ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯೆ ತೀರ್ಪು: ಪ್ರಮುಖ 78 ರೈಲ್ವೆ ನಿಲ್ದಾಣಗಳಲ್ಲಿ ಬಿಗಿ ಭದ್ರತೆ

|
Google Oneindia Kannada News

ಲಕ್ನೋ, ನವೆಂಬರ್ 8: ರಾಮಮಂದಿರ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪುಗೆ ದಿನಗಣನೆ ಆರಂಭವಾಗಿದೆ.

ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಒಟ್ಟು 78 ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ.ರಾಮಮಂದಿರ ಕುರಿತ ತೀರ್ಪು ನವೆಂಬರ್ 17ರಂದು ಹೊರ ಬೀಳುವ ಸಾಧ್ಯತೆ ಇದೆ. ಹೀಗಾಗಿ ತಾತ್ಕಾಲಿಕ ಜೈಲುಗಳನ್ನು ಕೂಡ ನಿರ್ಮಿಸಲಾಗಿದೆ.

ಅಯೋಧ್ಯಾ ತೀರ್ಪು ಹಿನ್ನೆಲೆ: 20 ತಾತ್ಕಾಲಿಕ ಜೈಲು ನಿರ್ಮಾಣಅಯೋಧ್ಯಾ ತೀರ್ಪು ಹಿನ್ನೆಲೆ: 20 ತಾತ್ಕಾಲಿಕ ಜೈಲು ನಿರ್ಮಾಣ

ಎಲ್ಲಾ ಆರ್‌ಪಿಎಫ್ ಸಿಬ್ಬಂದಿಗಳನ್ನು ರೈಲ್ವೆ ನಿಲ್ದಾಣದ ಭದ್ರತೆಗಾಗಿ ನಿಯೋಜಿಸಲಾಗಿದೆ. ಎಲ್ಲಾ ರೈಲ್ವೆ ನಿಲ್ದಾಣಗಳ ಪಾರ್ಕಿಂಗ್ ಪ್ರದೇಶ, ಎಂಟ್ರಿ, ಎಕ್ಸಿಟ್, ಬ್ರಿಡ್ಜ್ ಸೇರಿದಂತೆ ಹಲವೆಡೆ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ.

 Ayodhya Verdict Security Heightened At 78 Stations

ಹಾಗೆಯೇ ಲಕ್ನೋದಲ್ಲಿರುವ ಎಲ್ಲಾ ಧಾರ್ಮಿಕ ಸ್ಥಳಗಳ ಮೇಲೆ ಕೂಡ ಕಣ್ಣಿಡುವಂತೆ ನಿರ್ದೇಶನ ನೀಡಲಾಗಿದೆ. ಮುಂಬೈ, ದೆಹಲಿ, ಮಹಾರಾಷ್ಟ್ರ, ಉತ್ತರ ಪ್ರದೇಶದ ಒಟ್ಟು ಪ್ರಮುಖ 78 ರೈಲ್ವೆ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಅಯೋಧ್ಯೆ ತೀರ್ಪು; ಸಿಜೆಐರಿಂದ ಉ. ಪ್ರ ಭದ್ರತೆ ಬಗ್ಗೆ ಮಾಹಿತಿ ಸಂಗ್ರಹಅಯೋಧ್ಯೆ ತೀರ್ಪು; ಸಿಜೆಐರಿಂದ ಉ. ಪ್ರ ಭದ್ರತೆ ಬಗ್ಗೆ ಮಾಹಿತಿ ಸಂಗ್ರಹ

ಯಾವ್ಯಾವ ರೈಲ್ವೆ ನಿಲ್ದಾಣದಲ್ಲಿ ಬೆಳಕಿನ ವ್ಯವಸ್ಥೆ ಸರಿ ಇಲ್ಲವೋ ಅಂತಹ ನಿಲ್ದಾಣಗಳಲ್ಲಿ ಬೆಳಕಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಉತ್ತರ ಪ್ರದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಸೈನಿಕರನ್ನು ನಿಯೋಜನೆ ಮಾಡಲಾಗಿದೆ.

English summary
The railway police on Thursday issued a seven-page advisory to all its zones giving them a slew of instructions on security preparedness ahead of the much-awaited Supreme Court verdict on the Ram Janmabhoomi-Babri Masjid dispute case, sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X