2023ರೊಳಗೆ ಭಕ್ತರಿಗೆ ಅಯೋಧ್ಯೆ ರಾಮನ ದರ್ಶನ

ಅಯೋಧ್ಯೆ, ಜುಲೈ 17: ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿ ಕಾಮಗಾರಿ 2023ರ ಒಳಗೆ ಪೂರ್ಣಗೊಳ್ಳಲಿದ್ದು, ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಿರುವುದಾಗಿ ತಿಳಿದುಬಂದಿದೆ. ಶ್ರೀರಾಮ, ಸೀತೆ ಹಾಗೂ ಲಕ್ಷ್ಮಣನ ವಿಗ್ರಹಗಳ ದರ್ಶನ ಸಿಗಲಿದೆ.

2024ರಲ್ಲಿ ಇಡೀ ದೇಗುಲದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಯೋಜನೆ ಮೇಲ್ವಿಚಾರಣೆ ವಹಿಸಿರುವ ಟ್ರಸ್ಟ್‌ ಪದಾಧಿಕಾರಿಗಳು ತಿಳಿಸಿದ್ದಾರೆ. 2023ರ ಒಳಗೆ ರಾಮ್‌ಲಲ್ಲಾ ದರ್ಶನ ಪಡೆಯಲು ಭಕ್ತರಿಗೆ ರಾಮ ಮಂದಿರದ ಗರ್ಭಗುಡಿ ತೆರೆಯಲಾಗುವುದು ಎಂದು ಅವರು ಹೇಳಿದ್ದಾರೆ.

ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಹದಿನೈದು ಸದಸ್ಯರು ಹಾಗೂ ಮಂದಿರ ನಿರ್ಮಾಣದಲ್ಲಿ ತೊಡಗಿಕೊಂಡಿರುವ ಇಂಜಿನಿಯರ್‌ಗಳು ಮತ್ತು ವಾಸ್ತುಶಿಲ್ಪಿಗಳೊಂದಿಗೆ ಎರಡು ದಿನಗಳ ಸಭೆ ನಡೆಸಿದ್ದು, ಆನಂತರ ಭಕ್ತರಿಗೆ ದರ್ಶನ ಅವಕಾಶ ಕಲ್ಪಿಸುವ ಕುರಿತು ನಿರ್ಧಾರ ಕೈಗೊಂಡಿರುವುದಾಗಿ ಟ್ರಸ್ಟ್‌ ಮುಖ್ಯಸ್ಥ ನೃಪೇಂದ್ ಮಿಶ್ರಾ ತಿಳಿಸಿದ್ದಾರೆ.

Ayodhya Ram Temple To Open From 2023 To Public

2020ರ ಆಗಸ್ಟ್‌ 5ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನೆರವೇರಿಸಿದ್ದರು. ಮಂದಿರದ ಕಾಮಗಾರಿ ನಡೆಯುತ್ತಿದ್ದು, ಸದ್ಯ ದೇವಾಲಯದ ಅಡಿಪಾಯದ ಕೆಲಸ ನಡೆಯುತ್ತಿದೆ. ಸೆಪ್ಟೆಂಬರ್ 15ರ ಒಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ದೀಪಾವಳಿ ಹಬ್ಬದ ಬಳಿಕ ಎರಡನೇ ಹಂತದ ಕಾಮಗಾರಿ ಆರಂಭಿಸುವ ಸಾಧ್ಯತೆಯಿದೆ. ಇನ್ನೆರಡು ವರ್ಷಗಳಲ್ಲಿ ದೇಗುಲದ ಪ್ರಮುಖ ಕಾರ್ಯ ಮುಗಿಯಲಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸುವ ನಿರೀಕ್ಷೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+