2023ರೊಳಗೆ ಭಕ್ತರಿಗೆ ಅಯೋಧ್ಯೆ ರಾಮನ ದರ್ಶನ
ಅಯೋಧ್ಯೆ, ಜುಲೈ 17: ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿ ಕಾಮಗಾರಿ 2023ರ ಒಳಗೆ ಪೂರ್ಣಗೊಳ್ಳಲಿದ್ದು, ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಿರುವುದಾಗಿ ತಿಳಿದುಬಂದಿದೆ. ಶ್ರೀರಾಮ, ಸೀತೆ ಹಾಗೂ ಲಕ್ಷ್ಮಣನ ವಿಗ್ರಹಗಳ ದರ್ಶನ ಸಿಗಲಿದೆ.
2024ರಲ್ಲಿ ಇಡೀ ದೇಗುಲದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಯೋಜನೆ ಮೇಲ್ವಿಚಾರಣೆ ವಹಿಸಿರುವ ಟ್ರಸ್ಟ್ ಪದಾಧಿಕಾರಿಗಳು ತಿಳಿಸಿದ್ದಾರೆ. 2023ರ ಒಳಗೆ ರಾಮ್ಲಲ್ಲಾ ದರ್ಶನ ಪಡೆಯಲು ಭಕ್ತರಿಗೆ ರಾಮ ಮಂದಿರದ ಗರ್ಭಗುಡಿ ತೆರೆಯಲಾಗುವುದು ಎಂದು ಅವರು ಹೇಳಿದ್ದಾರೆ.
ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಹದಿನೈದು ಸದಸ್ಯರು ಹಾಗೂ ಮಂದಿರ ನಿರ್ಮಾಣದಲ್ಲಿ ತೊಡಗಿಕೊಂಡಿರುವ ಇಂಜಿನಿಯರ್ಗಳು ಮತ್ತು ವಾಸ್ತುಶಿಲ್ಪಿಗಳೊಂದಿಗೆ ಎರಡು ದಿನಗಳ ಸಭೆ ನಡೆಸಿದ್ದು, ಆನಂತರ ಭಕ್ತರಿಗೆ ದರ್ಶನ ಅವಕಾಶ ಕಲ್ಪಿಸುವ ಕುರಿತು ನಿರ್ಧಾರ ಕೈಗೊಂಡಿರುವುದಾಗಿ ಟ್ರಸ್ಟ್ ಮುಖ್ಯಸ್ಥ ನೃಪೇಂದ್ ಮಿಶ್ರಾ ತಿಳಿಸಿದ್ದಾರೆ.

2020ರ ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನೆರವೇರಿಸಿದ್ದರು. ಮಂದಿರದ ಕಾಮಗಾರಿ ನಡೆಯುತ್ತಿದ್ದು, ಸದ್ಯ ದೇವಾಲಯದ ಅಡಿಪಾಯದ ಕೆಲಸ ನಡೆಯುತ್ತಿದೆ. ಸೆಪ್ಟೆಂಬರ್ 15ರ ಒಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ದೀಪಾವಳಿ ಹಬ್ಬದ ಬಳಿಕ ಎರಡನೇ ಹಂತದ ಕಾಮಗಾರಿ ಆರಂಭಿಸುವ ಸಾಧ್ಯತೆಯಿದೆ. ಇನ್ನೆರಡು ವರ್ಷಗಳಲ್ಲಿ ದೇಗುಲದ ಪ್ರಮುಖ ಕಾರ್ಯ ಮುಗಿಯಲಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸುವ ನಿರೀಕ್ಷೆಯಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications