• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಬಿಜೆಪಿ ಶಾಸಕರಿಂದ ಅಯೋಧ್ಯೆಯಲ್ಲಿ ಅಕ್ರಮ ಭೂಮಿ ಮಾರಾಟ

|
Google Oneindia Kannada News

ಲಕ್ನೋ, ಆಗಸ್ಟ್ 07: ಅಯೋಧ್ಯೆಯ ಮೇಯರ್, ಸ್ಥಳೀಯ ಬಿಜೆಪಿ ಶಾಸಕ ಮತ್ತು ಪಕ್ಷದ ಮಾಜಿ ಶಾಸಕ ಸೇರಿದಂತೆ 40 ಜನರು ಅಕ್ರಮವಾಗಿ ನಿವೇಶನಗಳನ್ನು ಮಾರಾಟ ಮಾಡಿದ್ದಾರೆ ಎಂದು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಪಟ್ಟಿ ಬಿಡುಗಡೆ ಮಾಡಿದೆ.

ಅಕ್ರಮ ನಿವೇಶನಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಿದ್ದಾರೆ ಎಂದು ಪ್ರಾಧಿಕಾರ ಆರೋಪಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿ ಎರಡು ವರ್ಷಗಳಾಗಿವೆ.

2024ರ ವೇಳೆಗೆ ಅಯೋಧ್ಯೆ ರಾಮಮಂದಿರ ಕಾಮಗಾರಿ ಪೂರ್ಣ2024ರ ವೇಳೆಗೆ ಅಯೋಧ್ಯೆ ರಾಮಮಂದಿರ ಕಾಮಗಾರಿ ಪೂರ್ಣ

ಇಂಜಿನಿಯರ್‌ಗಳ ಪ್ರಕಾರ 40 ಪ್ರತಿಶತದಷ್ಟು ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ದೇವಾಲಯದ ಮೊದಲ ಮಹಡಿ 2024ರ ಆರಂಭದಲ್ಲಿ ಸಿದ್ಧವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ (ಎಡಿಎ) 40 ಆರೋಪಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಇದರಲ್ಲಿ ಸ್ಥಳೀಯ ಬಿಜೆಪಿ ಶಾಸಕ ವೇದ್ ಪ್ರಕಾಶ್ ಗುಪ್ತಾ, ಪಕ್ಷದ ಮಾಜಿ ಶಾಸಕ ಗೋರಖನಾಥ್ ಮತ್ತು ಮೇಯರ್ ರಿಷಿಕೇಶ್ ಉಪಾಧ್ಯಾಯ ಅವರ ಹೆಸರುಗಳಿವೆ.

ಸುಲ್ತಾನ್ ಅನ್ಸಾರಿ ಮತ್ತು ಅವರ ತಂದೆ ನನ್ಹೆ ಮಿಯಾನ್ ಅವರು 2 ಕೋಟಿ ರೂಪಾಯಿ ಮೌಲ್ಯದ ಭೂಮಿಯಿಂದ 18 ಕೋಟಿ ರೂಪಾಯಿಗಳನ್ನು ಗಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇಯರ್ ರಿಷಿಕೇಶ್ ಉಪಾಧ್ಯಾಯ ಮತ್ತು ಶಾಸಕ ವೇದ್ ಪ್ರಕಾಶ್ ಗುಪ್ತಾ ಅವರು ತಾವು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ. ಪ್ರಾಧಿಕಾರವು ಬಿಡುಗಡೆ ಮಾಡಿದ ಆಪಾದಿತ ಆರೋಪಿಗಳ ಪಟ್ಟಿಯಲ್ಲಿ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ. ಮಿಲ್ಕಿಪುರದ ಬಿಜೆಪಿಯ ಮಾಜಿ ಶಾಸಕ ಗೋರಖನಾಥ್ ಬಾಬಾ ಅವರ ಹೆಸರೂ ಪಟ್ಟಿಯಲ್ಲಿದೆ.

BJP MLAs are Illegally Selling Plots In Ayodhya: report

ಈ ವರ್ಷದ ಆರಂಭದಲ್ಲಿ ನಡೆದ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಪ್ರತಿಸ್ಪರ್ಧಿ ಪಕ್ಷಗಳು ಅಯೋಧ್ಯೆಯಲ್ಲಿ ಅಕ್ರಮ ಭೂಮಿ ಖರೀದಿ ಮತ್ತು ಮಾರಾಟದ ವಿಷಯವನ್ನು ಹೆಚ್ಚು ಚರ್ಚೆಗೆ ತಂದಿದ್ದವು. ಈ ಬಗ್ಗೆ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ಸ್ಥಳೀಯ ಸಂಸದ ಲಲ್ಲು ಸಿಂಗ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಕೂಡ ಬರೆದಿದ್ದರು.

ಆರೋಪಿಗಳ ಪಟ್ಟಿ ಬಹಿರಂಗವಾಗುತ್ತಿದ್ದಂತೆ ಸಮಾಜವಾದಿ ಪಕ್ಷ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

"ಅಯೋಧ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಪದ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯ ಮೇಯರ್, ಸ್ಥಳೀಯ ಶಾಸಕ ಮತ್ತು ಮಾಜಿ ಶಾಸಕರು ಭೂ ಮಾಫಿಯಾದೊಂದಿಗೆ ಸೇರಿಕೊಂಡು ಅಕ್ರಮ ಕಾಲೋನಿಗಳನ್ನು ಸ್ಥಾಪಿಸುತ್ತಿದ್ದಾರೆ. ಇಲಾಖೆಗಳೊಂದಿಗೆ ಶಾಮೀಲಾಗಿ 30 ಅಕ್ರಮ ಕಾಲೋನಿಗಳನ್ನು ಸ್ಥಾಪಿಸಿ, ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಆದಾಯವನ್ನು ವಂಚಿಸಲಾಗಿದೆ. ಈ ಪ್ರಕರಣದ ತನಿಖೆಯಾಗಬೇಕು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು" ಎಂದು ಎಸ್ಪಿ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ತಿಳಿಸಿದ್ದಾರೆ.

English summary
Ayodhya Development Authority (ADA) has released a list of 40 illegal colonisers that includes the Ayodhya's mayor, a local BJP MLA and a former party legislator. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X