• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಯೋಧ್ಯೆಯಲ್ಲಿ ರಾಮ ಮಂದಿರ 2023ರ ಡಿಸೆಂಬರ್ ವೇಳೆಗೆ ಪ್ರವೇಶಮುಕ್ತ

|
Google Oneindia Kannada News

ಅಯೋಧ್ಯೆ, ಆಗಸ್ಟ್ 4: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸುತ್ತಿರುವ ಬಹುನಿರೀಕ್ಷಿತ ರಾಮ ಮಂದಿರ ನಿರ್ಮಾಣ ಕಾರ್ಯ ಯಾವಾಗ ಪೂರ್ಣಗೊಳ್ಳುತ್ತದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. 2023ರ ಡಿಸೆಂಬರ್ ವೇಳೆಗೆ ಮುಕ್ತಾಯವಾಗಲಿದೆ ಎಂದು ಬುಧವಾರ ಎಎನ್ಐ ಸುದ್ದಿ ಸಂಸ್ಥೆ ವರದಿಮಾಡಿದೆ.

ಸುಮಾರು 70 ಎಕರೆ ಪ್ರದೇಶಗಲ್ಲಿ ನಡೆಯುತ್ತಿರುವ ಅಯೋಧ್ಯೆ ರಾಮ ಮಂದಿರ ಮತ್ತು ಸುತ್ತಮುತ್ತಲಿನಲ್ಲಿ ನಡೆಸುತ್ತಿರುವ ನಿರ್ಮಾಣ ಕಾರ್ಯವು 2025ರ ವೇಳೆಗೆ ಸಂಪೂರ್ಣವಾಗಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪದಾಧಿಕಾರಿಗಳು ಮತ್ತು ಯೋಜನೆಯ ಮೇಲ್ವಿಚಾರಕರು ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಸೀತಾಮಾತೆ ಇದ್ದ ವನದ ಕಲ್ಲು ಅಯೋಧ್ಯೆ ರಾಮಮಂದಿರಕ್ಕೆ ಬಳಕೆಶ್ರೀಲಂಕಾದಲ್ಲಿ ಸೀತಾಮಾತೆ ಇದ್ದ ವನದ ಕಲ್ಲು ಅಯೋಧ್ಯೆ ರಾಮಮಂದಿರಕ್ಕೆ ಬಳಕೆ

ಕಳೆದ ತಿಂಗಳು ಟ್ರಸ್ಟ್ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಅಧ್ಯಕ್ಷತೆಯಲ್ಲಿ 15 ಸದಸ್ಯರ ಟ್ರಸ್ಟ್ ಮಹತ್ವದ ಸಭೆ ನಡೆಸಿತ್ತು. ಎಂಜಿನಿಯರ್‌ಗಳು ಮತ್ತು ವಾಸ್ತುಶಿಲ್ಪಿಗಳೊಂದಿಗೆ ನಡೆಸಿದ ಎರಡು ದಿನಗಳ ಸಭೆಯಲ್ಲಿ ಸುರಂಗ ಕಾಮಗಾರಿ ಪೂರ್ಣಗೊಳಿಸುವುದರ ಮೆಗಾ ಪ್ರಾಜೆಕ್ಟ್‌ನ ದಿನಾಂಕವನ್ನು ನಿರ್ಧರಿಸಲಾಯಿತು.

2020ರ ಆಗಸ್ಟ್‌ 5ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನೆರವೇರಿಸಿದ್ದರು. ಅಯೋಧ್ಯೆಯಲ್ಲಿ ರಾಮ ಮಂದಿರದ ಕಾಮಗಾರಿ ನಡೆಯುತ್ತಿದ್ದು, ಸದ್ಯ ದೇವಾಲಯದ ಅಡಿಪಾಯದ ಕೆಲಸ ನಡೆಸಲಾಗುತ್ತಿದೆ. ಮುಂದಿನ ಸೆಪ್ಟೆಂಬರ್ 15ರ ಒಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ದೀಪಾವಳಿ ಹಬ್ಬದ ಬಳಿಕ ಎರಡನೇ ಹಂತದ ಕಾಮಗಾರಿ ಆರಂಭಿಸುವ ಸಾಧ್ಯತೆಯಿದೆ. ಇನ್ನೆರಡು ವರ್ಷಗಳಲ್ಲಿ ದೇಗುಲದ ಪ್ರಮುಖ ಕಾರ್ಯ ಮುಗಿಯಲಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸುವ ನಿರೀಕ್ಷೆಯಿದೆ.

ರಾಮ ಮಂದಿರ ನಿರ್ಮಾಣಕ್ಕೆ ಶ್ರೀಲಂಕಾದಿಂದ ಕಲ್ಲು:

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ, ಸೀತಾಮಾತೆ ತಂಗಿದ್ದ ಐತಿಹ್ಯವಿರುವ ಶ್ರೀಲಂಕಾದ ಸೀತಾ ಇಲಿಯಾದಲ್ಲಿನ ಅಶೋಕ ವಟಿಕದ ಕಲ್ಲೊಂದನ್ನು ಬಳಸಲು ತೀರ್ಮಾನಿಸಲಾಗಿದ್ದು, ಆ ಕಲ್ಲನ್ನು ಅಲ್ಲಿಂದ ಭಾರತಕ್ಕೆ ತರಿಸಿಕೊಳ್ಳಲಾಗುತ್ತಿದೆ. ಸೀತೆಯನ್ನು ಅಪಹರಿಸಿದ್ದ ರಾವಣ, ಆಕೆಯನ್ನು ಅಶೋಕ ವಟಿಕ ಉದ್ಯಾನದಲ್ಲಿ ಬಂಧನದಲ್ಲಿರಿಸಿದ್ದ. ಸೀತೆಯು ತಾನು ಬಂಧಿಯಾಗಿದ್ದ ಸಂದರ್ಭ ರಾಮನ ಬರುವಿಕೆಗೆ ಎದುರು ನೋಡುತ್ತಾ ಕುಳಿತಿದ್ದ ಕಲ್ಲನ್ನು ಶ್ರೀಲಂಕಾದಿಂದ ತರಿಸಿಕೊಳ್ಳುತ್ತಿರುವುದಾಗಿ ತಿಳಿದುಬಂದಿದೆ. ಶ್ರೀಲಂಕಾದ ಸೀತಾ ಇಲಿಯಾ ಗ್ರಾಮದಲ್ಲಿ ಸೀತಾ ಮಾತೆಗೆ ದೇವಾಲಯವನ್ನೂ ನಿರ್ಮಿಸಲಾಗಿದೆ.

ಭಾರತದಲ್ಲಿನ ಶ್ರೀಲಂಕಾ ಹೈಕಮಿಷನರ್ ಮಿಲಿಂದಾ ಮೊರಾಗೊಡಾ ಅವರು ಕಲ್ಲನ್ನು ಭಾರತಕ್ಕೆ ತರಲಿದ್ದಾರೆ. ಆ ಕಲ್ಲನ್ನು ಅಯೋಧ್ಯೆ ರಾಮ ಮಂದಿರದ ಆವರಣದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಲಾಗಿದೆ. "ಸೀತಾಮಾತೆ ಬಳಕೆ ಮಾಡಿದ್ದ ಕಲ್ಲು ಅಯೋಧ್ಯೆಯ ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಬಳಕೆಯಾಗುತ್ತಿರುವುದು ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯ ವೃದ್ಧಿಯಾಗಲಿದೆ" ಎಂದು ಮಿಲಿಂದಾ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ:

"ರಾಮ ಮಂದಿರ ನಿರ್ಮಣವಾಗುತ್ತಿರುವ ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಯುಪಿ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರವು ಸುಮಾರು 1,000 ಕೋಟಿ ರೂ.ಗಳನ್ನು ನೀಡಿದೆ. ಕೇಂದ್ರ ಸರ್ಕಾರವು 250 ಕೋಟಿ ರೂ. ನೀಡಿದೆ," ಎಂದು ಮುಖ್ಯಮಂತ್ರಿ ಎಎನ್‌ಐಗೆ ತಿಳಿಸಿದ್ದರು. ಅಯೋಧ್ಯೆಯಲ್ಲಿ ಪ್ರವಾಸೋದ್ಯಮ ಮತ್ತು ತೀರ್ಥಯಾತ್ರೆಯ ಕುರಿತು ಮಾತನಾಡಿದ ಮುಖ್ಯಮಂತ್ರಿ, "ಅಯೋಧ್ಯೆಯು ರಾಮಜನ್ಮ ಭೂಮಿಯಾದ ಹಿನ್ನೆಲೆ ಜನಪ್ರಿಯವಾಗಿದೆ. ಭಗವಂತ ರಾಮನ ಮಂದಿರ ನಿರ್ಮಾಣ ಕಾರ್ಯ ಪ್ರಸ್ತುತ ಅಯೋಧ್ಯೆಯಲ್ಲಿ ನಡೆಯುತ್ತಿದೆ. ಲಕ್ಷಾಂತರ ಭಕ್ತರು ಮತ್ತು ಯಾತ್ರಾರ್ಥಿಗಳು ಅಯೋಧ್ಯೆಗೆ ಭೇಟಿ ನೀಡುತ್ತಾರೆ. ನಗರವು ಆಧ್ಯಾತ್ಮಿಕತೆಗೆ ಹಾಗೂ ಪ್ರವಾಸೋದ್ಯಮಕ್ಕೆ ಸಹಕಾರಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಲ್ಲಿಯ ಅಭಿವೃದ್ಧಿಗೆಕೆಲಸ ಮಾಡುತ್ತಿವೆ," ಎಂದಿದ್ದಾರೆ.

English summary
Ayodhya Ram Temple Foundation to be Completed by September And Opens on 2023 December.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X