• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉತ್ತರಪ್ರದೇಶದಲ್ಲಿ ರೋಟಿ ಮೇಲೆ ಉಗುಳಿದ ಆರೋಪಿ ಕೈಗೆ ಪೊಲೀಸ್ ಕೋಳ

|

ಲಕ್ನೋ, ಫೆಬ್ರವರಿ.21: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸರ್ಕಾರಗಳು ಮಾರ್ಗಸೂಚಿಗಳನ್ನು ಹೊರಡಿಸುತ್ತಿವೆ. ಇದರ ಮಧ್ಯೆ ಕೊವಿಡ್-19 ಸೋಂಕು ಹರಡಿಸುವ ಪ್ರಯತ್ನದಲ್ಲಿ ತೊಡಗಿದ್ದ ಒಬ್ಬ ಆರೋಪಿಯನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಮೀರತ್ ನಲ್ಲಿ ನೌಷದ್ ಎಂಬ ಆರೋಪಿಯು ರೋಟಿ ತಯಾರಿಸುತ್ತಿದ್ದ ಸಂದರ್ಭದಲ್ಲಿ ಅದರ ಮೇಲೆ ಉಗುಳುತ್ತಿರುವ ವಿಡಿಯೋ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು.

"ಮಹಾರಾಷ್ಟ್ರದಲ್ಲಿ ಮಾಸ್ಕ್ ಹಾಕಿಕೊಳ್ಳದಿದ್ದರೆ ಮತ್ತೊಮ್ಮೆ ಲಾಕ್ ಡೌನ್"

ಕೊರೊನಾವೈರಸ್ ಸೋಂಕು ಹರಡುವ ಆರೋಪದ ಹಿನ್ನೆಲೆ ನೌಷದ್ ವಿರುದ್ಧ ಹಿಂದೂ ಜಾಗ್ರಣ ಮಂಚ್ ಮುಖ್ಯಸ್ಥ ಸಚಿನ್ ಸಿರೋಹಿ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಗೆ ಕೊರೊನಾವೈರಸ್ ತಪಾಸಣೆ:

ಮೀರತ್ ನಲ್ಲಿ ರೋಟಿ ತಯಾರಿಸುತ್ತಿದ್ದ ಸಂದರ್ಭದಲ್ಲಿ ಅವುಗಳ ಮೇಲೆ ಉಗುಳಿದ ಆರೋಪಿಯನ್ನು ಬಂಧಿಸಿದ ಪೊಲೀಸರು ಆತನನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಿದ್ದಾರೆ. ಒಂದು ವೇಳೆ ಆರೋಪಿಗೆ ಸೋಂಕು ತಗುಲಿದ್ದರೆ ಹೆಚ್ಚಿನ ಅಪಾಯವನ್ನು ಎದುರಿಸಬೇಕಾಗುತ್ತದೆ. ಉತ್ತರ ಪ್ರದೇಶದಲ್ಲಿ ಒಟ್ಟು 602706 ಮಂದಿಗೆ ಕೊವಿಡ್-19 ಸೋಂಕು ಪತ್ತೆಯಾಗಿದ್ದು, ಈವರೆಗೂ 591559 ಸೋಂಕಿತರು ಗುಣಮುಖರಾಗಿದ್ದಾರೆ. 8714 ಮಂದಿ ಕೊರೊನಾವೈರಸ್ ಮಹಾಮಾರಿಗೆ ಬಲಿಯಾಗಿದ್ದು, ರಾಜ್ಯದಲ್ಲಿ 2433 ಸಕ್ರಿಯ ಪ್ರಕರಣಗಳಿವೆ.

English summary
Amid Covid-19 Scare, A Man Who Spitting On Roti's Arrested By UP Police. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X