ಕಾನೂನು ವಿದ್ಯಾರ್ಥಿನಿ ಅತ್ಯಾಚಾರ: ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದಗೆ ಜಾಮೀನು

ಅಲಹಾಬಾದ್, ಫೆಬ್ರವರಿ 3: ಕಾನೂನು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ, ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದಗೆ ಅಲಹಾಬಾದ್ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಚಿನ್ಮಯಾನಂದ ಅವರ ಟ್ರಸ್ಟ್ ಉತ್ತರ ಪ್ರದೇಶದ ಷಹಜಾನ್ಪುರದಲ್ಲಿ ಎಸ್ ಎಸ್ ಕಾನೂನು ಕಾಲೇಜು ನಡೆಸುತ್ತಿದ್ದು, ಅವರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬರು ಆರೋಪಿಸಿದ್ದರು. ಚಿನ್ಮಯಾನಂದ ಅವರನ್ನು ಕಳೆದ ಸೆಪ್ಟೆಂಬರ್‌ನಲ್ಲಿ ಬಂಧಿಸಲಾಗಿತ್ತು.

72 ವರ್ಷದ ಚಿನ್ಮಯಾನಂದ ವಿರುದ್ಧ ಐಪಿಸಿ ಸೆಕ್ಷನ್ 376 ಸಿ (ತಮ್ಮ ಅಧಿಕಾರ, ಸ್ಥಾನದ ಲಾಭ ಬಳಸಿಕೊಂಡು ಲೈಂಗಿಕ ಸಂಪರ್ಕ ಪಡೆಯುವುದು) ಸೆಕ್ಷನ್ 506 (ಬೆದರಿಕೆ ಅಪರಾಧ) ಸೇರಿದಂತೆ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಸೆಕ್ಷನ್ 354ಡಿ, ಸೆಕ್ಷನ್ 342ರ ಅಡಿಯಲ್ಲಿ ಸಹ ದೂರು ದಾಖಲು ಮಾಡಲಾಗಿತ್ತು.

BJP Leader Swami Chinmayanand Granted Bail In Law Student Rape Case

ಆಗಸ್ಟ್ 24ರಂದು ವಿದ್ಯಾರ್ಥಿನಿ ನಾಪತ್ತೆಯಾದ ಬಳಿಕ ಈ ಘಟನೆ ಬೆಳಕಿಗೆ ಬಂದಿತ್ತು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದ ಯುವತಿ, 'ಸಂತ ಸಮುದಾಯ ಹಿರಿಯ ಮುಖಂಡರೊಬ್ಬರು' ತಮ್ಮ ಮೇಲೆ ದೌರ್ಜನ್ಯ ಎಸಗುತ್ತಿದ್ದು, ಕೊಲ್ಲುವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿದ್ದರು. ಚಿನ್ಮಯಾನಂದ ತಮ್ಮ ಮಗಳ ಮೇಲೆ ಲೈಂಗಿಕ ಕಿರುಕುಳ ಎಸಗುತ್ತಿದ್ದಾರೆ ಎಂದು ಯುವತಿಯ ತಂದೆ ದೂರು ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+