ಬಿಜೆಪಿಗೆ ರಾಜೀನಾಮೆ ನೀಡಿದ ಮರುದಿನವೇ ಸ್ವಾಮಿ ಪ್ರಸಾದ್ ಮೌರ್ಯಗೆ ಅರೆಸ್ಟ್‌ ವಾರೆಂಟ್‌!

ಲಕ್ನೋ, ಜನವರಿ 12: ಉತ್ತರ ಪ್ರದೇಶ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಬಿಜೆಪಿ ತೊರೆದ ನಂತರ, ಏಳು ವರ್ಷಗಳ ಹಿಂದಿನ ಪ್ರಕರಣದಲ್ಲಿ ಅರೆಸ್ಟ್‌ ವಾರೆಂಟ್‌ ಜಾರಿ ಮಾಡಲಾಗಿದೆ. ಈ ಅರೆಸ್ಟ್‌ ವಾರಂಟ್‌ 2014 ರ ಪ್ರಕರಣಕ್ಕೆ ಸಂಬಂಧಿಸಿದೆ. ಸ್ವಾಮಿ ಪ್ರಸಾದ್ ಮೌರ್ಯ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದ್ದು ಈ ವಿಚಾರದಲ್ಲಿ ಅರೆಸ್ಟ್‌ ವಾರೆಂಟ್‌ ಜಾರಿ ಮಾಡಲಾಗಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಜನವರಿ 24 ರಂದು ವಿಶೇಷ ಸಂಸದ-ಶಾಸಕ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಉತ್ತರ ಪ್ರದೇಶದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಆ ಬಳಿಕ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ.

ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ಸಂಪುಟ ಮತ್ತು ಬಿಜೆಪಿಗೆ ರಾಜೀನಾಮೆ ನೀಡಿದ ನಂತರ, ರಾಜ್ಯದ ಇತರ ಮೂವರು ಬಿಜೆಪಿ ಶಾಸಕರು ಕೂಡಾ ಪಕ್ಷವನ್ನು ತೊರೆದಿದ್ದಾರೆ. ಇದರಲ್ಲಿ ತಿಲ್ಹಾರ್ ಶಾಸಕ ರೋಷನ್ ಲಾಲ್ ವರ್ಮಾ, ಬಿಲ್ಹೌರ್ ಶಾಸಕ ಭಗವತಿ ಪ್ರಸಾದ್ ಸಾಗರ್ ಮತ್ತು ತಿಂದವಾರಿ ಶಾಸಕ ಬ್ರಜೇಶ್ ಪ್ರಜಾಪತಿ ಸೇರಿದ್ದಾರೆ.

Arrest warrant issued against ex-UP Minister Swami Prasad Maurya in 7-year-old case

ಸ್ವಾಮಿ ಪ್ರಸಾದ್ ಮೌರ್ಯ ಅವರಂತೆ, ರೋಷನ್ ಲಾಲ್ ವರ್ಮಾ ಕೂಡ ಈ ವರ್ಷದ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದಾರೆ. ಉತ್ತರ ಪ್ರದೇಶದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ದಲಿತರು, ರೈತರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳು ಮತ್ತು ನಿರುದ್ಯೋಗಿ ಯುವಕರ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ತಮ್ಮ ಪತ್ರದಲ್ಲಿ ಆರೋಪ ಮಾಡಿದ್ದಾರೆ.

ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ಪತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳ ನಂತರ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ನಾಯಕನೊಂದಿಗಿನ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಸ್ವಾಮಿ ಪ್ರಸಾದ್ ಮೌರ್ಯರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. "ಮೌರ್ಯ ಯಾವಾಗಲೂ ನ್ಯಾಯದ ಪರವಾಗಿದ್ದಾರೆ. ಜನಸಾಮಾನ್ಯರಲ್ಲಿ ಚಿರಪರಿಚಿತ ವ್ಯಕ್ತಿಯಾಗಿದ್ದಾರೆ. ನಾನು ಅವರನ್ನು ಮತ್ತು ಇತರ ಎಲ್ಲಾ ನಾಯಕರು, ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಸಮಾಜವಾದಿ ಪಕ್ಷಕ್ಕೆ ಸ್ವಾಗತಿಸುತ್ತೇನೆ," ಅಖಿಲೇಶ್ ಯಾದವ್ ಹೇಳಿದ್ದಾರೆ.

24 ಗಂಟೆಗಳಲ್ಲಿ ಎಂಟು ಮಂದಿ ರಾಜೀನಾಮೆ

ಉತ್ತರ ಪ್ರದೇಶದ ಸಚಿವ ದಾರಾ ಸಿಂಗ್ ಚೌಹಾಣ್ ಬುಧವಾರ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಇವರು ವಿಧಾನಸಭೆ ಚುನಾವಣೆಗೂ ಮುನ್ನ ರಾಜೀನಾಮೆ ನೀಡಿದ ಉತ್ತರ ಪ್ರದೇಶದ ಎರಡನೇ ಸಚಿವರಾಗಿದ್ದಾರೆ. ರಾಜ್ಯದಲ್ಲಿ ಈಗ ಒಟ್ಟು ಆರು ಶಾಸಕರು ರಾಜೀನಾಮೆ ನೀಡಿದ್ದಾರೆ. ಮಂಗಳವಾರ ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಸಂಪುಟ ಮತ್ತು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ರಾಜೀನಾಮೆ ನೀಡಿದ್ದರು. ರಾಜ್ಯದ ಇತರ ನಾಲ್ವರು ಶಾಸಕರು ಇದನ್ನೇ ಅನುಸರಿಸಿ ಬಿಜೆಪಿ ತೊರೆದಿದ್ದಾರೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ. ಪಂಜಾಬ್, ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. (ಒನ್‌ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+