ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಪಿಯಲ್ಲಿ ಹೋಳಿ, ದೀಪಾವಳಿಗೆ ಸರ್ಕಾರದಿಂದಲೇ ಉಚಿತ ಸಿಲಿಂಡರ್!

|
Google Oneindia Kannada News

ಲಕ್ನೋ, ಫೆಬ್ರವರಿ 19: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದರೆ ಹೋಳಿ ಮತ್ತು ದೀಪಾವಳಿ ಹಬ್ಬದ ದಿನ ಉಚಿತವಾಗಿ ಗ್ಯಾಸ್ ಸಿಲಿಂಡರ್ ಅನ್ನು ನೀಡುವುದಾಗಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.

ಉತ್ತರ ಪ್ರದೇಶ ಗೊಂಡಾದ ಕರ್ನಲ್ ಗಂಜ್ ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಚಾರ ನಡೆಸಿದರು. ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಯು ಅತಿಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಬಾರಿ ಮೊದಲ ಎರಡು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯು ಕಳೆದ ಬಾರಿಯಷ್ಟೇ ಸ್ಥಾನಗಳನ್ನು ಗೆದ್ದುಕೊಳ್ಳಲಿದೆ ಎಂದು ಚುನಾವಣಾ ವಿಶ್ಲೇಷಕರು ಹೇಳಿವೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಯುಪಿಯಲ್ಲಿ ಗೂಂಡಾರಾಜ್, ಮಾಫಿಯಾ ನಿಯಂತ್ರಣಕ್ಕಾಗಿ ಬಿಜೆಪಿ ಸರ್ಕಾರ ತನ್ನಿ ಎಂದ ಮೋದಿಯುಪಿಯಲ್ಲಿ ಗೂಂಡಾರಾಜ್, ಮಾಫಿಯಾ ನಿಯಂತ್ರಣಕ್ಕಾಗಿ ಬಿಜೆಪಿ ಸರ್ಕಾರ ತನ್ನಿ ಎಂದ ಮೋದಿ

ನರೇಂದ್ರ ಮೋದಿಯವರು ಭಾರತದ ಪ್ರಧಾನಮಂತ್ರಿಯಾದ ನಂತರದಲ್ಲಿ ಚೀನಾ ಮತ್ತು ಪಾಕಿಸ್ತಾನದ ನಡುವೆ ಪರಸ್ಪರ ಸ್ನೇಹ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸುತ್ತಿದ್ದಾರೆ. ದೇಶದ ಪ್ರಾಚೀನ ಇತಿಹಾಸವನ್ನು ಅಧ್ಯಯನ ಮಾಡದ ಅವರು, ಕನಿಷ್ಠ ಆಧುನಿಕ ಇತಿಹಾಸವನ್ನಾದರೂ ತಿಳಿದುಕೊಂಡಿರಬೇಕು ಎಂದು ರಾಜನಾಥ್ ಸಿಂಗ್ ಕಿಡಿ ಕಾರಿದ್ದಾರೆ.

BJP Govt will provide free LPG gas cylinder on the ocassion of Holi and Diwali every year in UP

ಇತಿಹಾಸದ ಬಗ್ಗೆ ಉಲ್ಲೇಖಿಸಿದ ರಾಜನಾಥ್ ಸಿಂಗ್:

"ಜವಾಹರಲಾಲ್ ನೆಹರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡ ಶಾಕ್ಸ್‌ಗಾಮ್ ಕಣಿವೆಯನ್ನು ಚೀನಾಕ್ಕೆ ಹಸ್ತಾಂತರಿಸಲಾಗಿತ್ತು. ಪಾಕಿಸ್ತಾನ್ ಆಕ್ರಮಿತ ಕಾಶ್ಮೀರದಲ್ಲಿ ಕಾರಕೋರಂ ಹೆದ್ದಾರಿ ನಿರ್ಮಾಣವಾದಾಗ ಇಂದಿರಾ ಗಾಂಧಿ ಪ್ರಧಾನಮಂತ್ರಿ ಆಗಿದ್ದರು. ಸಿಪಿಇಸಿ ನಿರ್ಮಾಣ ಪ್ರಾರಂಭವಾದಾಗ ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದರೇ ವಿನಃ ಮೋದಿ ಜಿ ಅಲ್ಲ," ಎಂದು ರಾಜನಾಥ್ ಸಿಂಗ್ ಹೇಳಿದರು.

ಯುಪಿಯಲ್ಲಿ ಹೋಳಿ ಹಬ್ಬದ ದಿನವೇ ಉಚಿತ ಸಿಲಿಂಡರ್:

ಉತ್ತರ ಪ್ರದೇಶದ ಔರೈಯಾದಲ್ಲಿ ಮಾತನಾಡಿದ ಅಮಿತ್ ಶಾ, ರೈತರಿಗೆ ಉಚಿತ ವಿದ್ಯುತ್ ಸರಬರಾಜು ಸೇರಿದಂತೆ ಹಲವು ಭರವಸೆಗಳನ್ನು ಘೋಷಿಸಿದರು. ಮಾರ್ಚ್ 10ರಂದು ಮತ ಎಣಿಕೆಯಿದೆ, 10ರಂದು ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ, ಮಾರ್ಚ್ 18ರ ಹೋಳಿ ಹಬ್ಬದ ದಿನ ಉಚಿತ ಗ್ಯಾಸ್ ಸಿಲಿಂಡರ್ ನಿಮ್ಮ ಮನೆಗೆ ತಲುಪುತ್ತದೆ. ಮುಂದಿನ 5 ವರ್ಷಗಳವರೆಗೆ ಯಾವುದೇ ರೈತರು ವಿದ್ಯುತ್ ಬಿಲ್ ಪಾವತಿಸಬೇಕಾಗಿಲ್ಲ ಎಂದು ಶಾ ಹೇಳಿದರು.

ಬಿಜೆಪಿ ತನ್ನ ಯುಪಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಪ್ರತಿಬಿಂಬಿಸುತ್ತದೆ. ರೈತರಿಗೆ ಉಚಿತ ವಿದ್ಯುತ್, ಗೋಧಿ ಮತ್ತು ಅಕ್ಕಿಗೆ ಕನಿಷ್ಠ ಬೆಂಬಲ ಬೆಲೆ, ಕಬ್ಬಿನ ಗಿರಣಿ ಆಧುನೀಕರಣದಂತಹ ಯೋಜನೆಗಳನ್ನು ಪಕ್ಷವು ಭರವಸೆ ನೀಡಿದೆ. ಅಖಿಲೇಶ್ ವಿರುದ್ಧ ವಾಗ್ದಾಳಿ ನಡೆಸಿದ ಶಾ, ರಾಜ್ಯದಲ್ಲಿ ಬಿಜೆಪಿ ಹೆಣ್ಣು ಮಕ್ಕಳಿಗೆ ಸ್ಕೂಟಿ ನೀಡಿದರೆ ಇಂಧನ ನೀಡುವುದಾಗಿ ಎಸ್‌ಪಿ ಅಧ್ಯಕ್ಷರು ಹೇಳಿದ್ದಾರೆ. ಆದರೆ ಎಸ್‌ಪಿ ಅಧಿಕಾರಕ್ಕೆ ಬಂದರೆ ಸ್ಕೂಟಿ ಅಥವಾ ಇಂಧನ ಇರುವುದಿಲ್ಲ ಎಂದು ತಿರುಗೇಟು ನೀಡಿದರು.

ಪ್ರತಿ ತಿಂಗಳು, 1 ಕೆಜಿ ತುಪ್ಪ, ಉಚಿತ ಪಡಿತರ, ಸಿಲಿಂಡರ್ ವಿತರಣೆ:

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು ಬಡವರಿಗೆ ಒಂದು ಕೆಜಿ ತುಪ್ಪ ಹಾಗೂ ಉಚಿತ ಪಡಿತರವನ್ನು ನೀಡುವುದಾಗಿ ಸಮಾಜವಾದಿಲ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡಾ ಆಶ್ವಾಸನೆ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಅಮಿತ್ ಶಾ ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಹೇಳಿದ್ದಾರೆ. ರಾಯ್ ಬರೇಲಿಯಲ್ಲಿ ಮಾತನಾಡಿದ ಅಖಿಲೇಶ್ ಯಾದವ್, "ರಾಜ್ಯದಲ್ಲಿ ಚುನಾವಣೆವರೆಗೂ ಮಾತ್ರ ಬಡವರು ಉಚಿತವಾಗಿ ಪಡಿತರ ಪಡೆಯುತ್ತಾರೆ, ತದನಂತರ ಪಡಿತರ ಸಿಗುವುದಿಲ್ಲ. ಈ ಮೊದಲು ನವೆಂಬರ್ ತಿಂಗಳವರೆಗೂ ಪಡಿತರವನ್ನು ನೀಡುವುದಕ್ಕೆ ನಿರ್ಧರಿಸಲಾಗಿತ್ತು. ಆದರೆ ಯುಪಿ ಚುನಾವಣೆ ಘೋಷಣೆಯಾದ ಹಿನ್ನೆಲೆ ಅದನ್ನು ಮಾರ್ಚ್ ತಿಂಗಳವರೆಗೂ ವಿಸ್ತರಣೆ ಮಾಡಲಾಯಿತು," ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದರು.

English summary
BJP Govt will provide free LPG gas cylinder on the ocassion of Holi and Diwali every year in Uttar Pradesh, Says Defence Minister Rajnath Singh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X