ಯುಪಿ: ಹಿಂದುತ್ವವಾದಿಗಳಾಗಲು ಓವೈಸಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳು

ಲಕ್ನೋ ಏಪ್ರಿಲ್ 12: ಹಿಂದುತ್ವವಾದಿಗಳಾಗಲು ಬಯಸಿದ್ದ ಆರೋಪಿಗಳು ಉತ್ತರಪ್ರದೇಶ ವಿಧಾನಸಭೆ ಚುನಾವಣೆ ವೇಳೆ ಓವೈಸಿ ಮೇಲೆ ಹಲ್ಲೆ ನಡೆಸಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಈ ವರ್ಷದ ಫೆಬ್ರವರಿಯಲ್ಲಿ ಉತ್ತರ ಪ್ರದೇಶದಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಮತ್ತು ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಇಬ್ಬರು ವ್ಯಕ್ತಿಗಳು ದಾಳಿಯನ್ನು ಮಾಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿನ್ ಮತ್ತು ಶುಭಂ ಎಂಬಿಬ್ಬರನ್ನು ಬಂಧಿಸಲಾಯಿತು.

ಈ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಅದು ಸುದ್ದಿಗಾರರಿಗೆ ಲಭ್ಯವಾಗಿದೆ. ಆರೋಪಪಟ್ಟಿಯ ಪ್ರಕಾರ, ಇಬ್ಬರು ದಾಳಿಕೋರರು ಓವೈಸಿ ಮೇಲೆ ಹಲ್ಲೆ ನಡೆಸಿರುವುದನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಇದಕ್ಕೆ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಬೇರೆ ಸಮುದಾಯದ ಒಬ್ಬ ದೊಡ್ಡ ರಾಜಕಾರಣಿಯನ್ನು ಕೊಂದು 'ಹಿಂದುತ್ವ ನಾಯಕ'ರಾಗಲು ಬಯಸಿದ್ದೇ ಅವರ ದಾಳಿಯ ಹಿಂದಿನ ಉದ್ದೇಶ ಎಂದು ಆರೋಪಪಟ್ಟಿ ಹೇಳುತ್ತದೆ.

ಇದಲ್ಲದೆ ಚಾರ್ಜ್‌ಶೀಟ್‌ನಲ್ಲಿ ಸಂಸದ ಅಸಾದುದ್ದೀನ್ ಓವೈಸಿ ಅವರನ್ನು ಸಂಪೂರ್ಣ ಸಿದ್ಧತೆಯೊಂದಿಗೆ ಕೊಲ್ಲಲು ಪ್ರಯತ್ನಿಸಲಾಯಿತು. ದಾಳಿಯಲ್ಲಿ ಯಾರಾದರೂ ಗಾಯಗೊಂಡಿದ್ದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿತ್ತು. ಕೆಲವು ಸಮಾಜ ವಿರೋಧಿ ಶಕ್ತಿಗಳು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತಿದ್ದವು ಎಂದು ಬರೆಯಲಾಗುದೆ.

Attack on Owaisi : Men who attacked Asaduddin Owaisi wanted to become Hindutva netas, says chargesheet

ಪೊಲೀಸರು ದಾಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಆರೋಪಪಟ್ಟಿಯಲ್ಲಿ ಸಾಕ್ಷ್ಯವಾಗಿ ಪ್ರಸ್ತುತಪಡಿಸಿದ್ದಾರೆ. ಕಾರಿನ ವಿಧಿವಿಜ್ಞಾನ ಪರೀಕ್ಷೆ ಮತ್ತು ಇಬ್ಬರು ಪ್ರಮುಖ ಆರೋಪಿಗಳು ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸಿದ ವ್ಯಕ್ತಿಯ ಹೇಳಿಕೆಗಳನ್ನು ನೀಡಲಾಗಿದೆ. ಜೊತೆಗೆ ಸಂಸದ ಓವೈಸಿ ಹೇಳಿಕೆಯನ್ನೂ ಆರೋಪಪಟ್ಟಿಯಲ್ಲಿ ಸೇರಿಸಲಾಗಿದೆ. ಒಟ್ಟು 61 ಜನರ ಹೇಳಿಕೆಗಳನ್ನು ಸೇರಿಸಲಾಗಿದೆ. ಘಟನೆಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆಗೆ ಯತ್ನ) ಮತ್ತು 120 ಬಿ (ಅಪರಾಧ ಸಂಚು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಓವೈಸಿ ಕಾರ್ ದಾಳಿ

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಮತ್ತು ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿ ಅವರು ಫೆಬ್ರವರಿ 3 ರಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ಚುನಾವಣಾ ಸಂಬಂಧಿತ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹಿಂದಿರುಗುತ್ತಿದ್ದಾಗ ಛಜರ್ಸಿ ಟೋಲ್ ಪ್ಲಾಜಾ ಬಳಿ ಅವರ ವಾಹನದ ಮೇಲೆ ಗುಂಡು ಹಾರಿಸಲಾಯಿತು. ಈ ವೇಳೆ ಅವರು ಗಾಯಗಳಿಲ್ಲದೆ ಪಾರಾಗಿದ್ದಾರೆ.

Attack on Owaisi : Men who attacked Asaduddin Owaisi wanted to become Hindutva netas, says chargesheet

ಹಾಪುರ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾರ, ಪ್ರಮುಖ ಆರೋಪಿ ಸಚಿನ್ ಗುಂಡುಗಳನ್ನು ಹಾರಿಸಿದ್ದಾನೆ. ಆತನಿಂದ 9 ಎಂಎಂ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಚಿನ್ ಮತ್ತು ಶುಭಂನನ್ನು ಬಂಧಿಸಿದ್ದಾರೆ. ದಾಳಿಯ ನಂತರ, ಕೇಂದ್ರವು ಓವೈಸಿಗೆ Z ಕೆಟಗರಿ ಭದ್ರತೆಯನ್ನು ಒದಗಿಸಿದೆ ಆದರೆ ಅವರು ಅದನ್ನು ನಿರಾಕರಿಸಿದರು ಮತ್ತು ನ್ಯಾಯಯುತ ತನಿಖೆಯನ್ನು ಮಾತ್ರ ಬಯಸುವುದಾಗಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+