ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶದ 11ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಮಿತ್ರಪಕ್ಷ ಅಪ್ನಾ ದಳ ಸ್ಪರ್ಧೆ

|
Google Oneindia Kannada News

ಲಕ್ನೋ, ಜನವರಿ 22: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಭಾರತೀಯ ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ಅಪ್ನಾ ದಳ ಮೊದಲಿಗಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ ಹಾಗೂ ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಹೇಳಿದ್ದಾರೆ.
ಕಳೆದ 2017ರಲ್ಲಿ ನಡೆದ ಉತ್ತರ ಪ್ರದೇಶ ಚುನಾವಣೆಯಲ್ಲಿ ಅಪ್ನಾ ದಳ 11 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, 2022ರ ವಿಧಾನಸಭೆ ಚುನಾವಣೆಯಲ್ಲಿ ಹಿಂದಿಗಿಂತ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು, ಈ ಕುರಿತು ಶೀಘ್ರದಲ್ಲಿ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಪಕ್ಷದ ಅಭ್ಯರ್ಥಿಗಳ ಕುರಿತು ಅಧಿಕೃತ ಘೋಷಣೆಯನ್ನು ಹೊರಡಿಸಲಾಗುವುದು ಎಂದು ಅಪ್ನಾ ದಳ ಮುಖ್ಯಸ್ಥೆ ಅನುಪ್ರಿಯಾ ಪಟೇಲ್ ತಿಳಿಸಿದ್ದಾರೆ.

ಯುಪಿ ಚುನಾವಣೆ: ಅಪ್ನಾ ದಳ, ನಿಶಾದ್ ಪಕ್ಷದೊಂದಿಗೆ ಬಿಜೆಪಿ ಮೈತ್ರಿ- ಜೆಪಿ ನಡ್ಡಾಯುಪಿ ಚುನಾವಣೆ: ಅಪ್ನಾ ದಳ, ನಿಶಾದ್ ಪಕ್ಷದೊಂದಿಗೆ ಬಿಜೆಪಿ ಮೈತ್ರಿ- ಜೆಪಿ ನಡ್ಡಾ

ಪೂರ್ವ ಉತ್ತರ ಪ್ರದೇಶದಲ್ಲಿ ಅಪ್ನಾ ದಳವು ಕುರ್ಮಿಗಳ ಅಪಾರ ಬೆಂಬಲವನ್ನು ಹೊಂದಿದೆ. ಪ್ರಸ್ತುತ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಅತಿದೊಡ್ಡ ಮಿತ್ರ ಪಕ್ಷವಾಗಿದೆ. ಈ ಮೈತ್ರಿಯು 2014ರ ರಾಷ್ಟ್ರೀಯ ಚುನಾವಣೆಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 80ರಲ್ಲಿ 71 ಸ್ಥಾನಗಳನ್ನು ಗೆದ್ದುಕೊಂಡಿತು, ಇದಕ್ಕೆ ಅಪ್ನಾ ದಳ ಮತ್ತೆ ಎರಡು ಸ್ಥಾನಗಳನ್ನು ಸೇರಿಸುವಲ್ಲಿ ಯಶಸ್ವಿಯಾಗಿತ್ತು.

Apna Dal Will Contest Many More Seats Than 11 In uttar pradesh, Says BJP Ally Leader Anupriya Patel

11ರಲ್ಲಿ 9 ಸ್ಥಾನಗಳನ್ನು ಗೆದ್ದಿದ್ದ ಅಪ್ನಾ ದಳ:
ಕಳೆದ 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಸಂಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿತು. ಅಂದು ರಾಜ್ಯದ 11 ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ ಅಪ್ನಾ ದಳ ಈ ಪೈಕಿ 9 ಕ್ಷೇತ್ರಗಳನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. 2019ರ ಲೋಕಸಭೆ ಚುನಾವಣೆ ಸಂದರ್ಭಕ್ಕೂ ಮೊದಲು "ಬಿಜೆಪಿ ತನ್ನ ಮಿತ್ರಪಕ್ಷಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ," ಎಂದು ಆರೋಪಿಸಿ ಮೈತ್ರಿ ಕಡಿದುಕೊಳ್ಳುವ ಬೆದರಿಕೆ ಹಾಕಿತ್ತು.
ರಾಜ್ಯದಲ್ಲಿಯೂ ಅದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಿತ್ತು ಮತ್ತು ಮಿತ್ರರನ್ನು ನಡೆಸಿಕೊಳ್ಳುವ ಬಗ್ಗೆ ದೂಷಿಸಲಾಗಿತ್ತು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ಕೆಳಜಾತಿಗಳು ಎಂದು ಕರೆಯಲ್ಪಡುವವರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಲಾಗಿತ್ತು. ರಾಜ್ಯ ಬಿಜೆಪಿ ನಾಯಕತ್ವವು ನಮಗೆ ಅರ್ಹವಾದ ಗೌರವವನ್ನು ನೀಡುತ್ತಿಲ್ಲ" ಎಂದು ಅನುಪ್ರಿಯಾ ಪಟೇಲ್ ಅವರ ಪತಿ, ಅಪ್ನಾ ದಳದ ನಾಯಕ ಆಶಿಶ್ ಪಟೇಲ್ ಕೇಂದ್ರ ನಾಯಕತ್ವದ ಮಧ್ಯಸ್ಥಿಕೆಗೆ ಕೋರಿದ್ದರು. ಕಳೆದ ಜುಲೈನಲ್ಲಿ ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಆರೋಗ್ಯ ಖಾತೆಯನ್ನು ಹೊಂದಿದ್ದ ಅನುಪ್ರಿಯಾ ಪಟೇಲ್ ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಲಾಯಿತು.

ಉತ್ತರ ಪ್ರದೇಶದಲ್ಲಿ ಚುನಾವಣೆ:
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.

ಯುಪಿಯಲ್ಲಿ ವಿಧಾನಸಭೆ ಫಲಿತಾಂಶ:
ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

English summary
Apna Dal Will Contest Many More Seats Than 11 In uttar pradesh, Says BJP Ally Leader Anupriya Patel
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X