ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಐಎಂಐಎಂ ಮುಖ್ಯಸ್ಥನ ಮೇಲೆ ದಾಳಿ ಪ್ರಕರಣ: ಝಡ್ ಭದ್ರತೆ ತಿರಸ್ಕರಿಸಿದ ಓವೈಸಿ

|
Google Oneindia Kannada News

ಲಕ್ನೋ ಫೆಬ್ರವರಿ 04: ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಗೃಹ ಸಚಿವಾಲಯ ನೀಡಿದ ಝಡ್ ಕೆಟಗರಿ ಭದ್ರತೆಯನ್ನು ತಿರಸ್ಕರಿಸಿದ್ದಾರೆ.

ಉತ್ತರಪ್ರದೇಶದ ಮೀರತ್ ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಓವೈಸಿ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ 24ರಲ್ಲಿನ ಹಪೂರ್- ಗಾಜಿಯಾಬಾದ್ ಮಾರ್ಗದ ಛಿಜರ್ಸಿ ಟೋಲ್ ಪ್ಲಾಜಾ ಬಳಿ ನಿನ್ನೆ ಸಂಜೆ 6 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿರುವುದಾಗಿ ಓವೈಸಿ ಅವರು ಹೇಳಿಕೊಂಡಿದ್ದಾರೆ. ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಳಿಕ ಇಬ್ಬರನ್ನು ಬಂಧಿಸಲಾಗಿದೆ ಎಂದು ಉತ್ತರಪ್ರದೇಶ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಓವೈಸಿ, ಎಲ್ಲರೂ ಸುರಕ್ಷಿತವಾಗಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ. ಓವೈಸಿ, ಪೊಲೀಸರು ಶೂಟರ್‌ಗಳಲ್ಲಿ ಇಬ್ಬನನ್ನು ಬಂಧಿಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದು ಓವೈಸಿ ಒತ್ತಾಯಿಸಿದರು.

ಘಟನೆ ನಂತರ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF)ಯ Z ಕೆಟಗರಿ ಭದ್ರತೆಯನ್ನು ಒದಗಿಸಲು ಸರ್ಕಾರ ನಿರ್ಧರಿಸಿತ್ತು. ಆದರೆ ಈ ಭದ್ರತೆಯನ್ನು ಓವೈಸಿ ನಿರಾಕರಿಸಿದ್ದಾರೆ.

Asaduddin Owaisi Rejects Z Security, Wants Anti-Terror Case Over Shooting

ಮೀರತ್‌ನ ಕಿತೌಧ್ ಪ್ರದೇಶದಲ್ಲಿ ಅವರ ಬೆಂಗಾವಲು ಪಡೆಯ ಮೇಲೆ ಗುಂಡು ಹಾರಿಸಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಸಚಿನ್ ನೋಯ್ಡಾ ನಿವಾಸಿಯಾಗಿದ್ದು, ಈತನ ವಿರುದ್ಧ ಈ ಹಿಂದೆ ಕೊಲೆ ಯತ್ನ ಪ್ರಕರಣವಿದೆ. ತಾನು ಕಾನೂನು ಪದವಿ ಪಡೆದಿದ್ದೇನೆ ಎಂದು ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದು, ಪೊಲೀಸರು ಅದನ್ನು ಪರಿಶೀಲಿಸುತ್ತಿದ್ದಾರೆ. ತನ್ನ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ, ಸಚಿನ್ ತಾನು ಹಿಂದೂ ಬಲಪಂಥೀಯ ಸಂಘಟನೆಯ ಸದಸ್ಯ ಎಂದು ಹೇಳಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರು ಆತನ ಹೇಳಿಕೆಯನ್ನು ತನಿಖೆ ಮಾಡುತ್ತಿದ್ದಾರೆ.

ಮತ್ತೋರ್ವ ಆರೋಪಿ ಸಹಾರನ್‌ಪುರದ ರೈತ ಶುಭಂ ಎಂದು ಗುರುತಿಸಲಾಗಿದೆ. ಈತ ಅಪರಾಧ ದಾಖಲೆ ಹೊಂದಿಲ್ಲ. ಪೋಲೀಸರ ಪ್ರಕಾರ, ಓವೈಸಿ ಮತ್ತು ಅವರ ಸಹೋದರ ಮತ್ತು ಶಾಸಕ ಅಕ್ಬರುದ್ದೀನ್ ಓವೈಸಿ ಹೇಳಿಕೆಗಳಿಂದ ತಾವು ಅಸಮಾಧಾನಗೊಂಡಿದ್ದೇವೆ ಎಂದು ಇಬ್ಬರು ವಿಚಾರಣೆಯ ಸಮಯದಲ್ಲಿ ಹೇಳಿದ್ದಾರೆ. ಹೀಗಾಗಿ ಅವರ ಮೇಲೆ ದಾಳಿ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.

Asaduddin Owaisi Rejects Z Security, Wants Anti-Terror Case Over Shooting

ಇವರಿಂದ ಇತ್ತೀಚೆಗೆ ಖರೀದಿಸಿದ್ದ ಕಂಟ್ರಿಮೇಡ್ ಪಿಸ್ತೂಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೀಗ ಬಂದೂಕು ಖರೀದಿಸಿದವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಟೋಲ್ ಪ್ಲಾಜಾದಿಂದ ಓವೈಸಿ ಅವರು ಟ್ವೀಟ್ ಮಾಡಿದ ಫೋಟೋಗಳಲ್ಲಿ ಅವರ ಬಿಳಿ SUV ಕಾರಿನ ಮೇಲೆ ಬುಲೆಟ್ ದಾಳಿಯಿಂದಾದ ಹಾನಿಯನ್ನು ಕಾಣಬಹುದು. ಮೂರನೇ ಬುಲೆಟ್ ಟೈರ್‌ಗೆ ತಗುಲಿದೆ ಎನ್ನಲಾಗಿದೆ. ಹೀಗಾಗಿ ಸಂಸದರು ಮತ್ತೊಂದು ಕಾರಿನಲ್ಲಿ ಸ್ಥಳದಿಂದ ತೆರಳಿದರು.

Recommended Video

ಯೋಗಿ ಆದಿತ್ಯನಾಥ್ ಕಿವಿ ಓಲೆ ಮತ್ತು ರುದ್ರಾಕ್ಷಿ ಮಾಲೆಯ ಬೆಲೆ ಎಷ್ಟು ಗೊತ್ತಾ? | Oneindia Kannada

ಫೆಬ್ರವರಿ 10 ರಿಂದ ಪ್ರಾರಂಭವಾಗುವ ಉತ್ತರ ಪ್ರದೇಶ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಎಐಎಂಐಎಂ ನಾಯಕ ಮೀರತ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 11 ಜಿಲ್ಲೆಗಳಲ್ಲಿ ಒಟ್ಟು 58 ವಿಧಾನಸಭಾ ಸ್ಥಾನಗಳಿಗೆ ಫೆಬ್ರವರಿ 10 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

English summary
Asaduddin Owaisi, MP and chief of the All India Majlis-e-Ittehadul Muslimeen (AIMIM), turned down an offer for 'Z' category security cover, a day after shots were fired at his car while he was returning to Delhi after campaigning in Uttar Pradesh's Meerut.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X