Breaking; ಲಖೀಂಪುರ ಗಲಭೆ; ಜೈಲಿಗೆ ಮರಳಿದ ಆಶಿಷ್ ಮಿಶ್ರಾ

ಲಕ್ನೋ, ಏಪ್ರಿಲ್ 24; ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಆಶಿಷ್‌ ಮಿಶ್ರಾ ಜೈಲಿಗೆ ಮರಳಿದರು. ಆರೋಪಿ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಒಂದು ವಾರದಲ್ಲಿ ಪೊಲೀಸರ ಮುಂದೆ ಹಾಜರಾಗಬೇಕು ಎಂದು ಏಪ್ರಿಲ್‌ 18ರಂದು ಕೋರ್ಟ್ ಆದೇಶ ನೀಡಿತ್ತು.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾರ ಪುತ್ರ ಆಶಿಷ್‌ ಮಿಶ್ರಾ ಲಖೀಂಪುರ ಖೇರಿ ಗಲಭೆ ಪ್ರಕರಣದ ಆರೋಪಿ. ಸುಮಾರು 120ಕ್ಕೂ ಅಧಿಕ ದಿನ ಜೈಲಿನಲ್ಲಿದ್ದ ಆರೋಪಿಗೆ ಫೆಬ್ರವರಿಯಲ್ಲಿ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿತ್ತು.

ಆದರೆ ಆಶಿಷ್‌ ಮಿಶ್ರಾಗೆ ಜಾಮೀನು ನೀಡಿರುವುದನ್ನು ಲಖೀಂಪುರ ಖೇರಿ ಗಲಭೆಯಲ್ಲಿ ಮೃತಪಟ್ಟ ರೈತರ ಕುಟುಂಬದವರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಏಪ್ರಿಲ್ 18ರಂದು ಜಾಮೀನು ರದ್ದು ಮಾಡಿತ್ತು.

Ashish Mishra Returns To Jail After Supreme Court Cancels Bail

ಗಲಭೆ ಪ್ರಕರಣದ ಆರೋಪಿ ಆಶಿಷ್ ಮಿಶ್ರಾ ಜಾಮೀನು ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅವರ ನೇತೃತ್ವದ ಪೀಠ ಒಂದು ವಾರದಲ್ಲಿ ಪೊಲೀಸರ ಮುಂದೆ ಹಾಜರಾಗಬೇಕು ಎಂದು ಸೂಚನೆ ನೀಡಿತ್ತು. ಈ ಹಿನ್ನಲೆಯಲ್ಲಿ ಭಾನುವಾರ ಆಶಿಷ್ ಮಿಶ್ರಾ ಜೈಲಿಗೆ ಮರಳಿದರು.

2021ರ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಗಲಭೆ ನಡೆದಿತ್ತು. ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹತ್ತಿಸಲಾಗಿತ್ತು. ನಾಲ್ವರು ರೈತರು ಮೃತಪಟ್ಟಿದ್ದರು. ಬಳಿಕ ಆಕ್ರೋಶಗೊಂಡ ರೈತರು ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಆಶಿಷ್‌ ಮಿಶ್ರಾ ಕಾರು ಓಡಿಸುತ್ತಿದ್ದರು ಎಂಬುದು ಆರೋಪವಾಗಿದೆ.

2022ರ ಫೆಬ್ರವರಿ 10ರಂದು ಅಲಹಾಬಾದ್ ಹೈಕೋರ್ಟ್ ಆಶಿಷ್‌ ಮಿಶ್ರಾಗೆ ಜಾಮೀನು ನೀಡಿತ್ತು. ಗಲಭೆಯಲ್ಲಿ ಮೃತಪಟ್ಟ ರೈತರ ಕುಟುಂಬದವರು ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+