ಪರಿಷತ್‌ ಚುನಾವಣೆಗೆ ಅಭ್ಯರ್ಥಿಗಳ ಘೋಷಿಸಿದ ಬಿಜೆಪಿ

ಲಕ್ನೋ, ಜೂ. 8: ಮಹಾರಾಷ್ಟ್ರ, ಬಿಹಾರ ಹಾಗೂ ಉತ್ತರಪ್ರದೇಶದಲ್ಲಿ ಮುಂಬರುವ ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ರಾಜಕೀಯ ದೃಷ್ಟಿಯಿಂದ ಪ್ರಮುಖ ರಾಜ್ಯಗಳಾದ ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರದಲ್ಲಿ ವಾರ್ಷಿಕ ಪರಿಷತ್‌ ಚುನಾವಣೆ ನಡೆಯಲಿದೆ. ಈ ರಾಜ್ಯಗಳ ಪರಿಷತ್‌ ಚುನಾವಣೆ ಇದೇ ಜೂನ್‌ 20 ರಂದು ನಡೆಯಲಿದ್ದು, ಅದೇ ದಿನ ಮತ ಎಣಿಕೆಯೂ ನಡೆಯಲಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಜೂ. 9 ಕೊನೆಯ ದಿನವಾಗಿದ್ದು, ಜೂ. 10ರಂದು ನಾಮಪತ್ರಗಳ ಪರಿಶಿಲನೆ ನಡೆಯಲಿದೆ. ಹಾಗೆಯೇ ನಾಮಪತ್ರಗಳ ಹಿಂಪಡೆಯಲು ಜೂ. 13 ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕೇಸರಿ ಪಕ್ಷ ಬಿಜೆಪಿ ಉತ್ತರ ಪ್ರದೇಶದ 7 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಉಪಮುಖ್ಯಮಂತ್ರಿ ಕೇಶವ್ ಮೌರ್ಯ, ಭೂಪೇಂದ್ರ ಸಿಂಗ್, ಜೆಪಿಎಸ್ ರಾಥೋಡ್, ದಯಾ ಶಂಕರ್ ಮಿಶ್ರಾ ದಯಾಳು, ನರೇಂದ್ರ ಕಶ್ಯಪ್, ಜಸ್ವಂತ್ ಸೈನಿ ಮತ್ತು ಡ್ಯಾನಿಶ್ ಆಜಾದ್ ಅನ್ಸಾರಿ ವಿಧಾನ ಪರಿಷತ್‌ಗೆ ಸ್ಪರ್ಧಿಸಲಿರುವ ಬಿಜೆಪಿಯ 7 ಅಭ್ಯರ್ಥಿಗಳ ಪಟ್ಟಿಯಲ್ಲಿದ್ದಾರೆ. ಉಪಮುಖ್ಯಮಂತ್ರಿಯಾದ ಕೇಶವ್‌ ಮೌರ್ಯ ಅವರು 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕೌಶಂಬಿ ಜಿಲ್ಲೆಯ ಸಿರತು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸಮಾಜವಾದಿ ಪಕ್ಷದ ಪಲ್ಲವಿ ಪಟೇಲ್‌ ವಿರುದ್ಧ7337 ಮತಗಳಿಂದ ಸೋಲು ಅನುಭವಿಸಿದ್ದರು.

BJP Announces Candidates for Council Elections in 3 States

ಒಟ್ಟು 13 ಸ್ಥಾನಗಳಲ್ಲಿ ಆಡಳಿತರೂಢ ಪಕ್ಷ ಬಿಜೆಪಿಯಿಂದ 9 ಅಭ್ಯರ್ಥಿಗಳು ಆಯ್ಕೆಯಾಗಬಹುದು ಹಾಗೂ ಅಖಿಲೇಶ್ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷದಿಂದ 4 ಅಬ್ಯರ್ಥಿಗಳು ಆಯ್ಕೆಯಾಗಬಹುದು ಎಂದು ನೀರೀಕ್ಷೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ವಿಧಾನ ಪರಿಷತ್‌ ಚುನಾವಣೆಗೆ ಜೂನ್‌ 20ರಂದು 10 ಸ್ಥಾನಗಳಿಗೆ ಚುನಾವಣೆಯನ್ನು ನಡೆಸಲಿದೆ. ಈ ನಿಟ್ಟಿನಲ್ಲಿ ಬಿಜೆಪಿಯ ಪ್ರವೀಣ್‌ ಯಶವಂತ್‌ ದಾರೆಕರ್‌, ರಾಮ್‌ ಶಂಕರ್‌ ಶಿಂಧೆ, ಶ್ರೀಕಾಂತ್‌ ಭಾರತೀಯ ಮತ್ತು ಪ್ರಸಾದ್‌ ಮಿನೇಶ್‌ ಲಾಡ್‌ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಶಿವಸೇನೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮತ್ತು ಕಾಂಗ್ರೆಸ್ ಒಳಗೊಂಡ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು 10 ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಣಕ್ಕಿಳಿದಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಹಾ ವಿಕಾಸ್ ಅಘಾಡಿ 168 ಶಾಸಕರ ಬೆಂಬಲವನ್ನು ಹೊಂದಿದೆ.

BJP Announces Candidates for Council Elections in 3 States

ಇನ್ನೂ ಬಿಹಾರದಲ್ಲಿ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಬಿಹಾರ ಹರಿ ಸಾಹ್ನಿ ಮತ್ತು ಅನಿಲ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಏತನ್ಮಧ್ಯೆ, ಬಿಹಾರ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯಲ್ಲಿ ಜನತಾ ದಳ (ಯುನೈಟೆಡ್) ತನ್ನ ಐದು ನಿರ್ಗಮಿತ ಶಾಸಕರಿಗೆ ಟಿಕೆಟ್ ನಿರಾಕರಿಸಿದೆ. ಜೆಡಿಯು ಪಕ್ಷದ ಅಭ್ಯರ್ಥಿಗಳಾಗಿ ಅಫಾಕ್ ಅಹ್ಮದ್ ಖಾನ್ ಮತ್ತು ರವೀಂದ್ರ ಪ್ರಸಾದ್ ಸಿಂಗ್ ಅವರನ್ನು ಸ್ಪರ್ಧೆಗೆ ಇಳಿಸಲಾಗಿದೆ.

(ಒನ್ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+