ಸುಪ್ರೀಂ ತೀರ್ಪಿಗೂ ಮುನ್ನ ಅಯೋಧ್ಯೆ ಬೀದಿಯ ವೈಮಾನಿಕ ನೋಟ

Recommended Video

      Ayodhya street view before the judgement | Oneindia Kannada

      ಲಕ್ನೋ, ನವೆಂಬರ್ 08: ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಅಯೋಧ್ಯೆಯಾದ್ಯಂತ ಪೊಲೀಸ್ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದ್ದು, ಅಯೋಧ್ಯೆ ಬಿದಿಯ ವೈಮಾನಿಕ ದೃಶ್ಯದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

      ಅಯೋಧ್ಯೆಯಲ್ಲಿ ಈಗಾಗಲೇ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲೂ ವಿವಾದಾತ್ಮಕ, ಪ್ರಚೋದನಾಕಾರಿ ಹೇಳಿಕೆಗಳನ್ನು, ಸಂದೇಶಗನ್ನು ರವಾನಿಸುವುದನ್ನು ನಿಷೇದಿಸಲಾಗಿದೆ.

      Ayodhya Verdict: Aerial view of Ayodhya streets from surveillance drone

      ಅಯೋಧ್ಯೆಯಾದ್ಯಂತ ಅಲ್ಲಲ್ಲಿ ಡ್ರೋನ್ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಅಹಿತಕರ ಘಟನೆ ನಡೆದರೆ, ಕೂಡಲೇ ಇವು ಮಾಹಿತಿ ನೀಡಲಿವೆ.

      1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿತ್ತು. 2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ. 2010ರ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ 14ಕ್ಕೂ ಅಧಿಕ ಮೇಲ್ಮನವಿಯನ್ನು ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ಅಂತಿಮ ಹಂತ ತಲುಪಿದ್ದು, ತೀರ್ಪು ಹೊರಬೀಳಬೇಕಿದೆ.

      ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಭದ್ರತೆ ಕಲ್ಪಿಸಲು ಕೇಂದ್ರ ಗೃಹ ಇಲಾಖೆ ಆಯಾ ರಾಜ್ಯಗಳಿಗೆ ಸೂಚನೆ ನೀಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+