ವಿಧಾನಸಭಾ ಚುನಾವಣೆ: ಶಿವಪಾಲ್ ಸಿಂಗ್ ಭೇಟಿ ಮಾಡಿದ ಅಖಿಲೇಶ್ ಯಾದವ್

ಲಕ್ನೋ, ಡಿಸೆಂಬರ್ 16: ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಜನವರಿ 5ರ ನಂತರ ಯಾವಾಗ ಬೇಕಾದರೂ ಚುನಾವಣಾ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗುತ್ತಿದೆ. ಈ ನಡುವೆ ಉತ್ತರ ಪ್ರದೇಶದ ರಾಜಕೀಯಕ್ಕೆ ಸಂಬಂಧಿಸಿದ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ವಾಸ್ತವವಾಗಿ, ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ತಮ್ಮ ಚಿಕ್ಕಪ್ಪ, ಪಿಎಸ್‌ಪಿಎಲ್ ಸ್ಥಾಪಕ ಶಿವಪಾಲ್ ಸಿಂಗ್ ಯಾದವ್ ಅವರ ಮನೆಗೆ ಇಂದು (ಡಿಸೆಂಬರ್ 16) ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಬಹಳ ಸಮಯದ ನಂತರ ಅಖಿಲೇಶ್ ಯಾದವ್ ಚಿಕ್ಕಪ್ಪ ಶಿವಪಾಲ್ ಅವರನ್ನು ಭೇಟಿ ಮಾಡಿದ್ದು ಭಾರೀ ಕುತೂಹಲ ಮೂಡಿಸಿದೆ. ಅವರು ತಮ್ಮ ಚಿಕ್ಕಪ್ಪ ಶಿವಪಾಲ್ ಯಾದವ್ ಅವರನ್ನು ಭೇಟಿ ಮಾಡಲು ಲಕ್ನೋ ನಿವಾಸಕ್ಕೆ ತೆರಳಿದ್ದು ಬಹಳ ಸಮಯದವರೆಗೆ ಶಿವಪಾಲ್ ಅವರೊಂದಿಗೆ ಮಾತನಾಡಿದ್ದಾರೆ. ಉಭಯ ನಾಯಕರ ನಡುವೆ ಗುಪ್ತ ಮಾತುಕತೆ ನಡೆಯುತ್ತಿದೆ. ಯುಪಿ ಚುನಾವಣೆಯಲ್ಲಿ ಎಸ್‌ಪಿ ಮತ್ತು ಪಿಎಸ್‌ಪಿ ಮೈತ್ರಿಗೆ ಸಂಬಂಧಿಸಿದಂತೆ ಈ ಸಂಭಾಷಣೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಬಹಳ ದಿನಗಳ ಹಿಂದೆ ಶಿವಪಾಲ್ ಸಿಂಗ್ ಯಾದವ್ ಅವರು ಅಖಿಲೇಶ್ ಜೊತೆಗಿನ ಮೈತ್ರಿ ಬಗ್ಗೆ ಹೇಳಿಕೆ ನೀಡಿದ್ದರು. ಆದರೆ ಅಖಿಲೇಶ್ ಯಾದವ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇಷ್ಟೇ ಅಲ್ಲ, ಶಿವಪಾಲ್ ಯಾದವ್ ಅವರು ತಮ್ಮ ಪಕ್ಷವನ್ನು ಎಸ್‌ಪಿಯೊಂದಿಗೆ ವಿಲೀನಗೊಳಿಸಲು ಸಿದ್ಧ ಎಂದು ನವೆಂಬರ್‌ನಲ್ಲಿ ಪಿಟಿಐಗೆ ತಿಳಿಸಿದ್ದರು. ಯುಪಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಗೆಲ್ಲುವ ಅಭ್ಯರ್ಥಿಗಳಿಗೆ ಅಖಿಲೇಶ್ ಯಾದವ್ ಮಾತ್ರ ಟಿಕೆಟ್ ನೀಡಬೇಕಾಗುತ್ತದೆ.

Assembly elections: Akhilesh Yadav meets Shivpal Singh

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ತಮ್ಮ ಚಿಕ್ಕಪ್ಪ ಶಿವಪಾಲ್ ಯಾದವ್ ಅವರ ಪ್ರಗತಿಶೀಲ ಸಮಾಜವಾದಿ ಪಾರ್ಟಿ ಲೋಹಿಯಾ (ಪಿಎಸ್‌ಪಿಎಲ್) ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಸಮಾಜವಾದಿ ಪಕ್ಷವು ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ. ನನ್ನ ಚಿಕ್ಕಪ್ಪನ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳಲಿದ್ದೇವೆ. ಸಮಾಜವಾದಿ ಪಕ್ಷವು ಅವರಿಗೆ ಸಂಪೂರ್ಣ ಗೌರವವನ್ನು ನೀಡುತ್ತದೆ ಎಂದು ಅಖಿಲೇಶ್ ಯಾದವ್ ಈ ತಿಂಗಳ ಆರಂಭದಲ್ಲಿ​ ಹೇಳಿದ್ದರು.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಎಸ್‌ಪಿಯಿಂದ ಬೇರ್ಪಟ್ಟು ಪ್ರಗತಿಶೀಲ ಸಮಾಜವಾದಿ ಪಕ್ಷ -ಲೋಹಿಯಾ (ಪಿಎಸ್‌ಪಿ-ಎಲ್) ಸ್ಥಾಪಿಸಿದ ತಮ್ಮ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಅವರಿಗೆ ಪಕ್ಷದಿಂದ 'ತಕ್ಕ ಗೌರವ' ಸಿಗಲಿದೆ ಎಂದು ಮಾಜಿ ಸಿಎಂ ಹೇಳಿದ್ದಾರೆ. ಅಖಿಲೇಶ್ ಯಾದವ್ ಅವರ ನಿರ್ಧಾರವನ್ನು ಸ್ವಾಗತಿಸಿರುವ ಸಮಾಜವಾದಿ ಪಕ್ಷದ ವಕ್ತಾರರು, ಈಗ ರಚಿಸಲಾಗುತ್ತಿರುವ ಮೈತ್ರಿಕೂಟವು ಸಮಾಜವಾದಿ ಸಿದ್ಧಾಂತದ ಆಧಾರದ ಮೇಲೆ ಮುಂದಿನ ಚುನಾವಣೆಯಲ್ಲಿ ಗೆದ್ದು, ಪ್ರಬಲ ಸರ್ಕಾರವನ್ನು ರಚಿಸಲಿದೆ ಎಂದು ಹೇಳಿದ್ದಾರೆ.

ಚಿಕ್ಕಪ್ಪ ಶಿವಪಾಲ್ ಯಾದವ್ ಅವರ ಪ್ರಗತಿಶೀಲ ಸಮಾಜವಾದಿ ಪಕ್ಷ ಲೋಹಿಯಾ (ಪಿಎಸ್‌ಪಿಎಲ್) ದಿಂದ ನೆರವು ಕುರಿತಂತೆ ಪ್ರತಿತ್ರಿಯಿಸಿದ ಅಖಿಲೇಶ್ ಯಾದವ್, ಇದರಲ್ಲಿ ನನಗೆ ಯಾವುದೇ ಸಮಸ್ಯೆ ಇಲ್ಲ, ಅವರಿಗೆ ಹಾಗೂ ಅವರ ಕಡೆಯವರಿಗೆ ಸರಿಯಾದ ಗೌರವವನ್ನು ನೀಡಲಾಗುವುದು ಎಂದು ಹೇಳಿದರು.

2022ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಲಿದ್ದಾರೆ ಎಂದು ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದರು. ಉತ್ತರಪ್ರದೇಶ ಚುನಾವಣೆ ಹೊಸ ರಣತಂತ್ರಒಬಿಸಿ ಮತಗಳತ್ತ ಅಖಿಲೇಶ್ ಚಿತ್ತ, ಉತ್ತರಪ್ರದೇಶ ಚುನಾವಣೆ ಹೊಸ ರಣತಂತ್ರ "ಬಿಜೆಪಿ ಸರ್ಕಾರದ ವಿರುದ್ಧದ ನಿರಾಶೆಯನ್ನು ನೋಡಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮತದಾರರು ನಮ್ಮ ಪಕ್ಷವನ್ನು 400 ಕ್ಷೇತ್ರಗಳಲ್ಲಿ ಗೆಲ್ಲುವಂತೆ ಮಾಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+