• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉ. ಪ್ರ ಚುನಾವಣೆ: ಆಜಾದ್ ಸಮಾಜ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದ ಚಂದ್ರಶೇಖರ್

|
Google Oneindia Kannada News

ಲಕ್ನೋ, ಜನವರಿ 18: ಫೆಬ್ರವರಿಯಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಹೇಳಿದ್ದಾರೆ.

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷವಾದ ಆಜಾದ್ ಸಮಾಜ ಪಕ್ಷ ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ನಡುವೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಜನವರಿ 15 ರಂದು ತಳ್ಳಿಹಾಕಿದ್ದರು.

ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಚಂದ್ರಶೇಖರ್ ಆಜಾದ್, "ನಾವು ಯುಪಿಯಲ್ಲಿ ಇತರ ರಾಜಕೀಯ ಪಕ್ಷಗಳಿಗೆ ಪರ್ಯಾಯವಾಗಿದ್ದೇವೆ. ನಾನು ಶಾಸಕ ಮತ್ತು ಸಚಿವನಾಗುವ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ" ಎಂದು ಹೇಳಿದರು. ಮಾಯಾವತಿ ಜತೆ ಮೈತ್ರಿಗೆ ಯತ್ನಿಸಿದ್ದೆ, ಆದರೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಹೇಳಿದರು.

ಸಮಾಜವಾದಿ ಪಕ್ಷವು ನಮಗೆ 100 ಸ್ಥಾನಗಳನ್ನು ನೀಡಿದರೂ ಅವರೊಂದಿಗೆ ಹೋಗುವುದಿಲ್ಲ, ಬಿಜೆಪಿಯನ್ನು ತಡೆಯುವ ನಿಟ್ಟಿನಲ್ಲಿ ಚುನಾವಣೆಯ ನಂತರ ಇತರೆ ಪಕ್ಷಗಳಿಗೆ ನಾವು ನೆರವಾಗಬಹುದು ಎಂದು ಹೇಳಿದ್ದಾರೆ.

ನಾನು ನನ್ನ ವೈಯಕ್ತಿಕ ಸಂತಸಗಳ ಬಗೆಗೆ ತಲೆ ಕೆಡಿಸಿಕೊಂಡವಲ್ಲ, ಕಳೆದ ಐದು ವರ್ಷಗಳಲ್ಲಿ ನಾನು ಸಾಕಷ್ಟು ಕಳೆದುಕೊಂಡಿರುವೆ, ಹಾಥರಸ್ , ಪ್ರಯಾಗ್‌ರಾಜ್ ಹಾಗೂ ಉನ್ನಾವೊದಲ್ಲಿ ನಡೆದಂತಹ ಘಟನೆಗಳನ್ನು ವಿರೋಧಿಸಿ ಜೈಲಿಗೆ ಹೋಗಿರುವೆ, ವಿರೋಧ ಪಕ್ಷಗಳನ್ನು ವಿಭಜಿಸುವ ಮೂಲಕ ಬಿಜೆಪಿ ಏನಾದರೂ ಮತ್ತೆ ಅಧಿಕಾರಕ್ಕೆ ಬಂದರೆ ಅದು ಎಲ್ಲರ ಸೋಲು ಆಗಲಿದೆ ಎಂದರು.

ಕಾಂಗ್ರೆಸ್ ಜತೆಗೆ ಮೈತ್ರಿಯ ಬಗೆಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಅವರು, ಕಾಂಗ್ರೆಸ್‌ನೊಂದಿಗೆ ಮೈತ್ರಿಗಾಗಿ ಮಾತುಕತೆ ನಡೆಯುತ್ತಿದೆ, ಆ ಬಗ್ಗೆ ಸ್ಪಷ್ಟತೆ ಸಿಗಲಿದೆ, ಮಾಯಾವತಿ ಅವರ ಪಕ್ಷದೊಂದಿಗೂ ಮೈತ್ರಿಗಾಗಿ ಯತ್ನಿಸಿದೆ, ಆದರೆ ಅವರಿಂದ ಯಾರೊಬ್ಬರೂ ಸಂಪರ್ಕಿಸಲಿಲ್ಲ ಎಂದರು.

ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅವರು ಬಿಡುಗಡೆ ಮಾಡಿದರು, ನಾವು ಉತ್ತರ ಪ್ರದೇಶದಲ್ಲಿ ಪರ್ಯಾಯವಾಗಿ ನಿಲ್ಲುತ್ತೇವೆ ಶಾಸಕ ಮತ್ತು ಸಚಿವ ಸ್ಥಾನದ ಆಫರ್‌ಗಳನ್ನು ನಾನು ತಿರಸ್ಕರಿಸಿದ್ದೇನೆ ಎಂದು ಹೇಳಿದರು.

ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಚುನಾವಣೆ:

- ಮೊದಲ ಹಂತದಲ್ಲಿ ಫೆಬ್ರವರಿ 10ರಂದು ಮತದಾನ

- ಎರಡನೇ ಹಂತದಲ್ಲಿ ಫೆಬ್ರವರಿ 14ರಂದು ಮತದಾನ

- ಮೂರನೇ ಹಂತದಲ್ಲಿ ಫೆಬ್ರವರಿ 20ರಂದು ಮತದಾನ

- ನಾಲ್ಕನೇ ಹಂತದಲ್ಲಿ ಫೆಬ್ರವರಿ 23ರಂದು ಮತದಾನ

- ಐದನೇ ಹಂತದಲ್ಲಿ ಫೆಬ್ರವರಿ 27ರಂದು ಮತದಾನ

- ಆರನೇ ಹಂತದಲ್ಲಿ ಮಾರ್ಚ್ 3ರಂದು ಮತದಾನ

- ಏಳನೇ ಹಂತದಲ್ಲಿ ಮಾರ್ಚ್ 7ರಂದು ಮತದಾನ

ಉತ್ತರ ಪ್ರದೇಶ ಗದ್ದುಗೆ ಹಿಡಿಯಲು ಪೈಪೋಟಿ:
ದೇಶದಲ್ಲಿ ಅತಿಹೆಚ್ಚು ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವುದಕ್ಕೆ ಬಿಜೆಪಿ, ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಸೇರಿದಂತೆ ಪ್ರಾದೇಶಿಕ ಪಕ್ಷಗಳ ನಡುವೆ ಪೈಪೋಟಿ ನಡೆಯುತ್ತಿದೆ. ಅತಿಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ರಾಜ್ಯದ ಮತದಾರರ ಮನ ಗೆಲ್ಲುವುದಕ್ಕಾಗಿ ಇತ್ತೀಚಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡಿ ಸಾಕಷ್ಟು ಯೋಜನೆಗಳಿಗೆ ಚಾಲನೆ ನೀಡಿದ್ದರು.

English summary
Azad Samaj Party chief Chandra Shekhar Aazad has said his party would go solo in the Uttar Pradesh polls.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Desktop Bottom Promotion