ಚಿತ್ರಗಳು: ಆಯೋಧ್ಯೆಯ ರಾಮ ಜನ್ಮಭೂಮಿ ತಾಣದಲ್ಲಿ ಶಿವಲಿಂಗ
ಅಯೋಧ್ಯೆ, ಮೇ 21: ಸುಪ್ರೀಂಕೋರ್ಟ್ ಆದೇಶದಂತೆ ಆಯೋಧ್ಯೆಯ ರಾಮ ಜನ್ಮಭೂಮಿ ತಾಣದಲ್ಲಿ ಮಂದಿರ ನಿರ್ಮಾಣ, ದೇಗುಲ ಪುನರ್ ಸ್ಥಾಪನೆ ಕಾರ್ಯ ಭರದಿಂದ ಸಾಗಿದೆ. ಈ ನಡುವೆ ಹಳೆ ಕಟ್ಟಡಗಳ ಅವಶೇಷಗಳ ನಡುವೆ ಪುರಾತನ ಶಿವಲಿಂಗ, ಮರಳುಶಿಲೆ ಕೆತ್ತನೆಗಳು ಪತ್ತೆಯಾಗಿವೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.
ಕಳೆದ ಹತ್ತು ದಿನಗಳಿಂದ ಇಲ್ಲಿನ ಕಟ್ಟಡ ನೆಲಸಮ ಕೆಲಸ ನಡೆಯುತ್ತಿದೆ. ಮಣ್ಣು-ಕಲ್ಲುಗಳಡಿಯಲ್ಲಿ ಸಿಕ್ಕ ಅವಶೇಷಗಳಲ್ಲಿ 7 ಕಲ್ಲಿನ ಸ್ತಂಭಗಳು , 5 ಅಡಿ ಎತ್ತರದ ಶಿವಲಿಂಗ, ಕೆತ್ತನೆಗಳು ಸಿಕ್ಕಿವೆ ಎಂದಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ಮೂಲ ರಾಮ ದೇವರ ವಿಗ್ರಹವನ್ನು ಇದೇ ಆವರಣದಲ್ಲಿರುವ ಮಾನಸ ಭವನದಲ್ಲಿರಿಸಿ ಪೂಜೆ ಸಲ್ಲಿಸಲಾಗುತ್ತಿದೆ. ಹೊಸದಾಗಿ ಮಂದಿರ ನಿರ್ಮಾಣವಾದ ಬಳಿಕ ಪುನರ್ ಪ್ರತಿಷ್ಠಾಪನೆ ಮಾಡಲಾಗುತ್ತದೆ.
ಉತ್ತರಪ್ರದೇಶ ರಾಜ್ಯದ ಅಯೋಧ್ಯೆಯಲ್ಲಿರುವ ರಾಮಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಸಾಂವಿಧಾನಿಕ ನ್ಯಾಯಪೀಠವು ಶನಿವಾರ(ನವೆಂಬರ್ 09) ಬೆಳಗ್ಗೆ ಅಂತಿಮ ತೀರ್ಪು ಪ್ರಕಟಿಸಿತ್ತು. ಐತಿಹಾಸಿಕ ತೀರ್ಪು ನೀಡಿದ ಬಳಿಕ ಸರ್ಕಾರ ರಾಮಮಂದಿರ ನಿರ್ಮಾಣದತ್ತ ಮೊದಲ ಹೆಜ್ಜೆ ಇಡಲಾಗಿದೆ.

ನವೆಂಬರ್ 09 ರಂದು ಅಯೋಧ್ಯೆ ವಿವಾದದ ಕುರಿತು ತೀರ್ಪು ನೀಡಿದ ಸುಪ್ರೀಂ ಕೋರ್ಟ್, 2.77 ಎಕರೆ ವಿವಾದಿತ ಭೂಮಿ ರಾಮಲಲ್ಲಾಗೆ ಸೇರಿದೆ ಎಂದಿತ್ತು. ಜೊತೆಗೆ ಮುಸ್ಲಿಮರಿಗೆ ಬೇರೆ ಎಲ್ಲಾದರೂ 5 ಎಕರೆ ಪರ್ಯಾಯ ಜಮೀನನ್ನು ನೀಡಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು.
श्रीराम जन्मभूमि पर श्रीराम जन्मभूमि तीर्थ क्षेत्र द्वारा भूमि समतलीकरण का कार्य 11 मई से प्रारम्भ हुआ है। जिसमें अनेक प्रकार की देवी देवताओं की खंडित मूर्तियां पुरावशेष, पुष्प कलश आमलक व दोरजाम्ब के पत्थर इत्यादि मिले हैं।#जय_श्रीराम pic.twitter.com/rfiMEpkPrQ
— विनोद बंसल (@vinod_bansal) May 20, 2020

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ಶರದ್ ಬೊಬ್ಡೆ, ಜಸ್ಟೀಸ್ ಚಂದ್ರಚೂಡ್, ಜಸ್ಟೀಸ್ ಭೂಷಣ್, ಜಸ್ಟೀಸ್ ಅಬ್ದುಲ್ ನಜೀರ್ ಅವರನ್ನೊಳಗೊಂಡ ನ್ಯಾಯಪೀಠವು ನೀಡಿದ ಒಮ್ಮತದ ತೀರ್ಪಿನಂತೆ, ಅಯೋಧ್ಯಾದ ವಿವಾದಿತ ಭೂಮಿ ರಾಮಜನ್ಮಭೂಮಿ ನ್ಯಾಸ ಟ್ರಸ್ಟಿಗೆ ಸಿಗಲಿದೆ.

ಸುಪ್ರೀಂಕೋರ್ಟ್ ಆದೇಶದಂತೆ ಸರ್ಕಾರವು ಟ್ರಸ್ಟ್ ಸ್ಥಾಪನೆ ಮಾಡಿದ್ದು, 2024ರೊಳಗೆ ಮಂದಿರ ನಿರ್ಮಾಣವಾಗಲಿದ್ದು, ಶ್ರೀರಾಮಚಂದ್ರ ಮೂರ್ತಿಯ ದರ್ಶನ ಪ್ರಾಪ್ತಿಯಾಗಲಿದೆ" ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಅಧ್ಯಕ್ಷ ವಿಷ್ಣು ಸದಾಶಿವ್ ಕೊಕ್ಜೆ ಪ್ರತಿಕ್ರಿಯಿಸಿದ್ದಾರೆ.

ಈ ಟ್ರಸ್ಟ್ನಲ್ಲಿ ಹಿರಿಯ ನ್ಯಾಯವಾದಿ ಕೆ.ಪರಾಸರನ್, ಅಲಹಾಬಾದ್ನ ಜಗದ್ಗುರು ಶಂಕರಾಚಾರ್ಯ ಜ್ಯೋತಿಷ್ಪೀಠಾಧೀಶ್ವರ ಸ್ವಾಮಿ ವಾಸುದೇವಾನಂದ ಸರಸ್ವತೀಜಿ, ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಹರಿದ್ವಾರದ ಯುಗಪುರುಷ ಪರಮಾನಂದ ಜೀ ಮಹಾರಾಜ್, ಪುಣೆಯ ಸ್ವಾಮಿ ಗೋವಿಂದದೇವ್ ಗಿರಿಜೀ ಮಹಾರಾಜ್, ಅಯೋಧ್ಯೆಯ ವಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ, ಅಯೋಧ್ಯೆಯ ಹೋಮಿಯೋಪತಿ ಡಾಕ್ಟರ್ ಅನಿಲ್ ಮಿಶ್ರಾ, ಪಾಟ್ನದ ಕಾಮೇಶ್ವರ ಚೌಪಾಲ್(ಎಸ್ಸಿ) , ಮಹಾಂತ ದಿನೇಂದ್ರ ದಾಸ್, ಅಯೋಧ್ಯೆಯ ನಿರ್ಮೋಹಿ ಅಖಾಡದ ಪ್ರತಿನಿಧಿಗಳು ಸದಸ್ಯರಾಗಿದ್ದಾರೆ.












Click it and Unblock the Notifications