• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯುಪಿ, ಉತ್ತರಾಖಂಡ, ಗೋವಾ ಮಣಿಪುರದಲ್ಲಿ ಬಿಜೆಪಿ ಸರ್ಕಾರ: ನರೇಂದ್ರ ಸಿಂಗ್ ತೋಮರ್

|
Google Oneindia Kannada News

ಲಕ್ನೋ, ಜನವರಿ 14: ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಶಾಸಕರು ರಾಜೀನಾಮೆ ನೀಡುತ್ತಿರುವುದು ದೊಡ್ಡ ವಿಷಯವೇ ಅಲ್ಲ ಎಂದು ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿಗೆ ಎಲ್ಲ ಕಡೆಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಜನರು ಭಾರತೀಯ ಜನತಾ ಪಕ್ಷವನ್ನು ಆಶೀರ್ವದಿಸುತ್ತಾರೆ. ಮುಂಬರುವ ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿಯು ಸರ್ಕಾರವನ್ನು ರಚಿಸುವಲ್ಲಿ ಯಶಸ್ವಿಯಾಗಲಿದೆ ಎಂದು ನರೇಂದ್ರ ಸಿಂಗ್ ತೋಮರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ತೊರೆದ 9ರಲ್ಲಿ 8 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಉತ್ತರ ಪ್ರದೇಶದಲ್ಲಿ ಬಿಜೆಪಿ ತೊರೆದ 9ರಲ್ಲಿ 8 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ದಿನಾಂಕ ಪ್ರಕಟಿಸಿ ಆಗಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

ಉತ್ತರ ಪ್ರದೇಶದಲ್ಲಿ ರಾಜೀನಾಮೆ ಸರಣಿ:

ಉತ್ತರ ಪ್ರದೇಶದಲ್ಲಿ ಕಳೆದ ಮಂಗಳವಾರದಿಂದ ಮೂವರು ಸಚಿವರು ಸೇರಿದಂತೆ 10 ಮಂದಿ ಬಿಜೆಪಿ ಶಾಸಕರು ಪಕ್ಷದಿಂದ ಹೊರ ನಡೆದಿದ್ದಾರೆ. ಸರ್ಕಾರದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ನಂತರದಲ್ಲಿ ಎಲ್ಲ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಮಂಗಳವಾರ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ಸಲ್ಲಿಸಿದ ದಿನವೇ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಭಗವತಿ ಸಾಗರ್, ರೌಷನ್ ಲಾಲ್ ವರ್ಮಾ ಮತ್ತು ಬ್ರಿಜೇಶ್ ಪ್ರಜಾಪತಿ ಬಿಜೆಪಿಗೆ ಬಾಯ್ ಬಾಯ್ ಹೇಳಿದರು.

ಬುಧವಾರ ಸರ್ಕಾರದ ಮತ್ತೊಬ್ಬ ಸಚಿವ ದಾರಾ ಸಿಂಗ್ ಚೌಹಾಣ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅದೇ ದಿನ ಶಾಸಕ ಅವತಾರ್ ಸಿಂಗ್ ಬಂಧನ ಬಿಜೆಪಿಯಿಂದ ಹೊರ ಬಂದರು. ಗುರುವಾರವೂ ಶಾಸಕರ ರಾಜೀನಾಮೆ ಸರಣಿ ಮುಂದುವರಿಯಿತು. ಸಚಿವ ಧರಂ ಸಿಂಗ್ ಸೈನಿ ಹಾಗೂ ಇತರೆ ಮೂವರು ಬಿಜೆಪಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ವಿನಯ್ ಸಾಕ್ಯಾ, ಮುಕೇಶ್ ವರ್ಮಾ ಮತ್ತು ಬಾಲಾ ಅವಸ್ತಿ ಪಕ್ಷದಿಂದ ಹೊರ ನಡೆದರು. ಇದೇ ದಿನ ಬಿಜೆಪಿ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ಅಪ್ನಾ ದಳ ಶಾಸಕ ಚೌಧರಿ ಅಮರ್ ಸಿಂಗ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

2017ರ ಚುನಾವಣೆ ಫಲಿತಾಂಶ:

ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

English summary
BJP will be successful in forming govt in Uttar pradesh, Uttarakhand, Goa and Manipur: Union Minister Narendra Singh Tomar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X