ಆಗಸ್ಟ್ 31ರೊಳಗೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆದೇಶ

ನವದೆಹಲಿ, ಮೇ 8: ಬಾಬ್ರಿ ಮಸೀದಿ ಧ್ವಂಸ ನಡೆದು ಸುಮಾರು 25 ವರ್ಷಗಳು ಕಳೆದಿದೆ. ಉತ್ತರ ಪ್ರದೇಶದ ಅಯೋಧ್ಯಾ ನಗರದಲ್ಲಿ ಹಿಂದೂ ಪರ ಸಂಘಟನೆಗಳು ಅಂದು ನಡೆಸಿದ ಕೃತ್ಯ, ಕರಸೇವಕರ ಪಾಲಿಗೆ ಶೌರ್ಯ ದಿವಸವಾಗಿದ್ದರೆ, ಮುಸ್ಲಿಂ ಸಂಘಟನೆಗಳಿಗೆ ಕಪ್ಪು ದಿನವಾಗಿದೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 31, 2020ರೊಳಗೆ ಆದೇಶ ಹೊರಡಿಸುವಂತೆ ಲಕ್ನೋದ ಸಿಬಿಐ ಕೋರ್ಟಿಗೆ ಸುಪ್ರೀಂಕೋರ್ಟ್ ಇಂದು ಸೂಚಿಸಿದೆ.

1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ, ಮಾಜಿ ಕೇಂದ್ರ ಸಚಿವರಾದ ಮುರಳಿ ಮನೋಹರ್ ಜೋಷಿ ಮತ್ತು ಉಮಾ ಭಾರತಿ ಸೇರಿದಂತೆ ಪ್ರಮುಖವಾಗಿ 13 ಮಂದಿ ಆರೋಪಿಗಳಿದ್ದಾರೆ.

ಮಸೀದಿ ಧ್ವಂಸ ಪ್ರಕರಣಕ್ಕೂ ಮೊದಲು ಗೌಪ್ಯ ಸಭೆಯೊಂದು ಬಿಜೆಪಿ ನಾಯಕ ವಿನಯ್ ಕಟಿಯಾರ್ ಮನೆಯಲ್ಲಿ ನಡೆದಿತ್ತು.ಈ ಸಭೆಯಲ್ಲಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಹೀಗೆ ಮಸೀದಿ ಕೆಡವಲು 1990ರಲ್ಲಿ ಅಡ್ವಾಣಿ ಮತ್ತು ಇತರರು ಸಂಚು ರೂಪಿಸಿದ್ದರು ಎಂದು ಸಿಬಿಐ ತನ್ನ ಜಾರ್ಜ್ ಶೀಟ್ ನಲ್ಲಿ ಹೇಳಿದೆ.

Babri Masjid demolition case: Deliver verdict by August 31, SC tells CBI court

1992ರಲ್ಲಿ ಅಯೋಧ್ಯೆಯಲ್ಲಿದ್ದ 16ನೇ ಶತಮಾನದ ಬಾಬ್ರಿ ಮಸೀದಿ ಕೆಡವಿದ ಪ್ರಕರಣದಲ್ಲಿ ಅಡ್ವಾಣಿ, ಮುರಳಿ ಮನೋಹರ ಜೋಶಿ ಇತರ ಹನ್ನೆರಡು ಮಂದಿ ವಿರುದ್ಧದ ಸಂಚು ರೂಪಿಸಿದ ಆರೋಪವನ್ನು ರಾಯ್ ಬರೇಲಿ ಕೋರ್ಟ್ ಕೈಬಿಟ್ಟು, ಖುಲಾಸೆ ಮಾಡಿತ್ತು.

2010ರಲ್ಲಿ ಅಲಹಾಬಾದ್ ಹೈ ಕೋರ್ಟ್ ಕೆಳಹಂತದ ನ್ಯಾಯಾಲಯದ ತೀರ್ಪನ್ನೇ ಎತ್ತಿ ಹಿಡಿದಿತ್ತು. ಇದೀಗ ಸಿಬಿಐ ಹೈಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿತ್ತು. ಎಲ್ ಕೆ ಅಡ್ವಾಣಿ ಸೇರಿದಂತೆ 13 ಜನ ಆರೋಪಿಗಳ ಮೇಲಿನ ಆರೋಪ ಪಟ್ಟಿ ರದ್ದು ಮಾಡದಂತೆ ಸಿಬಿಐ ಕೋರಿದ್ದ ಅರ್ಜಿಗೆ ಪುರಸ್ಕಾರ ಸಿಕ್ಕಿತ್ತು. ಕಲ್ಯಾಣ್ ಸಿಂಗ್ ಹೊರತುಪಡಿಸಿ ಉಳಿದವರ ಮೇಲೆ ವಿಚಾರಣೆ ನಡೆಸಲು ಆದೇಶಿಸಲಾಗಿತ್ತು. ಕಲ್ಯಾಣ್ ಸಿಂಗ್ ನಂತರ ಜಾಮೀನು ಪಡೆದುಕೊಂಡಿದ್ದರು.

ಬಿಜೆಪಿ ಮುಖಂಡರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ, ಸಂಸದರಾದ ಬ್ರಿಜ್ ಭೂಷಣ್ ಸಿಂಗ್, ಸಾಕ್ಷಿ ಮಹಾರಾಜ್, ಭೂಷಣ ಸಿಂಗ್, ಆರ್ ಎನ್ ಶ್ರೀವಾಸ್ತವ, ಲಲ್ಲು ಸಿಂಗ್ ಸೇರಿದಂತೆ 32 ಜನರ ವಿರುದ್ಧ ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್ ಬಳಸಿ ಮುಕ್ತಾಯಗೊಳಿಸಬಹುದು ಎಂದು ಜಸ್ಟೀಸ್ ಆರ್ ಎಫ್ ನಾರಿಮನ್ ಹಾಗೂ ನ್ಯಾ ಸೂರ್ಯಕಾಂತ್ ಅವರಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+