ಅಯೋಧ್ಯೆ ತೀರ್ಪು: ನ.09 ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು, ನವೆಂಬರ್ 09: ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜಾ ಘೋಷಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶನಿವಾರ, ನವೆಂಬರ್ 09 ರಂದು, ಅಯೋಧ್ಯೆ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಂದ ಐತಿಹಾಸಿಕ ತೀರ್ಪು ಹೊರಬರಲಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆಯ ದೃಷ್ಟಿಯಿಂದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

40 ದಿನಗಳ ಸುದೀರ್ಘ ವಿಚಾರಣೆ ಬಳಿಕ ಸುಪ್ರೀಂಕೋರ್ಟಿನ ಸಾಂವಿಧಾನಿಕ ಪೀಠವು ಶನಿವಾರ(ನವೆಂಬರ್ 09) ಬೆಳಗ್ಗೆ 10.30ಕ್ಕೆ ಅಂತಿಮ ತೀರ್ಪು ನೀಡಲಿದೆ.

Ayodhya Verdict; Schools And Colleges Shut Down In Karnartaka

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾ. ಎಸ್ ಎ ಬೋಬ್ಡೆ ಡಿವೈ ಚಂದ್ರಚೂಡ, ಅಶೋಕ್ ಭೂಷಣ್, ಎಸ್ ಅಬ್ದುಲ್ ನಜೀರ್ ಅವರಿರುವ ಪಂಚಸದಸ್ಯ ಪೀಠ ತೀರ್ಪನ್ನು ನೀಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+