2024ರ ವೇಳೆಗೆ ಅಯೋಧ್ಯೆ ರಾಮಮಂದಿರ ಕಾಮಗಾರಿ ಪೂರ್ಣ
ಲಕ್ನೋ, ಆಗಸ್ಟ್ 5: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿ ಎರಡು ವರ್ಷಗಳ ನಂತರ, ನಿರ್ಮಾಣ ಸ್ಥಳದಲ್ಲಿ ಇಂಜಿನಿಯರ್‌ಗಳ ಪ್ರಕಾರ 40 ಪ್ರತಿಶತದಷ್ಟು ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ದೇವಾಲಯದ ಮೊದಲ ಮಹಡಿ 2024 ರ ಆರಂಭದಲ್ಲಿ ಸಿದ್ಧವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಇದು ಸ್ತಂಭ ನಿರ್ಮಾಣವಾಗಿದ್ದು, ಆ ಕಾಮಗಾರಿ ವೇಗವಾಗಿ ಪ್ರಗತಿಯಲ್ಲಿದೆ. ನಾವು ಏಕಕಾಲದಲ್ಲಿ 'ಗರ್ಭ ಗೃಹ' ಅಥವಾ ಗರ್ಭಗುಡಿ ಪ್ರದೇಶದಿಂದ ದೇವಾಲಯದ ನಿರ್ಮಾಣವನ್ನು ಪ್ರಾರಂಭಿಸಿದ್ದೇವೆ. ದೇವಾಲಯದ ಗೋಡೆಗಳಿಗೆ ರಾಜಸ್ಥಾನದ ಗುಲಾಬಿ ಮರಳುಗಲ್ಲನ್ನು ಬಳಸಲಾಗುತ್ತಿದೆ ಎಂದು ರಾಮ ಜನ್ಮಭೂಮಿ ಟ್ರಸ್ಟ್‌ನಿಂದ ನೇಮಕಗೊಂಡ 5 ಮೇಲ್ವಿಚಾರಣಾ ಮುಖ್ಯ ಎಂಜಿನಿಯರ್‌ಗಳಲ್ಲಿ ಒಬ್ಬರಾದ ಜಗದೀಶ್ ಎಂದು ಮಾಹಿತಿ ನೀಡಿದ್ದಾರೆ.
ಇಂದು ರಾಮಮಂದಿರ ನಿರ್ಮಾಣ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದು ಇಂಜಿನಿಯರ್ ಉತ್ಪಾಲ್ ಹರ್ಷ ವ್ಯಕ್ತಪಡಿಸಿದ್ದಾರೆ. ಈ ವರ್ಷದ ಜೂನ್‌ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 'ಗರ್ಭ ಗೃಹ' ಅಥವಾ ದೇವಾಲಯದ ಗರ್ಭಗುಡಿಯ ಅಡಿಪಾಯವನ್ನು ಹಾಕುವ ಸಮಾರಂಭದಲ್ಲಿ ಮೊದಲ ಕೆತ್ತನೆಯ ಕಲ್ಲನ್ನು ಇರಿಸುವ ಮೂಲಕ ಭಾಗವಹಿಸಿದ್ದರು.

ನಿರ್ಣಾಯಕ 2024ರ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಗರ್ಭಗುಡಿ ಭಕ್ತರಿಗೆ ತೆರೆಯುತ್ತದೆ. ಅಲ್ಲಿ ಬಿಜೆಪಿ ರಾಜಕೀಯ ಲಾಭವನ್ನು ನಿರೀಕ್ಷಿಸುತ್ತದೆ ಎನ್ನಲಾಗಿದೆ. ಇದಕ್ಕೆ 500 ವರ್ಷಗಳ ಕಾಲ ಹೋರಾಟವಿತ್ತು. ಆ ಹೋರಾಟ ಈಗ ಮುಕ್ತಾಯದತ್ತ ಸಾಗುತ್ತಿದೆ. ಇದು ಪ್ರತಿ ಭಾರತೀಯನ ಹೆಮ್ಮೆಯ ಕ್ಷಣ. ಆಕ್ರಮಣಕಾರರು ನಮ್ಮ ಸಂಸ್ಕೃತಿಯ ಮೇಲೆ ದಾಳಿ ಮಾಡಿದರು. ಆದರೆ ಅಂತಿಮವಾಗಿ ಭಾರತ ಗೆದ್ದಿದೆ ಎಂದು ಮುಖ್ಯಮಂತ್ರಿ ಯೋಗಿ ಹೇಳಿದ್ದರು.

ದೇವಾಲಯದ ನಿರ್ಮಾಣದ ಉಸ್ತುವಾರಿ ಹೊತ್ತ ರಾಮಜನ್ಮಭೂಮಿ ಟ್ರಸ್ಟ್ ಪ್ರಕಾರ ರಾಜಸ್ಥಾನದ ಮಕ್ರಾನಾ ಬೆಟ್ಟಗಳಿಂದ ಬಿಳಿ ಅಮೃತಶಿಲೆಗಳನ್ನು ಗರ್ಭಗುಡಿಯಲ್ಲಿ ಬಳಸಲಾಗುವುದು ಎಂದು ಹೇಳಿದೆ. ದೇವಾಲಯದ ಯೋಜನೆಗೆ 8 ರಿಂದ 9 ಲಕ್ಷ ಕ್ಯೂಬಿಕ್ ಅಡಿ ಕೆತ್ತಿದ ಮರಳುಗಲ್ಲು, 6.37 ಲಕ್ಷ ಕ್ಯೂಬಿಕ್ ಅಡಿ ಕೆತ್ತಿದ ಗ್ರಾನೈಟ್, 4.70 ಲಕ್ಷ ಕ್ಯೂಬಿಕ್ ಅಡಿ ಕೆತ್ತಿದ ಗುಲಾಬಿ ಮರಳುಗಲ್ಲು ಮತ್ತು 13,300 ಕ್ಯೂಬಿಕ್ ಅಡಿ ಮಕ್ರಾನ ಬಿಳಿ ಕೆತ್ತಿದ ಅಮೃತಶಿಲೆಯನ್ನು ದೇವಾಲಯದ ಯೋಜನೆಗೆ ಬಳಸಲಾಗುವುದು ಎಂದು ದೇವಾಲಯದ ಟ್ರಸ್ಟ್ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 2020 ರಲ್ಲಿ ನಿರ್ಮಾಣ ಪ್ರಾರಂಭವಾದ ನಂತರ 'ಭೂಮಿ ಪೂಜೆ' ಅಥವಾ ದೇವಾಲಯದ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications