Breaking: ಮಂಕಿಪಾಕ್ಸ್ ಬಗ್ಗೆ ಅಲರ್ಟ್ ಆಯ್ತು ಯೋಗಿ ಗೌರ್ಮೆಂಟ್!

ಲಕ್ನೋ, ಜುಲೈ 26: ಉತ್ತರ ಪ್ರದೇಶದಲ್ಲಿ ಕೊರೊನಾ ವೈರಸ್ ರೋಗಿಗಳಿಗೆ ಮೀಸಲು ಇರಿಸಿದ್ದ ಆಸ್ಪತ್ರೆಗಳಲ್ಲಿನ ಹಾಸಿಗೆ ಅನ್ನು ಮಂಕಿಪಾಕ್ಸ್ ಸೋಂಕಿತರ ಚಿಕಿತ್ಸೆಗೆ ಬಳಸುವುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ.

ಭಾರತದಲ್ಲಿ ಮಂಕಿಪಾಕ್ಸ್ ಸೋಂಕಿತ ಪ್ರಕರಣಗಳು ವರದಿಯಾಗುತ್ತಿರುವುದರ ಹಿನ್ನೆಲೆ ಉತ್ತರ ಪ್ರದೇಶ ಸರ್ಕಾರವು ಎಚ್ಚೆತ್ತುಕೊಂಡಿದೆ. ಆದರೆ ರಾಜ್ಯದಲ್ಲಿ ಇದುವರೆಗೂ ಒಂದೇ ಒಂದು ಮಂಕಿಪಾಕ್ಸ್ ಸೋಂಕಿತ ಅಥವಾ ಶಂಕಿತ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಕಳೆದ ಭಾನುವಾರ ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಸೋಂಕಿತ ಪ್ರಕರಣವು ಪತ್ತೆಯಾಗಿತ್ತು. ಮಂಕಿಪಾಕ್ಸ್ ಸೋಂಕಿತ ಲಕ್ಷಣಗಳನ್ನು ಹೊಂದಿರುವ ಅಂತಾರಾಷ್ಟ್ರೀಯ ಪ್ರಯಾಣಿಕನನ್ನು ದೆಹಲಿ ವಿಮಾನ ನಿಲ್ದಾಣದಿಂದ ಲೋಕನಾಯಕ ಜೈ ಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ಕಳುಹಿಸಲಾಗಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳ ಅನ್ವಯ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ಆದೇಶಿಸಿದೆ.

amid Monkeypox cases rises in India, UP govt on alert, beds reserved in Covid hospitals

ಮಂಕಿಪಾಕ್ಸ್ ಕುರಿತು WHO ತುರ್ತು ಪರಿಸ್ಥಿತಿ:

ಜಾಗತಿಕ ಮಟ್ಟದಲ್ಲಿ ಮಂಕಿಪಾಕ್ಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆಯು ತುರ್ತು ಪರಿಸ್ಥಿತಿಯನ್ನು ಘೋಷಿಸಿತು. ಕಳೆದ 50 ವರ್ಷಗಳಿಗೆ ಹೋಲಿಸಿದರೆ ಮಂಕಿಪಾಕ್ಸ್ ದಾಖಲೆಯ ವೇಗ ಪಡೆದುಕೊಂಡಿದೆ.

amid Monkeypox cases rises in India, UP govt on alert, beds reserved in Covid hospitals

2022ರ ವರ್ಷಾರಂಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಅಂಕಿ-ಅಂಶಗಳ ಪ್ರಕಾರ, 47 ರಾಷ್ಟ್ರಗಳಲ್ಲಿ 3040 ಪ್ರಕರಣಗಳು ವರದಿಯಾಗಿದ್ದವು. ಅಲ್ಲಿಂದ ಈವರೆಗೆ 75 ರಾಷ್ಟ್ರಗಳಿಗೆ ಹರಡಿರುವ ಮಂಕಿಪಾಕ್ಸ್ ಮೂಲಕ 16,000ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಐವರು ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು WHO ಪ್ರಧಾನ ಕಾರ್ಯದರ್ಶಿ ಡಾ.ಟೆಡ್ರೂಸ್ ಹೇಳಿದ್ದಾರೆ. 1970ರಲ್ಲಿ ಮೊದಲ ಬಾರಿಗೆ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ರೋಗವು ಕಾಣಿಸಿಕೊಂಡಿತ್ತು. ಅಲ್ಲಿಂದ 50 ವರ್ಷಗಳಲ್ಲೇ ಮೊದಲ ಬಾರಿಗೆ ಅತಿಹೆಚ್ಚು ಸೋಂಕಿತ ಪ್ರಕರಣಗಳು ಜಾಗತಿಕ ಮಟ್ಟದಲ್ಲಿ ವರದಿಯಾಗುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+