ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಮಜನ್ಮಭೂಮಿ ತೀರ್ಪಿನ ಬಳಿಕ ಮೊದಲ ಬಾರಿ ಅಯೋಧ್ಯೆಗೆ ಜೆಪಿ ನಡ್ಡಾ ಭೇಟಿ

|
Google Oneindia Kannada News

ಲಕ್ನೋ, ಡಿಸೆಂಬರ್ 15: ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಬುಧವಾರ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. 2019 ರಲ್ಲಿ ರಾಮ ಜನ್ಮಭೂಮಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪಿನ ಬಳಿಕ ನಡ್ಡಾ ಅವರು ಅಯೋಧ್ಯೆಗೆ ಹೋಗುತ್ತಿರುವುದು ಇದೇ ಮೊದಲು.

ಇವರೊಂದಿಗೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ. ಜಿಲ್ಲೆಯ ಅಧಿಕಾರಿಗಳ ಪ್ರಕಾರ, ನಡ್ಡಾ ಮತ್ತು ಇತರ ಮುಖ್ಯಮಂತ್ರಿಗಳು ಬೆಳಿಗ್ಗೆ 11 ಗಂಟೆಗೆ ಅಯೋಧ್ಯೆಗೆ ತಲುಪುತ್ತಾರೆ. ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸದಾಗಿ ನಿರ್ಮಿಸಿದ ಕಾಶಿ ವಿಶ್ವನಾಥ ಧಾಮದ 1 ನೇ ಹಂತದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ನಂತರ ಅವರು ಲಕ್ನೋದಲ್ಲಿದ್ದಾರೆ.

ಅಯೋಧ್ಯೆ ತೀರ್ಪು; ಐವರು ನ್ಯಾಯಮೂರ್ತಿಗಳ ಪರಿಚಯಅಯೋಧ್ಯೆ ತೀರ್ಪು; ಐವರು ನ್ಯಾಯಮೂರ್ತಿಗಳ ಪರಿಚಯ

ನಡ್ಡಾ ಮತ್ತು ಇತರ ನಾಯಕರು ಮಧ್ಯಾಹ್ನ 2 ಗಂಟೆಗೆ ಹನುಮಾನ್‌ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ನಂತರ ರಾಮಜನ್ಮಭೂಮಿ ದೇವಸ್ಥಾನಕ್ಕೆ ತೆರಳಲಿದ್ದಾರೆ.

BJP Chief JP Nadda to Visit Ayodhya Today After Ram Janmabhoomi Verdict

ಬಿಜೆಪಿ ಮುಖ್ಯಸ್ಥರು ಪ್ರಸಿದ್ಧ ಹನುಮಾನ್‌ಗರ್ಹಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ನಿರೀಕ್ಷೆಯಿದೆ ಮತ್ತು ಭಗವಾನ್ ರಾಮನ ಆಶೀರ್ವಾದವನ್ನು ಸಹ ಪಡೆಯಲಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾನುವಾರ ವಾರಾಣಸಿಗೆ ಭೇಟಿ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ಧಾಮದ ಮೊದಲ ಹಂತವನ್ನು ಉದ್ಘಾಟಿಸಿದ್ದರು. ಜೆಪಿ ನಡ್ಡಾ ಅವರು ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ 2019ರ ಜೂನ್‌ನಲ್ಲಿ ನೇಮಕ ಮಾಡಲಾಗಿತ್ತು. 2020ರಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡರು.

ನ್ಯಾಯಾಲಯದಲ್ಲಿ ನಡೆದ ಸುದೀರ್ಘ ಹೋರಾಟದ ವಿವರ:
1528: ಮೊಘಲ್‌ ಸಾಮ್ರಾಟ್‌ ಬಾಬರನ ಕಮಾಂಡರ್‌ ಮಿರ್‌ ಬಕಿಯಿಂದ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ಮಾಣ.

1885; ಮಹಂತ್ ರಘುವೀರ್ ದಾಸ್ ಫೈಜಾಬಾದ್ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮಸೀದಿಯ ಪಕ್ಕದಲ್ಲಿ ಗೋಪುರ ನಿರ್ಮಾಣಕ್ಕೆ ಮನವಿ, ಅರ್ಜಿ ತಿರಸ್ಕೃತ.

1859- ವಿವಾದಿತ ಸ್ಥಳವನ್ನು ಹಿಂದೂ-ಮುಸ್ಲಿಂಮರಿಗೆ ಹಂಚಿಕೆ ಮಾಡಿ ಪ್ರಾರ್ಥನೆ ಹಾಗೂ ದೇವಾರಾಧನೆಗೆ ಅವಕಾಶ ಮಾಡಿಕೊಟ್ಟ ಬ್ರಿಟಿಶ್ ಸರ್ಕಾರ

1949 - ವಿವಾದಿತ ಸ್ಥಳದಲ್ಲಿ ಮಸೀದಿಯ ಕೇಂದ್ರ ಗುಮ್ಮಟದೊಳಗೆ ರಾಮಲಲ್ಲಾನ ವಿಗ್ರಹಗಳ ಪ್ರತಿಷ್ಠಾಪನೆ.

1950: ಗೋಪಾಲ್ ಸಿಮ್ಲಾ ವಿಶಾರದ್ ಮತ್ತು ಪರಮಹಂಸ ರಾಮಚಂದ್ರ ದಾಸ್ ಫೈಜಾಬಾದ್ ಕೋರ್ಟ್ ನಲ್ಲಿ ಎರಡು ದಾವೆ ಸಲ್ಲಿಸಿ ಮಸೀದಿಯಲ್ಲಿ ಮೂರ್ತಿ ಆರಾಧನೆಗೆ ಅನುಮತಿ ಕೋರಿ ಮನವಿ ಸಲ್ಲಿಕೆ,

1959 - ವಿವಾದಿತ ಜಾಗದ ಸ್ವಾಧೀನ ಕೋರಿ ನಿರ್ಮೋಹಿ ಅಖಾಡದಿಂದ ಅರ್ಜಿ ಸಲ್ಲಿಕೆ

1961- ವಿವಾದಿತ ಸ್ಥಳ ನಮ್ಮದು ಎಂದು ನ್ಯಾಯಾಲಯದ ಮೊರೆ ಹೋದ ಸುನ್ನಿ ವಕ್ಫ್ ಮಂಡಳಿ

1981: ಉತ್ತರ ಪ್ರದೇಶದ ಸುನ್ನಿ ಕೇಂದ್ರ ವಕ್ಫ್ ಬೋರ್ಡ್ ಸ್ಥಳದ ಸ್ವಾಧೀನ ಕೋರಿ ಅರ್ಜಿ, ಮಸೀದಿಯಿಂದ ಮೂರ್ತಿ ತೆಗೆಯುವಂತೆ ಕೋರಿ ಮನವಿ.

1986 - ವಿವಾದಗ್ರಸ್ತ ಜಾಗದಲ್ಲಿ ಹಿಂದೂಗಳ ಪೂಜೆಗೆ ಅನುವು ಮಾಡಿಕೊಡುವಂತೆ ಸ್ಥಳೀಯ ನ್ಯಾಯಾಲಯ ಆದೇಶ.

1989: ವಿವಾದಗ್ರಸ್ತ ಜಾಗದ ವಿಷಯದಲ್ಲಿ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಅಲಹಾಬಾದ್‌ ಹೈಕೋರ್ಟ್‌ ಆದೇಶ.

1990- ವಿವಾದಿತ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಲಾಲ್ ಕೃಷ್ಣ ಅದ್ವಾಣಿ ನೇತೃತ್ವದಲ್ಲಿ ಬಿಜೆಪಿಯಿಂದ ರಥಯಾತ್ರೆ

1992, ಡಿ.6: ಬಾಬ್ರಿ ಮಸೀದಿ ಧ್ವಂಸ.

1993: ವಿವಾದಿತ ಜಾಗವನ್ನು ಕೇಂದ್ರ ಸ್ವಾಧೀನಪಡಿಸಿಕೊಳ್ಳುವುದಕ್ಕಾಗಿ 'ಅಯೋಧ್ಯೆ ನಿರ್ದಿಷ್ಟ ಪ್ರದೇಶದ ಸ್ವಾಧೀನ ಕಾಯಿದೆ' ಅಂಗೀಕಾರ. ಇದಕ್ಕೆ ಇಸ್ಮಾಯಿಲ್‌ ಫಾರೂಕಿ ಸೇರಿದಂತೆ ಹಲವರಿಂದ ತಕರಾರು ಅರ್ಜಿ.

2002: ಜಾಗದ ಒಡೆತನ ಯಾರಿಗೆ ಸೇರಿದ್ದು ಎನ್ನುವ ವ್ಯಾಜ್ಯ ಕುರಿತು ಅಲಹಾಬಾದ್‌ ಹೈಕೋರ್ಟ್‌ ವಿಚಾರಣೆ ಆರಂಭ.

2010: ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾಡ ಮತ್ತು ರಾಮ್‌ಲಲ್ಲಾ ಮೂರೂ ವಾರಸುದಾರರಿಗೆ ವಿವಾದಿತ ಜಾಗದ ಸಮಾನ ಹಂಚಿಕೆ ಮಾಡಿ ತೀರ್ಪು.

2011: ಅಯೋಧ್ಯೆ ಭೂ ವಿವಾದ ಕುರಿತ ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ತಡೆ.

2017: ಪರಸ್ಪರ ಸಂಧಾನ ಸಮ್ಮತಿ ಮೂಲಕ ವ್ಯಾಜ್ಯ ಇತ್ಯರ್ಥ ಪಡಿಸಿಕೊಳ್ಳಲು ಸಿಜೆಐ ಜೆ.ಎಸ್‌. ಖೇಹರ್‌ ಸಲಹೆ.

2017: ಅಲಹಾಬಾದ್‌ ಹೈಕೋರ್ಟ್‌ನ 1994ರ ತೀರ್ಪಿನ ವಿರುದ್ಧ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ತ್ರಿಸದಸ್ಯ ಪೀಠ ರಚನೆ.

2018: ತನ್ನ 1994ರ ತೀರ್ಪಿನ ಮರು ಪರಿಶೀಲನೆ ಕೋರಿದ ಅರ್ಜಿಗಳ ವಿಚಾರಣೆಯನ್ನು 5 ಸದಸ್ಯರ ವಿಸ್ತೃತ ಪೀಠಕ್ಕೆ ಒಪ್ಪಿಸಲು ಕೋರಿ ರಾಜೀವ್‌ ಧವನ್‌ ಅವರಿಂದ ಅರ್ಜಿ.

2019: ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ ನೇತೃತ್ವದ ಸಂಧಾನ ಸಮಿತಿಯ ಯತ್ನ ವಿಫಲ. ಈ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠದಿಂದ ನಲವತ್ತು ದಿನಗಳ ಕಾಲ ವಿಚಾರಣೆ

2019: ನವೆಂಬರ್ 9 - ಅಯೋಧ್ಯೆ ಅಂತಿಮ ತೀರ್ಪು ಪ್ರಕಟ, ವಿವಾದಿತ ಭೂಮಿ ರಾಮಲಲ್ಲಾ ಪಾಲು, ರಾಮ ಮಂದಿರ ನಿರ್ಮಾಣಕ್ಕೆ ಅನುಮತಿ.

English summary
BJP National President Jagat Prakash Nadda will visit Uttar Pradesh's Ayodhya on Wednesday for the first time after the Supreme Court's landmark judgment in the Ram Janmabhoomi case in 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X