ಯುಪಿ ಮೊದಲ ಹಂತ ಚುನಾವಣೆ: ಬಿಜೆಪಿಯಿಂದ ಯಾರಿಗೆಷ್ಟು ಸ್ಥಾನ?

ಲಕ್ನೋ, ಜನವರಿ 15: ಉತ್ತರ ಪ್ರದೇಶದಲ್ಲಿ ಮುಂದಿನ ತಿಂಗಳು ನಡೆಯಲಿರುವ ಮೊದಲ ಹಂತದ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ 107 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಗೋರಖ್‌ಪುರ ನಗರದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕಣಕ್ಕಿಳಿಸಿದೆ.

ಮೊದಲ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿರುವ ಸ್ಥಾನಗಳಿಗೆ ಪಕ್ಷವು ಅಭ್ಯರ್ಥಿಗಳನ್ನು ಹೆಸರಿಸಿದೆ. ಬಿಜೆಪಿಯ ಉತ್ತರ ಪ್ರದೇಶ ಉಸ್ತುವಾರಿ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರೊಂದಿಗೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಟ್ಟಿ ಬಿಡುಗಡೆ ಮಾಡಿದರು.

ಉತ್ತರ ಪ್ರದೇಶ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿಯಿಂದ ಮಹಿಳೆಯರಿಗೆ 10 ಸ್ಥಾನಗಳು, ಒಬಿಸಿ ಅಭ್ಯರ್ಥಿಗಳಿಗೆ 44 ಸ್ಥಾನಗಳನ್ನು ಮತ್ತು ಪರಿಶಿಷ್ಟ ಜಾತಿಗೆ 19 ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ.

BJP Shares 10 seats for women, 44 seats for OBC candidates and 19 seats for SC For UP Election

ಗೋರಖ್‌ಪುರ ಅಖಾಡಕ್ಕೆ ಯೋಗಿ ಆದಿತ್ಯನಾಥ್:

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್‌ಪುರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಸಿರತುದಿಂದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸ್ಪರ್ಧಿಸಲಿದ್ದಾರೆ ಎಂದು ಪ್ರಧಾನ್ ಹೇಳಿದ್ದಾರೆ. ಆದಿತ್ಯನಾಥ್ ಈ ಮೊದಲು ಗೋರಖ್‌ಪುರದಿಂದ ಐದು ಬಾರಿ ಲೋಕಸಭೆ ಸದಸ್ಯರಾಗಿದ್ದು, ಪ್ರಸ್ತುತ ರಾಜ್ಯದ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಚುನಾವಣೆ ಪೈಪೋಟಿ:

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.

2017 ಉತ್ತರ ಪ್ರದೇಶ ಚುನಾವಣೆ ಫಲಿತಾಂಶ

ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+