ಎಸ್ಪಿ-ಬಿಎಸ್ಪಿ ಮೈತ್ರಿಯಿಂದ ಬಿಜೆಪಿಗೆ ಆತಂಕವಾಗಿದೆ: ಅಖಿಲೇಶ್

ನವದೆಹಲಿ, ಜನವರಿ 13: "ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ ಮಾಡಿಕೊಂಡಿದ್ದು ಬಿಜೆಪಿಗೆ ಆತಂಕವನ್ನುಂಟು ಮಾಡಿದೆ" ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಚುನಾವಣಾ ಪೂರ್ವ ಮೈತ್ರಿಯನ್ನು ಶನಿವಾರ ಎಸ್ಪಿ-ಬಿಎಸ್ಪಿ ಜಂಟಿ ಸುದ್ದಿಗೋಷ್ಠಿಯಲ್ಲಿ ಅಖಿಲೇಶ್ ಯಾದವ್ ಮತ್ತು ಮಾಯಾವತಿ ಘೋಷಿಸಿದ್ದಾರೆ.

BJP frustrated after SP-BSP alliance in Uttar Pradesh: Akhilesh Yadav

ಈ ಬೆಳವಣಿಗೆ ರಾಷ್ಟ್ರ ರಾಜಕಾರಣವನ್ನು ತಲ್ಲಣಗೊಳಿಸಿದ್ದು, ಬಿಜೆಪಿಗೆ ಈಗಾಗಲೇ ಸೋಲಿನ ಭಯ ಆರಂಭವಾಗಿದೆ ಎಂದು ಅಖಿಲೇಶ್ ಹೇಳಿದ್ದಾರೆ.

2019 ರ ಏಪ್ರಿಲ್ ಮೇ ತಿಂಗಳಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದಾಗಿ ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದವು. ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ 76 ಕ್ಷೇತ್ರಗಳಲ್ಲಿ ಎಸ್ಪಿ-ಬಿಎಸ್ಪಿ ಸ್ಪರ್ಧಿಸಲಿದ್ದು, ತಲಾ 38 ಕ್ಷೇತ್ರಗಳನ್ನು ಸಮಾನವಾಗಿ ಹಂಚಿಕೊಂಡಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+