ವಿಡಿಯೋ; ಕೋವಿಡ್ ತಡೆಗೆ ಗೋಮೂತ್ರ ಸೇವನೆ ಸಲಹೆ ಕೊಟ್ಟ ಶಾಸಕ

ಲಕ್ನೋ, ಮೇ 09; ಕೋವಿಡ್ ಸೋಂಕು ತಡೆಯಲು ಖಾಲಿ ಹೊಟ್ಟೆಯಲ್ಲಿ ಜನರು ಗೋಮೂತ್ರ ಸೇವಿಸಿಬೇಕು ಎಂದು ಬಿಜೆಪಿ ಶಾಸಕರು ಸಲಹೆ ನೀಡಿದ್ದಾರೆ. ತಾವೇ ಗೋಮೂತ್ರ ಕುಡಿದು ಜನರಿಗೆ ಸಲಹೆ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶ ರಾಜ್ಯದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಗೆ ಗೋಮೂತ್ರ ಸೇವಿಸಬೇಕು ಎಂದು ಜನರಿಗೆ ಮಾಹಿತಿ ನೀಡಿದ್ದಾರೆ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮೂರು ಮುಚ್ಚಳ ಗೋಮೂತ್ರವನ್ನು ಒಂದು ಲೋಟ ನೀರಿನಲ್ಲಿ ಬೆರೆಸಿ ಸೇವಿಸಿಬೇಕು ಎಂದು ಹೇಳಿದ್ದಾರೆ.

"ತಾನು ವಿಜ್ಞಾನವನ್ನು ನಂಬದಿದ್ದರೂ ಗೋಮೂತ್ರವನ್ನು ನಂಬುತ್ತೇನೆ. ಗೂಮೂತ್ರ ಸೇವಿಸಿದ ಬಳಿಕ ಅರ್ಧಗಂಟೆ ಬೇರೆ ಏನೂ ಸೇವಿಸಬಾರದು" ಎಂದು ಶಾಸಕರು ವಿಡಿಯೋದಲ್ಲಿ ತಿಳಿಸಿದ್ದಾರೆ.

BJP MLA Surendra Singh Recommended People To Drink Cow Urine To Protect From COVID

"ತಾನು ಪ್ರತಿನಿತ್ಯ 18 ಗಂಟೆ ಕೆಲಸ ಮಾಡುತ್ತೇನೆ. ಇದಕ್ಕೆ ಗೋಮೂತ್ರದಿಂದ ಸಿಕ್ಕಿರುವ ಆರೋಗ್ಯವೇ ಕಾರಣವಾಗಿದೆ" ಎಂದು ಶಾಸಕರು ವಿಡಿಯೋದಲ್ಲಿ ವಿವರಣೆ ನೀಡಿದ್ದಾರೆ. ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾಗಿವೆ.

ಉತ್ತರ ಪ್ರದೇಶದಲ್ಲಿ ಶನಿವಾರ 26,636 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 14,80,315ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,45,736.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+