ಯುಪಿ ಚುನಾವಣೆ: 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

ಲಕ್ನೋ, ಫೆಬ್ರವರಿ 1: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷವು 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಂಗಳವಾರ ಬಿಜೆಪಿ ಪ್ರಕಟಿಸಿದ ಪಟ್ಟಿಯಲ್ಲಿ ಲಕ್ನೋ ಕಂಟೇನ್ಮೆಂಟ್ ವಿಧಾನಸಭೆ ಕ್ಷೇತ್ರದಿಂದ ಬ್ರಿಜೇಶ್ ಪಠಾಕ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಮಹಿಳಾ ಕಲ್ಯಾಣ ಖಾತೆ ರಾಜ್ಯ ಸಚಿವೆ (ಸ್ವತಂತ್ರ ಉಸ್ತುವಾರಿ) ಸ್ವಾತಿ ಸಿಂಗ್ ಅವರಿಗೆ ಸರೋಜಿನಿ ನಗರದಿಂದ ಟಿಕೆಟ್ ನೀಡಿಲ್ಲ. ಅವರ ಬದಲಿಗೆ ಅದೇ ಕ್ಷೇತ್ರದಿಂದ ರಾಜೇಶ್ವರ್ ಸಿಂಗ್ ಬಿಜೆಪಿಯ ಟಿಕೆಟ್ ಪಡೆದುಕೊಂಡಿದ್ದಾರೆ.

ವಿಧಾನಸಭಾಧ್ಯಕ್ಷ ಹೃದಯನಾರಾಯಣ ದೀಕ್ಷಿತ್ ಅವರಿಗೂ ಭಾರತೀಯ ಜನತಾ ಪಕ್ಷದ ಟಿಕೆಟ್ ನಿರಾಕರಿಸಲಾಗಿದೆ. ಭಗವಂತನಗರ ವಿಧಾನಸಭಾ ಕ್ಷೇತ್ರದಿಂದ ಅಶುತೋಷ್ ಶುಕ್ಲಾ ಅವರಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿಯ 17 ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾರು ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ ಎಂಬುದರ ಪಟ್ಟಿಯನ್ನು ಮುಂದೆ ನೀಡಲಾಗಿದೆ.

BJP Releases 17 Candidates List for UP Assembly Election

ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಮತದಾನ
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.


ಈ ಹಿಂದೆ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+