• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಯೋಧ್ಯಾ ತೀರ್ಪು ಹಿನ್ನೆಲೆ: 20 ತಾತ್ಕಾಲಿಕ ಜೈಲು ನಿರ್ಮಾಣ

|

ಲಕ್ನೋ, ನವೆಂಬರ್ 8: ಅಯೋಧ್ಯಾ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆಯಲ್ಲಿ 20 ತಾತ್ಕಾಲಿಕ ಜೈಲು ತೆರೆಯಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

300 ಶಾಲೆಗಳನ್ನು ಕೇಂದ್ರ ಭದ್ರತಾ ತಂಡಗಳಿಗಾಗಿ ನೀಡಲಾಗಿದೆ. ಬಹು ನಿರೀಕ್ಷಿತ ಹಾಗೂ ಅತೀ ಸೂಕ್ಷ್ಮ ಪ್ರಕರಣವಾಗಿರುವ ರಾಮಜನ್ಮಭೂಮಿ- ಬಾಬ್ರಿ ಮಸೀದಿ ಭೂ ವಿವಾದದ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉತ್ತರಪ್ರದೇಶ ಸರ್ಕಾರ ಅಂಬೇಡ್ಕರ್ ನಗರದಲ್ಲಿರುವ ವಿವಿಧ ಕಾಲೇಜುಗಳಲ್ಲಿ 20 ತಾತ್ಕಾಲಿಕ ಜೈಲುಗಳನ್ನು ಸ್ಥಾಪಿಸಿರುವುದಾಗಿ ವರದಿ ತಿಳಿಸಿದೆ.

ಅಯೋಧ್ಯೆ ತೀರ್ಪು; ಸಿಜೆಐರಿಂದ ಉ. ಪ್ರ ಭದ್ರತೆ ಬಗ್ಗೆ ಮಾಹಿತಿ ಸಂಗ್ರಹ

ತೀರ್ಪು ಪ್ರಕಟವಾಗುವ ನಿಟ್ಟಿನಲ್ಲಿ ಅಯೋಧ್ಯಾ ನಗರಿಯಲ್ಲಿ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ಇದ್ದಿರುವುದಾಗಿಯೂ ಗುಪ್ತಚರ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳಬೇಕೆಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ಕೇಂದ್ರ ಗೃಹಸಚಿವಾಲಯ ಸಂದೇಶ ರವಾನಿಸಿದೆ.

ಎಲ್ಲೆಲ್ಲಿ ತಾತ್ಕಾಲಿಕ ಜೈಲು ಸ್ಥಾಪನೆ

ಎಲ್ಲೆಲ್ಲಿ ತಾತ್ಕಾಲಿಕ ಜೈಲು ಸ್ಥಾಪನೆ

ಅಕ್ಬರ್ ಪುರ್, ಟಾನ್ ಡಾ, ಜಲಾಲ್ ಪುರ್, ಜೈಟ್ ಪುರ್, ಭಿಟಿ ಮತ್ತು ಅಲ್ಲಾಪುರ್ ಗಳಲ್ಲಿ ತಾತ್ಕಾಲಿಕ ಜೈಲುಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಅಂಬೇಡ್ಕರ್ ಜಿಲ್ಲಾ ಶಾಲಾ ಇನ್ಸ್ ಪೆಕ್ಟರ್ ಬಿಡುಗಡೆ ಮಾಡಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಮೂಲಭೂತ ವ್ಯವಸ್ಥೆ

ಮೂಲಭೂತ ವ್ಯವಸ್ಥೆ

ಈ ಕಾಲೇಜುಗಳಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸುವ ಜೈಲುಗಳಿಗೆ ಸಂಬಂಧಿತ ಠಾಣಾಧಿಕಾರಿಗೆ ಅಗತ್ಯವಾದ ಮೂಲಭೂತ ವ್ಯವಸ್ಥೆಯನ್ನು ಒದಗಿಸಿ ಕೊಡಲು ಪ್ರಾಂಶುಪಾಲರು ಹಾಗೂ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ಊಹಾಪೋಹದ ಹಾಗೂ ಸುಳ್ಳು ಸುದ್ದಿ ಹಬ್ಬಿಸುವುದನ್ನು ತಡೆಯುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಗಾವಲು ಇಡಲಾಗಿದೆ ಎಂದು ವರದಿ ತಿಳಿಸಿದೆ.

ಸುಪ್ರೀಂ ತೀರ್ಪಿಗೂ ಮುನ್ನ ಅಯೋಧ್ಯೆ ಬೀದಿಯ ವೈಮಾನಿಕ ನೋಟ

ಮುಂಬೈಯಲ್ಲೂ ಬಿಗಿ ಭದ್ರತೆ

ಮುಂಬೈಯಲ್ಲೂ ಬಿಗಿ ಭದ್ರತೆ

ಅಯೋಧ್ಯಾ ತೀರ್ಪು ಪ್ರಕಟವಾಗಲು ದಿನಗಣನೆ ಆರಂಭವಾಗುತ್ತಿರುವ ನಡುವೆ ಮುಂಬೈಯ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲು ಸಿದ್ಧತೆ ನಡೆದಿದೆ. ಅಲ್ಲದೇ ಕೆಲವು ಪ್ರದೇಶಗಳಲ್ಲಿ ಯಾವುದೇ ಮೆರವಣಿಗೆ, ಸಂಭ್ರಮಾಚರಣೆ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ.

ಅಯೋಧ್ಯಾನಗರಿಯಲ್ಲಿ ಸರ್ಪಗಾವಲು

ಅಯೋಧ್ಯಾನಗರಿಯಲ್ಲಿ ಸರ್ಪಗಾವಲು

ಅಯೋಧ್ಯಾ ಪ್ರಕರಣದ ತೀರ್ಪು ನವಂಬರ್ 17ರೊಳಗೆ ಯಾವ ದಿನದಲ್ಲಿಯೂ ಪ್ರಕಟವಾಗಬಹುದು. ಈ ನಿಟ್ಟಿನಲ್ಲಿ ಯಾವುದೇ ಹಿಂಸಾಚಾರ, ಕಾನೂನು ಸುವ್ಯವಸ್ಥೆ ಹದಗೆಡದಂತೆ ಮುಂಜಾಗ್ರತಾ ಕ್ರಮದ ನಿಟ್ಟಿನಲ್ಲಿ ಅಯೋಧ್ಯಾ ಸೇರಿದಂತೆ ಉತ್ತರಪ್ರದೇಶದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ವಾರಂಟ್ ಇಲ್ಲದೆ ಬಂಧನ: ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ಪೊಲೀಸರ ಖಡಕ್ ಎಚ್ಚರಿಕೆ

ಅಯೋಧ್ಯೆಯಲ್ಲಿ ಸೆಕ್ಷನ್ 144 ಜಾರಿ

ಅಯೋಧ್ಯೆಯಲ್ಲಿ ಸೆಕ್ಷನ್ 144 ಜಾರಿ

ಅಯೋಧ್ಯಾದಲ್ಲಿ ಈಗಾಗಲೇ ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿದೆ. ಕೇಂದ್ರ ಸರ್ಕಾರ ನಾಲ್ಕು ಸಾವಿರಕ್ಕೂ ಹೆಚ್ಚುವರಿ ಅರೆಸೇನಾಪಡೆಯನ್ನು ರವಾನಿಸಿದೆ. ಸಿಆರ್ ಪಿಎಫ್, ಕಮಾಂಡೋ ಪಡೆಗಳನ್ನೂ ಕೂಡಾ ನಿಯೋಜಿಸಲಾಗಿದೆ. ಮುಂಬೈ ಪೊಲೀಸ್ ಕಮೀಷನರ್ ಸಂಜಯ್ ಬಾರ್ವೆ ಸೋಮವಾರ ಪ್ರಮುಖ ಮುಸ್ಲಿಂ ಮುಖಂಡರು, ಪತ್ರಕರ್ತರು, ಧಾರ್ಮಿಕ ಮುಖಂಡರ ಜತೆ ಸಮಾಲೋಚನೆ ನಡೆಸಿದ್ದರು.

English summary
Ayodhya Verdict Countdown Begins 20 Temporary Jails Set Up In Ayodhya. The Ministry of Home Affairs has sent an advisory to all states to remain alert in wake of Ayodhya verdict, which is expected before Chief Justice Ranjan Gogoi's retirement on November 17.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X