ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಂಕು ಸ್ಥಾಪನೆ; ಅತಿಥಿಗಳು ಯಾರು?

|
Google Oneindia Kannada News

ಅಯೋಧ್ಯೆ, ಜುಲೈ 21 : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಶಂಕು ಸ್ಥಾಪನೆ ಮಾಡಲಾಗುತ್ತದೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅತಿಥಿಗಳು ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಕೊರೊನಾ ವೈರಸ್ ಸೋಂಕಿನ ಸಂದರ್ಭದಲ್ಲಿ ದೇಶದಲ್ಲಿ ಹೆಚ್ಚು ಜನರು ಸೇರುವಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತಿಲ್ಲ. ರಾಮ ಮಂದಿರ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡುವ ಕಾರ್ಯಕ್ರಮದಲ್ಲಿ ಕೆಲವು ಗಣ್ಯರಿಗೆ ಮಾತ್ರ ಪ್ರವೇಶವಿದೆ.

ರಾಮ ಮಂದಿರ ನಿರ್ಮಿಸಿದರೆ ಕೊವಿಡ್-19 ಹೋಗಲಾಡಿಸಲು ಸಾಧ್ಯವೆ? ರಾಮ ಮಂದಿರ ನಿರ್ಮಿಸಿದರೆ ಕೊವಿಡ್-19 ಹೋಗಲಾಡಿಸಲು ಸಾಧ್ಯವೆ?

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಆದರೆ, ಇನ್ನೂ ಪ್ರಧಾನಿಗಳು ಭಾಗವಹಿಸುವ ಕುರಿತು ಅವರ ಕಚೇರಿಯಿಂದ ಖಚಿತವಾದ ಮಾಹಿತಿ ಸಿಕ್ಕಿಲ್ಲ. ಒಟ್ಟು 50 ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಸಿಕ್ಕಿದೆ.

6 ತಿಂಗಳಿನಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ 6 ತಿಂಗಳಿನಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ

ಶಂಕು ಸ್ಥಾಪನೆ ಸಮಾರಂಭಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಶಂಕು ಸ್ಥಾಪನೆ ಕಾರ್ಯಕ್ರಮದ ದಿನ 40 ಕೆಜಿ ಬೆಳ್ಳಿಯ ಇಟ್ಟಿಗೆಯನ್ನು ಇಡಲಾಗುತ್ತದೆ. ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕಾರ್ಯಕ್ರಮದ ಸಂಪೂರ್ಣ ಹೊಣೆಯನ್ನು ಹೊತ್ತುಕೊಂಡಿದೆ.

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಟ್ರಸ್ಟ್ ಮುಖ್ಯಸ್ಥರಿಗೆ Z+ ಭದ್ರತೆ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಟ್ರಸ್ಟ್ ಮುಖ್ಯಸ್ಥರಿಗೆ Z+ ಭದ್ರತೆ

ಮೂರು ದಿನದ ಕಾರ್ಯಕ್ರಮ

ಮೂರು ದಿನದ ಕಾರ್ಯಕ್ರಮ

ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯಗೋಪಾಲ್ ದಾಸ್ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ್ದಾರೆ. "ಒಟ್ಟು ಮೂರು ದಿನಗಳ ಕಾರ್ಯಕ್ರಮ ನಡೆಯಲಿದೆ. ಶಂಕು ಸ್ಥಾಪನೆ ಕಾರ್ಯಕ್ರಮಕ್ಕೂ ಮೊದಲ ಎರಡು ದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ" ಎಂದು ಹೇಳಿದ್ದಾರೆ.

40 ಕೆಜಿ ಬೆಳ್ಳಿ ಇಟ್ಟಿಗೆ

40 ಕೆಜಿ ಬೆಳ್ಳಿ ಇಟ್ಟಿಗೆ

ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಶಂಕು ಸ್ಥಾಪನೆ ಮಾಡಲಾಗುತ್ತದೆ. ಅಂದು 40 ಕೆಜಿ ಬೆಳ್ಳಿಯ ಇಟ್ಟಿಗೆಯನ್ನು ಇಟ್ಟು ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತದೆ. ಸುಪ್ರೀಂಕೋರ್ಟ್ ಆದೇಶದಂತೆ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಾಮ ಮಂದಿರ ನಿರ್ಮಾಣದ ಉಸ್ತುವಾರಿಯನ್ನು ನೋಡಿಕೊಳ್ಳಲಿದೆ.

50ಕ್ಕಿಂತ ಹೆಚ್ಚು ಜನರು ಬರುವುದಿಲ್ಲ

50ಕ್ಕಿಂತ ಹೆಚ್ಚು ಜನರು ಬರುವುದಿಲ್ಲ

ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಪರಿಣಾಮ ರಾಮ ಮಂದಿರ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡುವುದು ಎರಡು ತಿಂಗಳು ತಡವಾಗಿದೆ. ಶಂಕು ಸ್ಥಾಪನೆ ಕಾರ್ಯಕ್ರಮಕ್ಕೂ 50ಕ್ಕಿಂತ ಹೆಚ್ಚು ಗಣ್ಯರು ಆಗಮಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಪಾಲ್ಗೊಳ್ಳುವ ಗಣ್ಯರ ಪಟ್ಟಿ

ಪಾಲ್ಗೊಳ್ಳುವ ಗಣ್ಯರ ಪಟ್ಟಿ

ರಾಮ ಮಂದಿರ ನಿರ್ಮಾಣ ಶಂಕು ಸ್ಥಾಪನೆ ಕಾರ್ಯಕ್ರಮಕ್ಕೆ ಬಿಜೆಪಿ ಹಿರಿಯ ನಾಯಕರಾದ ಎಲ್. ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಆಗಮಿಸಲಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಆಹ್ವಾನ ನೀಡಲಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಪಾಲ್ಗೊಳ್ಳುವ ನಿರೀಕ್ಷೆ ಇದೆ.

English summary
Prime minister of India Narendra Modi and other 50 VIPS will attend the Ram Mandir ground breakimg ceremony on August 5 at Uttar Pradesh Ayodhya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X