ.

2019ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು 55,120 ಮತಗಳ ಅಂತರದಿಂದ ಸ್ಮೃತಿ ಇರಾನಿ ಸೋಲಿಸಿ ಹೊಸ ಇತಿಹಾಸ ಬರೆದಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Amethi: Surendra Singh, former village head of Baraulia village and a close aide of BJP leader Smriti Irani, was shot by unidentified assailants at his residence.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X