ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯೆಯ ರೈಲ್ವೆ ನಿಲ್ದಾಣಕ್ಕೂ ದೇವಸ್ಥಾನದ ರೂಪ!

|
Google Oneindia Kannada News

ಲಕ್ನೋ, ಆಗಸ್ಟ್.03: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇನ್ನೆರೆಡು ದಿನಗಳಲ್ಲೇ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಆಗಸ್ಟ್.05ರಂದು ಮಂದಿರ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಪೂಜೆ ಸಲ್ಲಿಸಿದ್ದು, ಇದರ ಮಧ್ಯ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

Recommended Video

ರಾಮಮಂದಿರ ನಿರ್ಮಾಣಕ್ಕೆ ಮೋದಿ ಅಡಿಗಲ್ಲು | Oneindia Kannada

ಅಯೋಧ್ಯೆಯಲ್ಲಿರುವ ರೈಲ್ವೆ ನಿಲ್ದಾಣವನ್ನು ದೇವಸ್ಥಾನದ ರೂಪದಲ್ಲಿ ಪುನರ್ ಅಭಿವೃದ್ಧಿಗೊಳಿಸುವುದಕ್ಕೆ ಯೋಜನೆ ರೂಪಿಸಲಾಗಿದೆ. ಅದಕ್ಕಾಗಿ ರೈಲ್ವೆ ಇಲಾಖೆಯು 80 ರಿಂದ 104 ಕೋಟಿ ರೂಪಾಯಿ ಬಜೆಟ್ ನ್ನು ಹೆಚ್ಚಿಸಿದೆ.

ಅಯೋಧ್ಯೆ ರಾಮಮಂದಿರ ಭೂಮಿಪೂಜೆಗೆ ಮೋದಿ: ಓವೈಸಿ ಎಚ್ಚರಿಕೆಅಯೋಧ್ಯೆ ರಾಮಮಂದಿರ ಭೂಮಿಪೂಜೆಗೆ ಮೋದಿ: ಓವೈಸಿ ಎಚ್ಚರಿಕೆ

ಅಯೋಧ್ಯೆಯಲ್ಲಿ ನಿರ್ಮಾಣವಾಗುವ ರಾಮ ಮಂದಿರ ದರ್ಶನಕ್ಕೆ ಕೋಟ್ಯಂತರ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಾರೆ. ಈ ಹಿನ್ನೆಲೆ ಅಯೋಧ್ಯೆಯ ರೈಲ್ವೆ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಪುನರ್ ಅಭಿವೃದ್ಧಿಗೊಳಿಸಲಾಗುವುದು ಎಂದು ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಟ್ವೀಟ್ ಮಾಡಿದ್ದರು.

Ayodhya To Get New Temple Like Railway Station; Budget Raised

ರೈಲ್ವೆ ನಿಲ್ದಾಣಕ್ಕೆ ದೇವಸ್ಥಾನದ ರೂಪ:

ಅಯೋಧ್ಯೆಯ ರೈಲ್ವೆ ನಿಲ್ದಾಣವನ್ನು ಕಳೆದ ಕೆಲವು ವರ್ಷಗಳ ಹಿಂದೆಯಷ್ಟೇ ಪುನರ್ ಅಭಿವೃದ್ಧಿಗೊಳಿಸಲಾಗಿತ್ತು. ಇದರಿಂದಾಗಿ ರೈಲ್ವೆ ನಿಲ್ದಾಣದಲ್ಲಿನ ವಾಸ್ತುಶಿಲ್ಪ ಮತ್ತು ಶೈಲಿಯು ದೇವಸ್ಥಾನದ ರೂಪವನ್ನೇ ಹೋಲುವಂತೆ ಗೋಚರಿಸುತ್ತಿತ್ತು. ಇದರ ಬೆನ್ನಲ್ಲೇ ಹೊಸ ವಾಸ್ತುಶಿಲ್ಪಗಳ ಜೊತೆಗೆ ರೈಲ್ವೆ ನಿಲ್ದಾಣವನ್ನು ಇದೀಗ ಮತ್ತೊಮ್ಮೆ ಪುನರ್ ಅಭಿವೃದ್ಧಿಗೊಳಿಸುವುದಕ್ಕೆ ಯೋಜನೆಯನ್ನು ಹಾಕಿಕೊಳ್ಳಲಾಗಿದೆ.

ಎರಡು ಹಂತಗಳಲ್ಲಿ ರೈಲ್ವೆ ನಿಲ್ದಾಣ ಅಭಿವೃದ್ಧಿ:

ಅಯೋಧ್ಯೆಯಲ್ಲಿ ರೈಲ್ವೆ ನಿಲ್ದಾಣ ಪುನರ್ ಅಭಿವೃದ್ಧಿಯನ್ನು ಎರಡು ಹಂತಗಳನ್ನು ಮಾಡುವುದಕ್ಕೆ ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ಪ್ರದೇಶದ ಮೇಲೆ ನಿಗಾ ವಹಿಸಲಾಗುತ್ತದೆ. ಎರಡನೇ ಹಂತದಲ್ಲಿ ಶೌಚಾಲಯ, ವಸತಿ ನಿಯಮ, ಟಿಕೆಟ್ ನೀಡುವ ಸ್ಥಳ ಸೇರಿದಂತೆ ಪ್ರಯಾಣಿಕರು ಹೆಚ್ಚಾಗಿ ಬಳಸುವ ಮೂಲಸೌಕರ್ಯಗಳ ಅಭಿವೃದ್ಧಿಗೊಳಿಸಲಾಗುವುದು ಎಂದು ಹೇಳಲಾಗಿದೆ.

English summary
Ayodhya To Get New Temple Like Railway Station; Budget Raised. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X