• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉತ್ತರ ಪ್ರದೇಶ: ಗುಂಡು ಹಾರಿಸಿ ಬಿಜೆಪಿ ಮುಖಂಡನ ಹತ್ಯೆ

|

ಲಕ್ನೋ, ಅಕ್ಟೋಬರ್ 16: ಬಿಜೆಪಿಯ ಮುಖಂಡ ಡಿಕೆ ಗುಪ್ತಾ ಅವರನ್ನು ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಶುಕ್ರವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಡಿಕೆ ಗುಪ್ತಾ ಅವರ ಮೇಲೆ ಗುಂಡಿನ ಸುರಿಮಳೆಗರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಪ್ತಾ ಫಿರೋಜಾಬಾದ್ ಮಂಡಲ್ (ವಾರ್ಡ್) ಬಿಜೆಪಿಯ ಉಪಾಧ್ಯಕ್ಷರಾಗಿದ್ದರು.

ದಾವಣಗೆರೆ; ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ್ದವನಿಗೆ ಜೀವಾವಧಿ ಶಿಕ್ಷೆ

ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ. ಶುಕ್ರವಾರ ಹಗಲಿನ ವೇಳೆ ತುಂಡ್ಲಾ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲು ಅವರು ತೆರಳಿದ್ದರು. ತುಂಡ್ಲಾ ಕ್ಷೇತ್ರಕ್ಕೆ ನವೆಂಬರ್ 3ರಂದು ಉಪ ಚುನಾವಣೆ ನಿಗದಿಯಾಗಿದೆ.

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸುವ ಸಂದರ್ಭದಲ್ಲಿ ಅವರು ದಿನಸಿ ಅಂಗಡಿಯೊಂದರಲ್ಲಿ ಇದ್ದರು. ಅವರು ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಗಾಯಗೊಂಡಿದ್ದ ಗುಪ್ತಾ ಅವರನ್ನು ಆಗ್ರಾದ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಅವರು ಆಗಲೇ ಮೃತಟಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

English summary
BJP Mandal Vice President DK Gupta was shot dead by bike borne assailants on Uttra Pradesh's Firozabad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X