ಅಯೋಧ್ಯೆ ತೀರ್ಪು: ಪ್ರಮುಖ 78 ರೈಲ್ವೆ ನಿಲ್ದಾಣಗಳಲ್ಲಿ ಬಿಗಿ ಭದ್ರತೆ
ಲಕ್ನೋ, ನವೆಂಬರ್ 8: ರಾಮಮಂದಿರ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪುಗೆ ದಿನಗಣನೆ ಆರಂಭವಾಗಿದೆ.
ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಒಟ್ಟು 78 ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ.ರಾಮಮಂದಿರ ಕುರಿತ ತೀರ್ಪು ನವೆಂಬರ್ 17ರಂದು ಹೊರ ಬೀಳುವ ಸಾಧ್ಯತೆ ಇದೆ. ಹೀಗಾಗಿ ತಾತ್ಕಾಲಿಕ ಜೈಲುಗಳನ್ನು ಕೂಡ ನಿರ್ಮಿಸಲಾಗಿದೆ.
ಎಲ್ಲಾ ಆರ್‌ಪಿಎಫ್ ಸಿಬ್ಬಂದಿಗಳನ್ನು ರೈಲ್ವೆ ನಿಲ್ದಾಣದ ಭದ್ರತೆಗಾಗಿ ನಿಯೋಜಿಸಲಾಗಿದೆ. ಎಲ್ಲಾ ರೈಲ್ವೆ ನಿಲ್ದಾಣಗಳ ಪಾರ್ಕಿಂಗ್ ಪ್ರದೇಶ, ಎಂಟ್ರಿ, ಎಕ್ಸಿಟ್, ಬ್ರಿಡ್ಜ್ ಸೇರಿದಂತೆ ಹಲವೆಡೆ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ.

ಹಾಗೆಯೇ ಲಕ್ನೋದಲ್ಲಿರುವ ಎಲ್ಲಾ ಧಾರ್ಮಿಕ ಸ್ಥಳಗಳ ಮೇಲೆ ಕೂಡ ಕಣ್ಣಿಡುವಂತೆ ನಿರ್ದೇಶನ ನೀಡಲಾಗಿದೆ. ಮುಂಬೈ, ದೆಹಲಿ, ಮಹಾರಾಷ್ಟ್ರ, ಉತ್ತರ ಪ್ರದೇಶದ ಒಟ್ಟು ಪ್ರಮುಖ 78 ರೈಲ್ವೆ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಯಾವ್ಯಾವ ರೈಲ್ವೆ ನಿಲ್ದಾಣದಲ್ಲಿ ಬೆಳಕಿನ ವ್ಯವಸ್ಥೆ ಸರಿ ಇಲ್ಲವೋ ಅಂತಹ ನಿಲ್ದಾಣಗಳಲ್ಲಿ ಬೆಳಕಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಉತ್ತರ ಪ್ರದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಸೈನಿಕರನ್ನು ನಿಯೋಜನೆ ಮಾಡಲಾಗಿದೆ.












Click it and Unblock the Notifications